Power-Sharing Agreement: ರಾಜ್ಯದ ಅಭಿವೃದ್ಧಿ ಮರೆತು ಸಿಎಂ ಗಾದಿಗಾಗಿ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ನಡುವೆ ಕಿತ್ತಾಟ: ಸಂಸದ ಕಾರಜೋಳ ಕಿಡಿ

Kannadaprabha News, Ravi Janekal |   | Kannada Prabha
Published : Jul 09, 2025, 01:51 PM ISTUpdated : Jul 09, 2025, 02:33 PM IST
Govinda Karjol

ಸಾರಾಂಶ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ನಾಲ್ಕು ಗುಂಪುಗಳಾಗಿ ಶಾಸಕರು, ಸಂಸದರು ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನವರ ವಸೂಲಿ ಕೇಂದ್ರಗಳಾಗಿವೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. 

ದಾವಣಗೆರೆ (ಜುಲೈ 9) : ಮುಖ್ಯಮಂತ್ರಿ ಆಗುವುದಕ್ಕೆಂದೇ ಕಾಂಗ್ರೆಸ್ ಪಕ್ಷದಲ್ಲಿ 4 ಗುಂಪುಗಳಾಗಿ ಶಾಸಕರು, ಸಂಸದರು ಪರಸ್ಪರ ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನ ವಸೂಲಿ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹರಿಹಾಯ್ದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸೇವೆ, ರಾಜ್ಯದ ಅಭಿವೃದ್ಧಿ ಮಾಡಬೇಕೆಂಬುದೇ ಕಾಂಗ್ರೆಸ್‌ನವರಲ್ಲಿ ಇಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನರಿಗೆ ಮೋಸ ಮಾಡಿ, ಜನರ ಮನಸ್ಸನ್ನು ಕದ್ದು ಅಧಿಕಾರಕ್ಕೆ ಬಂದವರು ಎಂದು ದೂರಿದರು.

ಸರ್ಕಾರಿ ಕಚೇರಿಗಳನ್ನೇ ವಸೂಲಿ ಕೇಂದ್ರಗಳನ್ನಾಗಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಹಣ ವಸೂಲಿಗೆ ರಿಟೇಲ್ ಶಾಪ್ ತರಹ ಅವುಗಳಲ್ಲಿ ಕೆಲಸ ಮಾಡಿಸುತ್ತಿದ್ದಾರೆ. ಭ್ರಷ್ಟಾಚಾರದ ರಿಟೇಲ್ ಶಾಪ್ ಇಟ್ಟಿರುವ ಸಿದ್ದರಾಮಯ್ಯ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಎಐಸಿಸಿ ಮುಖಂಡ ಸುರ್ಜೀವಾಲಾ ಕರ್ನಾಟಕಕ್ಕೆ ಬಂದು ಕಾಂಗ್ರೆಸ್‌ನ ಸಚಿವರು, ಶಾಸಕರು ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯಗೆ ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷರಾಗಿ ಮಾಡಿರುವುದು ಪ್ರಮೋಷನ್ ಆಗಿ ಅಲ್ಲ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯಗೆ ಕಿತ್ತು ಹಾಕಲು ಅಂತಹ ಹುದ್ದೆ ನೀಡಿದ್ದಾರಷ್ಟೆ ಎಂದು ಗೋವಿಂದ ಕಾರಜೋಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಮಹಾಮೇಳಾವ್ ಅನುಮತಿ ನಿರಾಕರಣೆ - ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ