ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಸಂಸದ ರಾಘವೇಂದ್ರ ಭವಿಷ್ಯ

By Kannadaprabha News  |  First Published Sep 1, 2023, 2:20 AM IST

ಸರ್ಕಾರದ ಬುಡ ಅಲುಗಾಡುತ್ತಿದ್ದು, ಈ ಕಾರಣದಿಂದ ಆಪರೇಷನ್‌ಗೆ ಮೊರೆ ಹೋಗಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. 


ಸೊರಬ (ಸೆ.01): ಸರ್ಕಾರದ ಬುಡ ಅಲುಗಾಡುತ್ತಿದ್ದು, ಈ ಕಾರಣದಿಂದ ಆಪರೇಷನ್‌ಗೆ ಮೊರೆ ಹೋಗಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಪಟ್ಟಣದ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಪಕ್ಷದ ಬೆಂಬಲಿತ ನೂತನ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಮಳೆ ಇಲ್ಲದೇ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಸ್ಥಿತಿ ಚಿಂತಜನಕವಾಗಿದೆ. ದೇವರನ್ನೇ ನಂಬದವರು ಇಂದು ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿಗೆ ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಬೇಕಿದೆ. ಅವರ ದುರಂಕಾರದ ನಡೆಯಿಂದ ರಾಜ್ಯದ ಜನತೆ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದರು.

Tap to resize

Latest Videos

ಸುಪ್ರೀಂಕೋರ್ಟ್​ನಲ್ಲಿ ನಾಳೆ ಕಾವೇರಿ ನೀರು ವಿಚಾರಣೆ ಅನುಮಾನ?: ಯಾಕೆ ಗೊತ್ತಾ!

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿಯೊಬ್ಬರಿಗೂ ಅರಿವಾಗುವಂತೆ ತಿಳಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕೆಲಸ ಕಾರ್ಯಗಳನ್ನು ತಪ್ಪು ದಾರಿಗೆ ತರುವ ಪ್ರಯತ್ನಗಳು ಆಡಳಿತ ಪಕ್ಷದವರಿಂದ ನಡೆಯುತ್ತಿದೆ. ಇದಕ್ಕೆ ಕಾರ್ಯಕರ್ತರು ಆಸ್ಪದ ನೀಡಬಾರದು ಎಂದ ಅವರು, ಅಡಕೆ ಬೆಳೆಗಾರರು ಯಾವುದೇ ಆತಂಕಪಡುವ ಸ್ಥಿತಿ ಇಲ್ಲ. ಕೇಂದ್ರ ಸರ್ಕಾರ ಅಡಕೆ ಬೆಳಕೆಗಾರರ ಹಿತಕಾಯಲಿದೆ ಎಂದರು.

ಗ್ರಾಮ ಪಂಚಾಯಿತಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ಸಂದರ್ಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಪಕ್ಷದ ಬೆಂಬಲಿತ ಸದಸ್ಯರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕ್ಷೇತ್ರದಲ್ಲಿ 15 ಪಂಚಾಯಿತಿಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷ ಸಂಘಟಿಸುವಂತೆ ಕಾಳಜಿ ವಹಿಸಬೇಕು. ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು. ಇದರಿಂದ ದೇಶ ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ದೊರೆಯಲು ಸಾಧ್ಯ. ಬಿ.ಎಸ್. ಯಡಿಯೂರಪ್ಪ ಅವರು ಜಾರಿಗೆ ತಂದಿದ್ದ ಭಾಗ್ಯಲಕ್ಷೀ ಯೋಜನೆಯ ಫಲಾನುಭವಿಗಳ ಖಾತೆಗೆ ಶೀಘ್ರದಲ್ಲಿ ಹಣ ಜಮೆಯಾಗಲಿದೆ ಎಂದರು.

ದತ್ತಪೀಠವನ್ನ ಬೇಲಿ ರಹಿತ ಮಾಡುವುದೇ ನಮ್ಮ ಸಂಕಲ್ಪ: ಶೋಭಾ ಕರಂದ್ಲಾಜೆ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ವಿಭಾಗಿಯ ಪ್ರಮುಖ ಗಿರೀಶ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಪುರಸಭೆ ಸದಸ್ಯರಾದ ಎಂ.ಡಿ. ಉಮೇಶ್, ಪ್ರಭು ಮೇಸ್ತ್ರಿ, ಜಯಲಕ್ಷ್ಮಿ, ಯು. ನಟರಾಜ, ಮುಖಂಡರಾದ ಡಾ. ಎಚ್.ಇ. ಜ್ಞಾನೇಶ್, ಗುರುಕುಮಾರ್ ಪಾಟೀಲ್, ಎಂ.ನಾಗಪ್ಪ, ಎಂ.ಆರ್. ಪಾಟೀಲ್, ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಸುರೇಶ್ ಉದ್ರಿ, ಕೀರ್ತಿರಾಜ್, ವಸುಂಧರಾ ಭಟ್, ಡಿ. ಶಿವಯೋಗಿ, ಆಶೀಕ್ ನಾಗಪ್ಪ ಮೊದಲಾದವರು ಹಾಜರಿದ್ದರು.

click me!