ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಆರೋಪಿಸಿದರು.
ಮೈಸೂರು (ಜ.18): ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ. ಎಸ್.ಎಂ. ಕೃಷ್ಣ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡಿದ್ದರು.
ಆದರೆ ಸಿದ್ದರಾಮಯ್ಯ ಸಿಎಂ ಚೇರ್‌ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆ. ಮೊದಲು ಎಂ.ಬಿ.ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಅಂತ ಹೇಳಿಸಿದ್ದರು. ನಂತರ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್, ಕೆ.ಎನ್. ರಾಜಣ್ಣ ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಅಂತ ಹೇಳಿದ್ದಾಗಿದೆ. ಈಗ ಮಗನ ಮೂಲಕ ಹೇಳಿಸುತ್ತಿದ್ದಾರೆ ಎಂದರು.
undefined
ಮೈಸೂರು ಗರಡೀಲಿ ನಾನು ಕೂಡ ಪಳಗಿದ್ದು, ಕುಸ್ತಿ ಆಡಿದ್ದೇನೆ: ಸಂಸದ ಅನಂತ ಕುಮಾರ್ ಹೆಗಡೆ
ಯತೀಂದ್ರ ನನ್ನ ಎದುರಾದ್ರೆ ಒಳ್ಳೇದು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಅವರು ನನ್ನ ಎದುರಾಳಿಯಾದರೆ ಒಳ್ಳೆಯದು. ಆಗ ಯತೀಂದ್ರ ಸನ್ ಆಫ್ ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ನಡುವೆ ಹೋರಾಟ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ‘ಯತೀಂದ್ರ ನಿಮ್ಮ ಎದುರಾಳಿಯಾ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ. ಮೋದಿ ಅವರ ಹೆಸರಿನ ಮುಂದೆ ಯಾವ ಎದುರಾಳಿ ಹೆಸರೂ ನಡೆಯಲ್ಲ.
ಕಾಂಗ್ರೆಸ್‌ಗೆ ನಮ್ಮ ಚಿಂತೆ ಯಾಕೆ? ಕಾಂಗ್ರೆಸ್‌ಗೆ ಊರ ಉಸಾಬರಿ ಯಾಕೆ? ತಮ್ಮ ಅಭ್ಯರ್ಥಿ ಯಾರು ಎಂಬುದನ್ನು ಅವರು ನೋಡಿಕೊಳ್ಳಲಿ ಎಂದು ಹೇಳಿದರು. ಲೋಕಸಭೆಗೆ ಅಭ್ಯರ್ಥಿಗಳು ಇಲ್ಲದೆ ಮಂತ್ರಿಗಳ ನಿಲ್ಲಿಸಿದ ದೈನಾಸಿ ಸ್ಥಿತಿ ಕಾಂಗ್ರೆಸ್ ಗೆ ಬಂದಿದೆ. ಬಿಜೆಪಿ- ಜೆಡಿಎಸ್ ನಡುವೆ ಗೊಂದಲ ಇಲ್ಲ. ಈ ಕ್ಷೇತ್ರದಲ್ಲಿ ನನ್ನ ಪರ ಎರಡೂ ಪಕ್ಷದ ನಾಯಕರ ಆಶೀರ್ವಾದವಿದೆ ಎಂದರು.
‘ಸಬ್ ಕಾ ಸಾಥ್-ಸಬ್ ಕಾ ವಿಕಾಸ್’ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಸಿದ್ದರಾಮಯ್ಯ
ಕೊಚ್ಚೆಗೆ ಕಲ್ಲು ಹಾಕಲ್ಲ: ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ. ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ತಿರುಗೇಟು ನೀಡಿದರು.