ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.
ಹೊಸಕೋಟೆ (ಜೂ.20): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು. ನಗರದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕ ಶಿಸ್ತು ಕಾಪಾಡಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ಈಗ ಖಾಲಿಯಾಗಿರುವ ಖಜಾನೆ ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರಿಂದ ಸುಲಿಗೆ ಮಾಡಲು ಹೊರಟಿದ್ದಾರೆ.
ಕಾಂಗ್ರೆಸ್ ಸರ್ಕಾರ ಈಗಾಗಲೇ ಮದ್ಯ, ಸ್ಟಾಂಪ್ ಡ್ಯೂಟಿ, ವಿದ್ಯುತ್, ಹಾಲಿನ ದರ ಸೇರಿದಂತೆ ಎಲ್ಲ ದಿನಬಳಕೆ ವಸ್ತುಗಳ ದರಗಳನ್ನು ಏರಿಕೆ ಮಾಡಿದೆ. ಈಗ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಮತ್ತೊಮ್ಮೆ ಬಡವರಿಗೆ, ಮಾಧ್ಯಮ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಿದೆ. ಕಾಂಗ್ರೆಸ್ ಸರ್ಕಾರ ಎನ್‌ಡಿಎಗೆ ಮತ ನೀಡಿದ ಕನ್ನಡಿಗರ ವಿರುದ್ಧ ಸಿಟ್ಟಿನಿಂದ ದ್ವೇಷ ರಾಜಕಾರಣ ಮಾಡುತ್ತಿದೆ ಎಂದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ತಾಲೂಕಿನಲ್ಲಿ ೧೫ ಲಕ್ಷ ಕಾಂಗ್ರೆಸ್ ಅಭ್ಯರ್ಥಿಗೆ ಲೀಡ್ ಕೊಡ್ತೇವೆ ಎಂದೆಲ್ಲಾ ಬೊಬ್ಬೆಯಿಟ್ಟವರು ಈಗ ಕಾಂಗ್ರೆಸ್ ಅಭ್ಯರ್ಥಿಯನ್ನೆ ಸೋಲಿಸಿ ಮನೆಗೆ ಕಳುಹಿಸಿದ್ದಾರೆ.
undefined
ಲೋಕಸಭೆ ಚುನಾವಣೆ ವೇಳೆ ಮತದಾರರು ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ ನೀಡುವುದರ ಮೂಲಕ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲುವಿಗೆ ಕಾರಣಕರ್ತರಾಗಿದ್ದೀರಿ. ಮುಂದಿನ ದಿನಗಳಲ್ಲಿ ಡಾ.ಸುಧಾಕರ್ ಮತದಾರರ ಋಣ ತೀರಿಸಲಿದ್ದಾರೆ ಎಂದರು. ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನುರೆಡ್ಡಿ, ಬಮುಲ್ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್, ಮಾಜಿ ಶಾಸಕ ಚಂದ್ರಣ್ಣ ಸೇರಿದಂತೆ ಸಹಸ್ರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಜಾತಿ, ಧರ್ಮದ ಹೆಸರಿನಲ್ಲಿ ಮಕ್ಕಳನ್ನು ಕೆಲವರು ದಾರಿ ತಪ್ಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ: ಯಾವುದೇ ದೂರದೃಷ್ಟಿ ಇಲ್ಲದೆ, ಕೇವಲ ಅಧಿಕಾರದ ದುರಾಸೆಯಿಂದ ಸುಳ್ಳು ಹೇಳಿ, ಜನರನ್ನ ಯಾಮರಿಸಿ, ಬೋಗಸ್ ಗ್ಯಾರಂಟಿಗಳನ್ನ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಇಡೀ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕರ್ನಾಟಕದಂತಹ ಪ್ರಗತಿಶೀಲ ರಾಜ್ಯವನ್ನ ಹಿಂದಕ್ಕೆ ಕೊಂಡೊಯ್ಯುತ್ತಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.