'ಸಿಎಂಗೆ ವಿರೋಧ ಪಕ್ಷದ ನಾಯಕ ಬದಲಾವಣೆ ಕನಸು ಬಿದ್ದಿರಬೇಕು’

Kannadaprabha News   | Asianet News
Published : Nov 07, 2020, 08:28 AM IST
'ಸಿಎಂಗೆ ವಿರೋಧ ಪಕ್ಷದ ನಾಯಕ ಬದಲಾವಣೆ ಕನಸು ಬಿದ್ದಿರಬೇಕು’

ಸಾರಾಂಶ

ವಿರೋಧ ಪಕ್ಷದ ನಾಯಕರನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್‌ನ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಹೈಕಮಾಂಡ್‌ನಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ. ಅಂತಹ ಅನಿವಾರ್ಯತೆಯೂ ಸೃಷ್ಟಿಯಾಗಿಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಅವರನ್ನು ಬದಲಿಸುತ್ತಾರೆ ಎಂದು ಹೇಳಿರುವ ಯಡಿಯೂರಪ್ಪ ಅವರು ಹಗಲು ಕನಸು ಕಂಡಿರಬೇಕು ಎಂದು ಲೇವಡಿ ಮಾಡಿದ ಡಿ. ಕೆ. ಸುರೇಶ

ಬೆಂಗಳೂರು(ನ.07): ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕರನ್ನು ಬದಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹಗಲು ಕನಸು ಬಿದ್ದಿರಬೇಕು ಎಂದು ಸಂಸದ ಡಿ.ಕೆ. ಸುರೇಶ್‌ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್‌ನ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಹೈಕಮಾಂಡ್‌ನಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ. ಅಂತಹ ಅನಿವಾರ್ಯತೆಯೂ ಸೃಷ್ಟಿಯಾಗಿಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಅವರನ್ನು ಬದಲಿಸುತ್ತಾರೆ ಎಂದು ಹೇಳಿರುವ ಯಡಿಯೂರಪ್ಪ ಅವರು ಹಗಲು ಕನಸು ಕಂಡಿರಬೇಕು ಎಂದು ಲೇವಡಿ ಮಾಡಿದರು.

ಬಿಜೆಪಿ ನಾಯಕರು ಬಹಿರಂಗವಾಗಿಯೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮೂಲಕ ಮುಖ್ಯಮಂತ್ರಿಗಳ ಬದಲಿಸುವ ಸುದ್ದಿ ಸುಳ್ಳಲ್ಲ ಎಂದು ಸಮರ್ಥನೆ ನೀಡಿದಂತಿದೆ. ಆದರೆ ಸಿದ್ದರಾಮಯ್ಯ ಅವರ ಬದಲಾವಣೆ ಮಾಡಲಾಗುತ್ತದೆ ಎಂದು ಒಬ್ಬ ಕಾಂಗ್ರೆಸ್‌ ಶಾಸಕರೂ ಮಾತನಾಡಿಲ್ಲ ಎಂದು ಹೇಳಿದರು.

ಸಂಸದ ಡಿ.ಕೆ.ಸುರೇಶ್ ವಿರುದ್ಧ ಆಕ್ರೋಶ : 'ಕಾಲ ಬಂದಾಗ ಉತ್ತರ ಕೊಡ್ತೀನಿ'

ಮುನಿರತ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲ್ಲ

ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಅಗತ್ಯವಾದರೆ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದೆ. ಇದೀಗ ಚುನಾವಣೆ ಮುಗಿದಿರುವುದರಿಂದ ಅದರ ಅಗತ್ಯವಿಲ್ಲ ಎಂದು ಡಿ.ಕೆ. ಸುರೇಶ್‌ ತಿಳಿಸಿದರು. ಮುಂದೆ ಅಗತ್ಯವಾದರೆ ಬಿಡುಗಡೆ ಮಾಡುತ್ತೇವೆ ಸದ್ಯಕ್ಕೆ ಅದರ ಅಗತ್ಯವಿಲ್ಲ. ಹೀಗಾಗಿ ಮಾಡುವುದಿಲ್ಲ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!