ಬಿಜೆಪಿಯ ಮತ್ತೊಂದು ವಿಕೆಟ್‌ ಪತನ: ಕಮಲಕ್ಕೆ ಗುಡ್‌ಬೈ ಹೇಳಿದ ಎಂ.ಪಿ. ಕುಮಾರಸ್ವಾಮಿ

By BK Ashwin  |  First Published Apr 13, 2023, 9:16 AM IST

ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಲಿದ್ದಾರೆ. ಅಲ್ಲದೆ, ಸಿ.ಟಿ. ರವಿ ವಿರುದ್ದ ಎಂ.ಪಿ. ಕುಮಾರಸ್ವಾಮಿ ಕೆಂಡ ಕಾರಿದ್ದು, ಟಿಕೆಟ್‌ ಸಿಗದಿರಲು ಅವರೇ ಕಾರಣ ಎಂದಿದ್ದಾರೆ. 


ಬೆಂಗಳೂರು (ಏಪ್ರಿಲ್ 13, 2023): ಬಿಜೆಪಿಯ 2ನೇ ಅಭ್ಯರ್ಥಿಗಳ ಲಿಸ್ಟ್‌ ಬಿಡುಗಡೆ ಮಾಡುತ್ತಿದ್ದಂತೆ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಬಿಜೆಪಿಯ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ನೀಡಿ ಅವರು ಜೆಡಿಎಸ್‌ಗೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದೂ ತಿಳಿದುಬಂದಿದೆ. ಹಾಗೆ, ಪಕ್ಷಕ್ಕೆ ಗುಡ್‌ಬೈ ಹೇಳುತ್ತಿದ್ದಂತೆ ಬಿಜೆಪಿ ವಿರುದ್ಧ ಸಮರವನ್ನೂ ಸಾರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ಬಾಗಿಲು ಹಾಕಿಸುವವರೆಗೂ ಸಿ.ಟಿ. ರವಿ ಬಿಡಲ್ಲ ಎಂದಿದ್ದಾರೆ. ಅಲ್ಲದೆ, ತನಗೆ ಟಿಕೆಟ್‌ ಸಿಗದಿರಲು ಸಹ ಅವರೇ ಕಾರಣ ಎಂದೂ ಆಕ್ರೋಶ ಹೊರಹಾಕಿದ್ದಾರೆ.

Latest Videos

undefined

ಇದನ್ನು ಓದಿ: ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್‌ಬೈ: ಸಿಎಂ ಬೊಮ್ಮಾಯಿ ವಿರುದ್ಧ ಮಾಜಿ ಡಿಸಿಎಂ ಆಕ್ರೋಶ

ಅಲ್ಲದೆ, ಒಂದು ವೇಳೆ ಬಿ.ಎಸ್‌. ಯಡಿಯೂರಪ್ಪನವರು ಒಂದು ವಾರ ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡ್ರೆ ಬಿಜೆಪಿಗೆ ಚುನಾವಣೆಯಲ್ಲಿ 50 ಸೀಟ್‌ ಬರೋದೂ ಡೌಟ್‌ ಎಂದೂ ಎಮ.ಪಿ. ಕುಮಾರಸ್ವಾಮಿ ಹೇಳಿದ್ದಾರೆ. ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದೆ ದೀಪಕ್ ದೊಡ್ಡಯ್ಯ ಅವರಿಗೆ ನೀಡಲಾಗಿದೆ. ದೀಪಕ್ ದೊಡ್ಡಯ್ಯ ಸಿ.ಟಿ. ರವಿ ಆಪ್ತ ಎನ್ನಲಾಗಿದ್ದು, ಈ ಹಿನ್ನೆಲೆ ತನಗೆ ಟಿಕೆಟ್‌ ಸಿಗದೆ ಇರುವುದಕ್ಕೆ ಸಿ.ಟಿ. ರವಿ ಕಾರಣ ಎಂಬುದು ಎಂಪಿ. ಕುಮಾರಸ್ವಾಮಿಯವರ ಸಿಟ್ಟಿಗೆ ಕಾರಣವಾಗಿದೆ. 

ಪಕ್ಷದ ಬೆಳವಣಿಗೆಗೆ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ರಾಜೀನಾಮೆ ಪತ್ರವನ್ನೂ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಕೆಟ್‌ ಸಿಗದ ಬಗ್ಗೆ ನಿರೀಕ್ಷೆ ಮಾಡಿದ್ದೆ ಎಂದೂ ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ತಿಳಿಸಿದ್ದಾರೆ. 

ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಸಕ ಕುಮಾರಸ್ವಾಮಿ ವಿರುದ್ಧ ದೂರು

ಈ ಮದ್ಯೆ, ಸಿ.ಟಿ. ರವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿರೋ ಮೂಡಿಗೆರೆ ಶಾಸಕ ಎಂಪಿ. ಕುಮಾರಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ. ಅಲ್ಲದೆ, ರವಿ ವಿರುದ್ಧ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದಲೇ ನಿಲ್ತಾರಾ ಎಂಬ ಮಾತುಗಳೂ ಕೇಳಿಬರುತ್ತವೆ. 

ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರ ಜತೆ ಎಂ.ಪಿ. ಕುಮಾರಸ್ವಾಮಿ ಸಂಪರ್ಕದಲ್ಲಿದ್ದು, ಇಂದೇ ಜೆಡಿಎಸ್‌ ಸೇರುವ ಬಗ್ಗೆ ನಿರ್ಧಾರ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 

ಇದನ್ನೂ ಓದಿ: Ticket fight: ಕಾಫಿನಾಡು ಮೂಡಿಗೆರೆಯಲ್ಲಿ ಮುಗಿಯದ ಬಿಜೆಪಿ ಬಣ ರಾಜಕೀಯ!

ಟಿಕೆಟ್ ಕೈತಪ್ಪಲು ಕಾರಣಗಳು ? 

1. ಮೂಡಿಗೆರೆಯಲ್ಲಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ. ಅವರಿಗೆ ಬೇಡವೇ ಬೇಡ ಎಂದು ರಸ್ತೆಗಿಳಿದು ಪ್ರತಿಭಟನೆ. 

2. ಮೂಡಿಗೆರೆ ಕುಮಾರಸ್ವಾಮಿ ಎಂ.ಎಲ್.ಸಿ. ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಿದ್ದರು ಎಂಬ ಆರೋಪ.
 
3. ಮೀಸಲು ಕ್ಷೇತ್ರದಲ್ಲಿ ಸ್ವಜಾತಿಯವರಿಗೆ ಹೆಚ್ಚಿನ ಮನ್ನಣೆ ನೀಡಿ ನಿರ್ಣಾಯಕ ಮತದಾರರಾಗಿರುವ ಒಕ್ಕಲಿಗರ ವಿರೋಧ ಕಟ್ಟಿಕೊಂಡಿರುವುದು. 

4. ಬೆಂಗಳೂರಿನಲ್ಲಿ ವಿಧಾನಸೌಧದ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮುಜುಗರ ತಂದಿರೋದು. 

5. ಕುಮಾರಸ್ವಾಮಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಶಾಸಕರ ವಿರುದ್ಧ ಕಾರ್ಯಕರ್ತರು ತೀವ್ರ ಅಸಮಾಧಾನ ಹೊರಹಾಕಿರೋದು. 

6. ಬಿಜೆಪಿ ಕಾರ್ಯಕರ್ತರನ್ನ ಕಡೆಗಣಿಸಿ ಸ್ವಜಾತಿಯವರು ಮತ್ತು ಬೇರೆ ಪಕ್ಷದ ಕಾರ್ಯಕರ್ತರ ಜೊತೆ ಹೆಚ್ಚಿನ ಒಡನಾಟ ಇಟ್ಟುಕೊಂಡಿರೋದು. 

7. ಆನೆ ದಾಳಿಯಿಂದ ಸರಣಿ ಸಾವು ಸಂಭವಿಸಿದಾಗ ನೋವು ಹೇಳಿಕೊಂಡವರ ವಿರುದ್ಧ ತನ್ನ ಬಟ್ಟೆ ತಾನೇ ಹರಿದುಕೊಂಡು ಜನ ಹೊಡೆದರು ಎಂದು ಸುಳ್ಳು ಹೇಳಿದ್ದು, ಜನರ ವಿರೋಧ ಕಟ್ಟಿಕೊಂಡಿರೊದು. 

8. ಆಪ್ತರಿಗೆ ಮಾತ್ರ ಹೆಚ್ಚು ಅನುದಾನ ನೀಡಿರೋದು. ಬೇಕಾವರಿಗೆ ಮಾತ್ರ ಹೆಚ್ಚಿನ ಕೆಲಸ ಮಾಡಿಸಿಕೊಟ್ಟಿರೋದು. 

9. ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವುದು. ಟಿಕೆಟ್ ಸಿಗಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ಪಕ್ಷದ ರಾಜ್ಯಮಟ್ಟದ ನಾಯಕರ ಜೊತೆ ಸಂಪರ್ಕದ ಆರೋಪ.

click me!