
ಮೈಸೂರು (ಜೂ.21): ಬಹಿರಂಗ ಚರ್ಚೆಗೆ ಆಹ್ವಾನಿಸಿದ ಶಾಸಕ ಪ್ರದೀಪ್ ಈಶ್ವರ್ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಆದಷ್ಟು ಬೇಗ ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ, ಗೊತ್ತಿಲ್ಲದವರಿಗೆ ಹಿರಿಯ ಶಾಸಕರು ಒರಿಯಂಟೇಶನ್ ಪ್ರೋಗ್ರಾಂ ನಡೆಸುವ ಅಗತ್ಯವಿದೆ. ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕೆಲಸ ಮಾಡಬೇಕು ಎಂಬುದನ್ನ ತಿಳಿದುಕೊಳ್ಳಲು ಹೇಳಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.
ಸಚಿವ ಎಚ್.ಸಿ ಮಹದೇವಪ್ಪ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಂಹ, ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ವೀರೆಂದ್ರ ಪಾಟೀಲ್, ವೀರಪ್ಪ ಮೊಯ್ಲಿ ಹಾಗೂ ಬಂಗರಾಪ್ಪ ಮೂರು ಜನರನ್ನ 5 ವರ್ಷದಲ್ಲಿ ಬದಲಾಯಿಸಿದ್ದು ಯಾರು? ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ, ಇದರ ಬಗ್ಗೆ ತಿಳಿದುಕೊಂಡು ಮಾತನಾಡಿದರೆ ಒಳ್ಳೆಯದು ಎಂದಿದ್ದಾರೆ.
ಅಧಿಕಾರ ಬಂತು ಎಂದರೆ 2-3 ಸಿಎಂ ಬದಲಿಸುವ ಚಾಳಿ ಬಿಜೆಪಿಯದ್ದು: ಸಚಿವ ಮಹದೇವಪ್ಪ
ಅಕ್ಕಿ ವಿಚಾರಕ್ಕೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಮಾತನಾಡಿ, ದೇಶದಲ್ಲಿ ಅಕ್ಕಿ ಕೊಡುತ್ತಿಲ್ಲ ಅಂಥ ಯಾರಾದರು ಬೊಬ್ಬೆ ಹಾಕುವುದನ್ನು ಕೇಳಿದ್ದೀರಾ? ಓಪನ್ ಮಾರ್ಕಟ್ ನಲ್ಲಿ ತೆಗೆದುಕೊಳ್ಳಿ. ಮಂಡಿ ತೆರೆದು ರಾಜ್ಯದಲ್ಲಿ ಬೆಳೆಯುವ ರೈತರ ಬಳಿ ಭತ್ತ ಖರೀದಿ ಮಾಡಿ. ನಮ್ಮ ರೈತರು ರಾಜ್ಯದ ಜನತೆಗೆ ಕೊಡುವಷ್ಟು ಬೆಳೆದಿದ್ದಾರೆ. ಮಂಡಿ ತೆರೆದು ಕನಿಷ್ಟ ಬೆಲೆ ನಿಗದಿ ಮಾಡಿ ಖರೀದಿ ಮಾಡಿ. ವೀನಾಕಾರಣ ಮೋದಿ ಅವರನ್ನು ಬೈದುಕೊಂಡು ಓಡಾಡಬೇಡಿ. ಉಚಿತ ಅಕ್ಕಿ ಕೊಡುವಾಗ ಮೋದಿ ಅವರನ್ನ ಕೇಳಿಕೊಂಡು ಕೊಟ್ಟಿದ್ದೀರಾ? ಕ್ರಿಸ್ಚಿಯನ್ ಅವರು ಕೇಳಿದಾಗ ಮತಾಂದರ ನಿಷೇಧ ಕಾಯ್ದೆ ಹಿಂಪಡೆಯುತ್ತೀರಿ. ಮುಸ್ಲಿಂಮರು ಕೇಳಿದ ಕೂಡಲೇ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೀರಿ. ಸಾಮನ್ಯ ಜನ ವಿದ್ಯುತ್ ಬೆಲೆ ಕಡಿಮೆ ಮಾಡಿ ಅಂದ್ರೆ ಆಗಲ್ಲ ಅಂತೀರಿ. ನಿಮ್ಮದು ಜನ ವಿರೋಧಿ ಧೋರಣೆ. ಬಿಜೆಪಿಯನ್ನು ಬೈಯುದನ್ನ ಬಿಡಿ ಎಂದು ಸಂಸದ ಪ್ರತಾಪ ಸಿಂಹ ಕಿಡಿ ಕಾರಿದ್ದಾರೆ.
ಸಚಿವ ಎಂ.ಬಿ.ಪಾಟೀಲ್‌ಗೆ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ: ಪ್ರತಾಪ್ ಸಿಂಹ
ಇನ್ನು ಕೇಂದ್ರ ಸರ್ಕಾರ ಕಂಪ್ಯೂಟರ್ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ವಿಚಾರವಾಗಿ ಮಾತನಾಡಿ, ಸಚಿವರಿಗೆ ಓರಿಯಂಟಿಯೇಶನ್ ಅಗತ್ಯವಿದೆ. ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂತ ಸಚಿವರು ಇದ್ದಾರೆ. ಅವರಿಗೆ ಯಾವುದರ ಬಗ್ಗೆಯೂ ಅರಿವಿಲ್ಲದೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಅವಮಾನ. ಸಾರ್ವಜನಿಕವಾಗಿ ಏನ್ ಮಾತನಾಡಬೇಕು, ಈ ರೀತಿ ಅಸಂಬದ್ಧವಾದ ಹೇಳಿಕೆ ಕೊಟ್ರೆ ಕರ್ನಾಟಕದ ಮರ್ಯಾದೆ ಹೋಗುತ್ತೆ. ಕಂಪ್ಯೂಟರ್, ಸರ್ವರ್ ಅನ್ನ ಯಾರು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ. ಈ ರೀತಿ ಹೇಳಿಕೆ ಕೊಟ್ಟು ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ತೀಕ್ಷ್ಣವಾಗಿ ಸಂಸದ ಪ್ರತಾಪ ಸಿಂಹ ಪ್ರತಿಕ್ರಿಯಿಸಿದ್ದಾರೆ.
ಇನ್ನು ಎಂ.ಬಿ ಪಾಟೀಲ್ ಅವರು ನನ್ನ ಬಗ್ಗೆ ಮಾತನಾಡಲಿಲ್ಲ ಅಂದ್ರೆ ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜ್ಯದ ನೀರಾವರಿ ಸಚಿವರು, ನಾನು ಸಹ ಅವರ ಕ್ಷೇತ್ರಕ್ಕೆ ಹೋಗಿದ್ದೇನೆ. ಅವರ ಬಗ್ಗೆ ಜನರು ಅಪಾರವಾದ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುವುದು ಸಾಧನೆಯಾಗಬಾರದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.