ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಮೊಳಗಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣಗೌಡ ನೇತೃತ್ವದಲ್ಲಿಯೇ ಚುನಾವಣಾ ಕೆಲಸಗಳಿಗೆ ಅಧಿಕೃತ ಚಾಲನೆ ನೀಡಲಾಗಿದೆ.
ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಫೆ.29) : ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಮೊಳಗಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣಗೌಡ ನೇತೃತ್ವದಲ್ಲಿಯೇ ಚುನಾವಣಾ ಕೆಲಸಗಳಿಗೆ ಅಧಿಕೃತ ಚಾಲನೆ ನೀಡಲಾಗಿದೆ.
undefined
ಕಾರ್ಯಕ್ರಮದ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ ಸಿಂಹ, ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಗೆ ಕರೆಯುತ್ತೇನೆ ಎನ್ನುವ ಮೂಲಕ ಈ ಬಾರಿಯೂ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಸಾರಿ ಹೇಳಿದ್ದಾರೆ. ಈ ಹೇಳಿಕೆಯಿಂದ ಬಿಜೆಪಿ ಚಿಹ್ನೆ ಅಡಿಯಲ್ಲಿ ಜೆಡಿಎಸ್ ನ ಸಾ. ರಾ ಮಹೇಶ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆ ಫುಲ್ ಸ್ಟಾಪ್ ಇಡುವಂತೆ ಇದೆ. ಈಗಾಗಲೇ ನಾನು ಚುನಾವಣಾ ಸಿದ್ಧತೆ ಶುರುಮಾಡಿ 15 ದಿನ ಆಗಿದೆ. ನನ್ನ ರಿಪೋರ್ಟ್ ಕಾರ್ಡು ಬಿಡುಗಡೆ ಆದ ದಿನವೇ ನನ್ನ ಕೆಲಸ ಶುರು ಮಾಡಿದ್ದೇನೆ. ಇನ್ನು ಆರೇಳು ದಿನಗಳಲ್ಲಿ ಎಲ್ಲಾ ಊಹಾಪೋಹಗಳಿಗೆ ತೆರೆ ಬೀಳುತ್ತೆ, ಊಹಾಪೋಹಗಳಿಗೆ ತಲೆಕೆಡೆಸಿಕೊಳ್ಳುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು- ಕೊಡಗು ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿಯೂ ನನಗೆ ಸಿಗಲಿದೆ: ಪ್ರತಾಪ್ ಸಿಂಹ
ಇನ್ನು ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ಸಂದರ್ಭ ಮಾತನಾಡಿದ ಅವರು ಮೊದಲ ಚುನಾವಣೆಯಲ್ಲಿ 25 ಸಾವಿರ ಲೀಡ್‌ನಲ್ಲಿ ಗೆಲುವು ಸಾಧಿಸಿದ್ದೆ. 2019 ರ ಚುನಾವಣೆಯಲ್ಲಿ 85 ಸಾವಿರ ಲೀಡಿನಿಂದ ಗೆದ್ದಿದ್ದೆ. ಈ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಒಂದು ಲಕ್ಷ ಲೀಡ್ ತರುವುದಾಗಿ ಎಂಎಲ್ಸಿ ಸುಜಾಕುಶಾಲಪ್ಪ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ, ಬರೀ ಮೈಸೂರು ಜಿಲ್ಲೆ ಒಂದರಲ್ಲಿಯೇ ಒಂದುವರೆ ಲಕ್ಷ ಲೀಡಿನಲ್ಲಿ ಗೆಲ್ಲುತ್ತೇನೆ ಎಂದಿದ್ದಾರೆ.
ತಾಲಿಬಾನ್ ಸರ್ಕಾರಕ್ಕೆ ಹೋಲಿಕೆ
ರಾಜ್ಯ ಸರ್ಕಾರವನ್ನು ಸಂಸದ ಪ್ರತಾಪ್ ಸಿಂಹ ಅವರು ತಾಲಿಬಾನ್ ಸರ್ಕಾರಕ್ಕೆ ಹೋಲಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ನಡೆದ ವಿರಾಜಪೇಟೆ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾನು ಹೇಳಿದ್ದೆ, ಕಾಂಗ್ರೆಸ್ ಗೆ ಓಟ್ ಹಾಕಿದರೆ ತಾಲಿಬಾಲ್ ಸರ್ಕಾರ ಬರುತ್ತದೆ ಎಂದು ಹೇಳಿದ್ದೆ. ಅದು ಕನ್ನಡಿಗರ ಸರ್ಕಾರ ಆಗಿರಲ್ಲ, ತಾಲಿಬಾಲ್ ಸರ್ಕಾರ ಆಗಿರುತ್ತೆ ಅಂತ ಹೇಳಿದ್ದೆ. ಮೊನ್ನೆ ವಿಧಾನಸಭೆಯಲ್ಲಿ ಘೋಷಣೆ ಕೂಗಿರುವುದು ಟ್ರಯಲರ್ ಅಷ್ಟೇ, ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ. ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೂಡ ಕೇಳುತ್ತದೆ. ಕಾಂಗ್ರೆಸ್ ಸರ್ಕಾರವನ್ನು ಮುಂದುವರಿಯಲು ಬಿಟ್ಟರೆ ತಾಲಿಬಾನ್ ಸರ್ಕಾರ ಮಾಡುವ ಎಲ್ಲಾ ಅನಾಚಾರಗಳನ್ನು ಮಾಡುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದರು.
ಕೊಟ್ಟ ಮಾತು ಉಳಿಸಿಕೊಂಡ ಸಂಸದ ಪ್ರತಾಪ್ ಸಿಂಹ; ಬಂತು ಮೈಸೂರು-ರಾಮೇಶ್ವರಂ ಟ್ರೈನ್!
ರಾಜ್ಯಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಸೋತಿರುವುದಕ್ಕೆ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ ದೇಶದಲ್ಲೇ ರಾಜ್ಯಸಭೆಯಲ್ಲಿ ಬಿಜೆಪಿ ಮೆಜಾರಿಟಿ ಪಡೆದಿದೆ. ಅದರ ಬಗ್ಗೆ ಕಾಂಗ್ರೆಸ್ ಮಾತನಾಡುವುದೇನಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಮಾಧ್ಯಮಗಳು ಪ್ರಪಂಚಕ್ಕೆ ತೋರಿಸಿವೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಪ್ರತಾಪ್ ಸಿಂಹ ಹೇಳಿದರು.