ಎಂ.ಬಿ.ಪಾಟೀಲ್‌ಗೆ ಈಗ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಅಂತಾ ವಿಲವಿಲ ಒದ್ದಾಡುತ್ತಿದ್ದಾರೆ.
ಮೈಸೂರು (ಜೂ.20): ಎಂ.ಬಿ. ಪಾಟೀಲ್‌ಗೆ ಈಗ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಅಂತಾ ವಿಲವಿಲ ಒದ್ದಾಡುತ್ತಿದ್ದಾರೆ. ಎಂ.ಬಿ. ಪಾಟೀಲ್‌ಗೆ ಬರೀ ಚಿಲ್ಲರೆ, ನೋಟು ಇದರ ಬಗ್ಗೆ ಮಾತ್ರ ಚಿಂತೆ ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯರನ್ನು ಓಲೈಕೆಯೆ ತಮ್ಮ ಖಾತೆ ಜವಾಬ್ದಾರಿ ಅಂತಾ ಪಾಟೀಲ್ ಅಂದು ಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡೋದೆ ನಿಮ್ಮ ಕೆಲಸನಾ ಎಂ.ಬಿ. ಪಾಟೀಲ್ ಎಂದು ಅವರು ಪ್ರಶ್ನಿಸಿದರು.
ಸಂತೋಷ್ ಬಗ್ಗೆ ಯಾಕೆ ಮಾತಾಡ್ತಿರಿ?: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ವ್ಯಂಗ್ಯ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಅವರು, ಸಂತೋಷ್ ಬಗ್ಗೆ ಪದೇ ಪದೇ ಯಾಕೆ ಮಾತಾಡ್ತಿರಿ? ಬ್ರಾಹ್ಮಣರನ್ನು ದಿನವೂ ಯಾಕೆ ಬೈಯ್ತೀರಿ? ಯಾಕೆ ನಿಮಗೆ ಬ್ರಾಹ್ಮಣರ ಮೇಲೆ ಇಷ್ಟುದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರು ಅಲ್ವಾ? ಬಿ.ಎಲ್. ಸಂತೋಷ್ ನಿಮಗೆ ಏನಾದರೂ ತಿವಿದಿದ್ದಾರಾ ಎಂದು ಪ್ರಶ್ನಿಸಿದರು.
undefined
ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಪುಟ್ಟರಂಗಶೆಟ್ಟಿ
ಎಂ.ಬಿ. ಪಾಟೀಲ್‌ರೇ ನೀವು ನಿಜವಾಗಲೂ ಲಿಂಗಾಯತರಾ? ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಕಾಂಗ್ರೆಸ್ ಕುತಂತ್ರ ಅಲ್ವಾ? ಕಾಂಗ್ರೆಸ್ ಲಿಂಗಾಯತರಿಗೆ ಅನ್ಯಾಯ ಮಾಡಿದ್ರು ನೀವು ಸುಮ್ಮನೆ ಇದ್ದಿರಿ. ದಿನೇಶ್ ಗುಂಡೂರಾವ್ ಯಡಿಯೂರಪ್ಪರನ್ನು ಹುಚ್ಚ ಅಂದಿದ್ದರು. ಆಗ ನಿಮ್ಮೊಳಗೆ ಲಿಂಗಾಯತ ಭಾವನೆ ಜಾಗೃತ ಆಗಲಿಲ್ಲವಲ್ಲ? ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಲು ಕಾಂಗ್ರೆಸ್‌ನಿಂದ ಸೂಪಾರಿ ತೆಗೆದುಕೊಂಡವರು ನೀವೇ ತಾನೇ? ಸಿದ್ದರಾಮಯ್ಯರು ಲಿಂಗಾಯತ ಧರ್ಮ ಒಡೆಯಲು ಹೋದಾಗ ಅದರ ಸೂಪಾರಿ ಪಡೆದವರು ನೀವೆ ತಾನೇ ಎಂದು ಅವರು ಪ್ರಶ್ನಿಸಿದರು.
ಈಗ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ ಎನ್ನುವ ಮೂಲಕ ಒಕ್ಕಲಿಗರ ಮುಗಿಸಲು ಹೊರಟ್ಟಿದ್ದರಾ. ನಿಮ್ಮ ಒಂದು ಹೇಳಿಕೆ ಪರಿಣಾಮ ಡಿ.ಕೆ. ಸುರೇಶ್ ನಿಮ್ಮ ಕೈ ಎಳೆದಿದ್ದಾರೆ. ಇನ್ನೊಂದು ಬಾರಿ ಅಂತಾ ಹೇಳಿಕೆ ಕೊಡಿ ಡಿ.ಕೆ. ಸುರೇಶ್ ನಿಮ್ಮ ಕೊರಳಪಟ್ಟಿ ಹಿಡಿಯುತ್ತಾರೆ. ಎಂ.ಬಿ. ಪಾಟೀಲ್ ಸಿದ್ದರಾಮಯ್ಯರ ಚೇಲಾ ಪಡೆಯ ಅಧ್ಯಕ್ಷ ಎಂದು ಅವರು ವಾಗ್ದಾಳಿ ನಡೆಸಿದರು.
ಸಂಸದ ಡಿ.ಕೆ.ಸುರೇಶ್ಗೆ ನೋವು, ಬೇಸರ, ಆತಂಕ ಕಾಡುತ್ತಿದೆಯಾ!
ಸಿದ್ದರಾಮಯ್ಯಗೆ ತಾವೇ ಪೂರ್ಣಾವಧಿ ಸಿಎಂ ಅಂತಾ ನೇರವಾಗಿ ಹೇಳುವ ಧೈರ್ಯವಿಲ್ಲ: ಸಿದ್ದರಾಮಯ್ಯಗೆ ತಾವೇ ಪೂರ್ಣಾವಧಿ ಸಿಎಂ ಅಂತಾ ನೇರವಾಗಿ ಹೇಳುವ ಧೈರ್ಯವಿಲ್ಲ, ಅವರಿಗೆ ಪುಕ್ಕಲತನ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಎಚ್.ಸಿ. ಮಹದೇವಪ್ಪ, ಎಂ.ಬಿ. ಪಾಟೀಲ್ ಇಬ್ಬರು ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಎಂದು ಹೇಳಿದ್ದಾರೆ. ಸಿದ್ದರಾಮಯ್ಯರಿಗೆ ಅಧಿಕಾರ ಬಿಟ್ಟು ಕೊಡುವ ಇರಾದೆ ಇಲ್ಲ. ಹೀಗಾಗಿ, ಸಿದ್ದರಾಮಯ್ಯ ತಮ್ಮ ಛೇಲಾ ಪಡೆ ಮೂಲಕ ತಾವೂ ಪೂರ್ಣ ಅವಧಿಗೆ ಸಿಎಂ ಅಂತಾ ಹೇಳಿಸುತ್ತಿದ್ದಾರೆ ಎಂದರು. ಚುನಾವಣೆ ಗೆಲ್ಲಲು ಡಿ.ಕೆ. ಶಿವಕುಮಾರ್ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಧಾರಾಳಾ ಮನಸ್ಸಿನಿಂದ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯಗೆ ಆ ಧಾರಳ ಉದಾರತನದ ಮನಸ್ಸು ಇಲ್ಲ ಎಂದು ಅವರು ಟೀಕಿಸಿದರು.