
ಚಿಕ್ಕಮಗಳೂರು(ಮಾ. 02) ಬ್ರಿಟಿಷರನ್ನು ಓಡಿಸಿದವರಿಗೆ ಮೋದಿ ಓಡಿಸೋದು ಕಷ್ಟವಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟ ಬುತ್ತಿ. ಪದೇ-ಪದೇ ಸೋಲುವುದುರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದ್ದು ಚಿಕಿತ್ಸೆಯ ಅಗತ್ಯವಿದೆ ಎಂದು ನನಗೆ ಅನ್ನಿಸುತ್ತಿದೆ ಎಂದಿದ್ದಾರೆ.
ಕುಸ್ತಿ,ಡ್ಯಾನ್ಸ್, ಡಿಪ್ಸ್..ವಿದ್ಯಾರ್ಥಿಗಳೊಂದಿಗೆ ರಾಹುಲ್
ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯ ವಾಡಿದ್ದು , ನೀವು ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗೂ ಉಳಿದಿಲ್ಲ. ದುರಾಡಳಿತ, ಭ್ರಷ್ಟಾಚರದಿಂದ ಜನರಿಂದಲೇ ನಾಶವಾಗಿ ಹೋಗಿದ್ದೀರಾ. ಮತ್ತೆ ಸರ್ವನಾಶವಾಗ್ತೀರಾ, ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯಲ್ಲ ಎಂದು ಭವಿಷ್ಯ ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡ್ತಿದ್ದಾರೆ ಎಂದು ರಾಹುಲ್ ಅವರ ಇತ್ತೀಚಿನ ವರ್ತನೆಯನ್ನು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.