ನಡ್ಡಾ, ಸಂತೋಷ್ ಭೇಟಿಯಾಗಿ ಮಂಡ್ಯ ಟಿಕೆಟ್‌ಗೆ ಸಂಸದೆ ಸುಮಲತಾ ಮನವಿ

By Kannadaprabha NewsFirst Published Feb 9, 2024, 6:03 AM IST
Highlights

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮಂಡ್ಯ ಕ್ಷೇತ್ರ ಕೈಬಿಟ್ಟುಹೋಗುವ ಆತಂಕದಲ್ಲಿರುವ ಸಂಸದೆ ಸುಮಲತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಗುರುವಾರ ಭೇಟಿಯಾಗಿ ತಮಗೆ ಟಿಕೆಟ್‌ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಮಂಡ್ಯ (ಫೆ.09): ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮಂಡ್ಯ ಕ್ಷೇತ್ರ ಕೈಬಿಟ್ಟುಹೋಗುವ ಆತಂಕದಲ್ಲಿರುವ ಸಂಸದೆ ಸುಮಲತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಗುರುವಾರ ಭೇಟಿಯಾಗಿ ತಮಗೆ ಟಿಕೆಟ್‌ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಮೈತ್ರಿ ನಡುವೆಯೂ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಬೇಕು. ತಮ್ಮನ್ನೇ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಮಾತುಗಳು ದಟ್ಟವಾಗಿ ಕೇಳಿಬರುತ್ತಿರುವುದರಿಂದ ಅವಕಾಶ ವಂಚಿತರಾಗಬಹುದೆಂಬ ಭಯ ಅವರನ್ನು ತೀವ್ರವಾಗಿ ಕಾಡುತ್ತಿವೆ. ಇದರ ನಡುವೆಯೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವ ಸುಮಲತಾ ಅವರು ಕಮಲ ನಾಯಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.

ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಪಕ್ಷದ ಹಿರಿಯ ಮುಖಂಡರು ಚಾಲನೆ ನೀಡಿದರು. ಬಿಜೆಪಿ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಲೋಕಸಭೆ ಚುನಾವಣೆಗೆ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಸಂಘಟಿಸಬೇಕು. ಮಾಜಿ ಪ್ರಧಾನ ವಾಜಪೇಯಿ ಅವರ ಆಡಳಿತದಿಂದ ಮೋದಿ ಅವರ ಆಡಳಿತದಿಂದ ದೇಶಕ್ಕೆ ಆಗಿರುವ ಸುಧಾರಣೆ ಮತ್ತು ಅಭಿವೃದ್ಧಿಗಳ ಕುರಿತು ಕಾರ್ಯಕರ್ತರು ಜನರಿಗೆ ತಿಳಿಹೇಳಬೇಕು ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಬೇರೆಡೆ ಸ್ಪರ್ಧಿಸಲ್ಲ: ಸಂಸದೆ ಸುಮಲತಾ ಅಂಬರೀಷ್‌

ಪ್ರತಿ ಗ್ರಾಮದಲ್ಲೂ ಪ್ರವಾಸ ಮಾಡಿ ಮನೆ ಮನೆಗಳಿಗೆ ತೆರಳಿ ದೇಶದಲ್ಲಿ ಬಿಜೆಪಿ ಪಕ್ಷದಿಂದಾದ ಬದಲಾವಣೆಗಳ ಕುರಿತು ಎಳೆ ಎಳೆಯಾಗಿ ಜನರಿಗೆ ತಿಳಿಸಿ ಪಕ್ಷವನ್ನು ಸಂಘಟಿಸಬೇಕು ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪೀಹಳ್ಳಿ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಶ್ರೀಧರ್, ಪಕ್ಷದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

click me!