ಈ ಬಾರಿಯ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಹಣ ನೀಡದೇ ಒಂದು ಧರ್ಮ ಹಾಗೂ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದ ಬಜೆಟ್ ಮಂಡಣೆ ಮಾಡಿದ್ದು ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಅನುದಾನ ಮಿಸಲಿಟ್ಟಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಆಕ್ರೋಶ ಹೊರಹಾಕಿದರು.
ಕೋಲಾರ (ಫೆ.17): ಈ ಬಾರಿಯ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಹಣ ನೀಡದೇ ಒಂದು ಧರ್ಮ ಹಾಗೂ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದ ಬಜೆಟ್ ಮಂಡಣೆ ಮಾಡಿದ್ದು ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಅನುದಾನ ಮಿಸಲಿಟ್ಟಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಆಕ್ರೋಶ ಹೊರಹಾಕಿದರು. ನಗರದ ಕ್ಲಾಕ್ ಟವರ್ ಬಳಿ ರಾಜ್ಯ ಬಜೆಟ್ ಮಂಡಣೆ ಕುರಿತು ಪ್ರತಿಕ್ರಿಯಿಸಿದ ಅವರು, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುವ ಸಿದ್ದರಾಮಯ್ಯ ಬಜೆಟ್ ಮಂಡಣೆ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಳೆದ ೭ ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ಎಂದು ಹಣೆ ಪಟ್ಟಿ ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ, ರೈತರಿಗೆ ಬರ ಪರಿಹಾರವಾಗಿ ೨ ಸಾವಿರ ಕೊಡಲು ಯೋಗ್ಯತೆ ಇಲ್ಲ ಇವರಿಗೆ ಮಸೀದಿ ಚರ್ಚ್, ವರ್ಕ್ ಬೊರ್ಡ್‌ಗೆ ಮಾತ್ರ ಹಣ ನೀಡುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಈ ರಾಜ್ಯದಲ್ಲಿರಲು ಯೋಗ್ಯತೆ ಇಲ್ಲ ಎಂದರು. ವಿಧಾನಸಬಾ ಚುನಾವಣೆ ವೇಳೆ ನಿರುದ್ಯೋಗ ಭತ್ಯೆ, ೧೦ ಕೆಜಿ ಅಕ್ಕಿ, ೩೦೦ ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ ಅಂತ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದು ರಾಜ್ಯದ ಜನತೆಗೆ ಮಾಡಿದ ದ್ರೋಹ ಎಂದರು.
ಕಾಂಗ್ರೆಸ್ ಸರ್ಕಾರದಿಂದ ಬಯಲುಸೀಮೆಗೆ ವಂಚನೆ: ಮಾಜಿ ಸಚಿವ ಡಾ.ಕೆ.ಸುಧಾಕರ್
ಕಾಂಗ್ರೆಸ್ ರಕ್ತದಲ್ಲಿ ದೇಶ ವಿಭಜನೆ ಸಂಸ್ಕೃತಿ: ದೇಶ ಇಬ್ಭಾಗ ಮಾಡುವ ಧೋರಣೆಯನ್ನು ಕಾಂಗ್ರೆಸ್ ಹೊಂದಿದ್ದು ಅದರಂತೆಯೆ ಕಾಂಗ್ರೆಸ್‌ನ ಪ್ರತಿಯೊಬ್ಬರ ರಕ್ತದ ಕಣಕಣದಲ್ಲಿ ದೇಶ ವಿಭಜಿಸುವ ಸಂಸ್ಕೃತಿ ಅಡಕವಾಗಿದೆ. ಆದರೆ ದೇಶದ ಸರ್ವಾಂಗೀಣ ಅಭಿವೃದ್ಧಿಪಡಿಸುವ ಸಂಕಲ್ಪ ಮೋದಿಯವರದಾಗಿದೆ ಎಂದು ಸಂಸದ ಎಸ್ ಮುನಿಸ್ವಾಮಿ ನುಡಿದರು. ತಾಲೂಕಿನ ಬೂರಗಮಾಕಲಹಳ್ಳಿಯ ಸಂಜೀವ ಸಮುದಾಯ ಭವನದಲ್ಲಿ ನಡೆದ ಗ್ರಾಮ ಚಲೋ ಅಭಿಯಾನದಲ್ಲಿ ಮಾತನಾಡಿ, ಮೋದಿ ಗ್ಯಾರಂಟಿಗಳು ಎಲ್ಲ ವರ್ಗದ ಜನರನ್ನು ತಲುಪುತ್ತಿವೆ. ಇದರಲ್ಲಿ ಯಾವುದೇ ಜಾತಿ, ಧರ್ಮ, ಭೇದಭಾವವಿಲ್ಲದೆ ಎಲ್ಲರಿಗೂ ಅನ್ವಯವಾಗುತ್ತದೆಯೆಂದರು.
ಸಿದ್ದರಾಮಯ್ಯರಿಂದ 1 ಟ್ರಿಲಿಯನ್ ಆರ್ಥಿಕ ರಾಜ್ಯ ಮಾಡುವ ಪ್ರಯತ್ನ: ಸಚಿವ ಈಶ್ವರ ಖಂಡ್ರೆ
ಡಿಕೆಸು ರಾಜೀನಾಮೆ ನೀಡಲಿ: ಸಂಸದ ಡಿಕೆ ಸುರೇಶ್ ದೇಶವನ್ನು ಇಬ್ಭಾಗ ಮಾಡುವ ಹೇಳಿಕೆಯನ್ನು ನೀಡಿರುವುದು ಅವರ ಹಾಗೂ ಅವರ ಪಕ್ಷದ ಮನಸ್ಥಿತಿಗೆ ಸಾಕ್ಷಿಯಾಗಿದ್ದು ಇಂತಹವರು ಸಂಸದರಾಗಿ ಮುಂದುವರೆಯಲು ಅರ್ಹರಲ್ಲವಾದ್ದರಿಂದ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ತಾಕೀತು ಮಾಡಿದರು. ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಪಕ್ಷದ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ವೇಣುಗೋಪಾಲ್, ಸೀಕಲ್ ರಾಮಚಂದ್ರಗೌಡ, ಬಂಗಾರಪೇಟೆ ಚಂದ್ರಾರೆಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಪಾಧ್ಯಕ್ಷ ವೆಂಕಟಶಿವಾರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಶಿವಾರೆಡ್ಡಿ, ನಗರ ಮಂಡಲ ಅಧ್ಯಕ್ಷ ಮಹೇಶ್ ಬೈ, ಮಹಿಳಾ ಮೋರ್ಚಾ ಅಧ್ಯಕ್ಷ ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿಗಳು ಸಿ.ಆರ್.ವೆಂಕಟೇಶ್, ಮತ್ತಿತರರು ಉಪಸ್ಥಿತರಿದ್ದರು.