ಬರ ಪರಿಹಾರಕ್ಕಾಗಿ ಕೇವಲ ಕೇಂದ್ರದ ಬಗ್ಗೆ ಬೊಟ್ಟು ಮಾಡಿ ತೋರಿಸೋದಲ್ಲ. ರಾಜ್ಯ ಸರ್ಕಾರವು ಸಹ ಬರದ ಬಗ್ಗೆ ತುರ್ತಾಗಿ ಕ್ರಮ ವಹಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಪಾಂಡವಪುರ (ನ.23): ಬರ ಪರಿಹಾರಕ್ಕಾಗಿ ಕೇವಲ ಕೇಂದ್ರದ ಬಗ್ಗೆ ಬೊಟ್ಟು ಮಾಡಿ ತೋರಿಸೋದಲ್ಲ. ರಾಜ್ಯ ಸರ್ಕಾರವು ಸಹ ಬರದ ಬಗ್ಗೆ ತುರ್ತಾಗಿ ಕ್ರಮ ವಹಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇಸಿದ ನಂತರ ಮಾತನಾಡಿ, ಜಿಲ್ಲೆಯನ್ನು ಬರ ಎಂದು ಘೋಷಣೆಯಾಗಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದೇನೆ ಎಂದರು.
ಬರ ಪರಿಹಾರಕ್ಕಾಗಿ ಕೇವಲ ಕೇಂದ್ರದ ಮೇಲೆ ಬೊಟ್ಟು ಮಾಡಿ ತೋರಿಸುವುದಲ್ಲ. ರಾಜ್ಯ ಸರ್ಕಾರದ ಜವಾಬ್ದಾರಿಯೂ ಹೆಚ್ಚಾಗಿದೆ. ಆದಷ್ಟು ಬೇಗ ರಾಜ್ಯ, ಕೇಂದ್ರ ಸರ್ಕಾರ ಶೀಘ್ರ ಪರಿಹಾರ ಘೋಷಣೆ ಮಾಡುವ ಮೂಲಕ ರೈತರಿಗೆ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಜನಕ್ಕೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ. ಸಂಸದೆಯಾಗಿ ನಾನು ಮಾಡುತ್ತಿರುವ ಜನಸೇವೆ ನನಗೆ ತೃಪ್ತಿತಂದಿದೆ. ಇದೇ ರೀತಿ ಜನರೆ ಪ್ರೀತಿ, ವಿಶ್ವಾಸ, ಅಭಿಮಾನ ಇದ್ದರೆ ಮುಂದಕ್ಕೂ ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದರು.
ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ: ಸಿ.ಎಂ.ಇಬ್ರಾಹಿಂ
ಸರ್ಕಾರ ಕೊಡುವ ಅನುದಾನವನ್ನು ಸಂಸದೆಯಾಗಿ ಸಮರ್ಪಕವಾಗಿ ಸದ್ಬಳಕೆ ಮಾಡಿದ್ದೇನೆ ಅಷ್ಟೆ. ಅದನ್ನು ಬಿಟ್ಟು ನಾನೇನು ದೊಡ್ಡದಾಗಿ ನಾನೇ ಮಾಡಿದ್ದೇನೆ ಎಂದು ಹೇಳಿಕೊಳ್ಳೋದಿಲ್ಲ. ಆ ರೀತಿ ನಡೆದುಕೊಳ್ಳುವುದನ್ನು ಅಂಬರೀಶ್ ಅವರು ನನಗೆ ಹೇಳಿಕೊಟ್ಟಿಲ್ಲ ಎಂದರು. ಅಂಬರೀಶ್ ಅವರು ಮಾಡಿದ ದಾನ ಮೊತ್ತೊಂದು ಕೈಗೆ ತಿಳಿಯುತ್ತಿರಲಿಲ್ಲ. ಅದೇರೀತಿ ನಾನು ಸಹ ಕೆಲಸ ಮಾಡುತ್ತಿದ್ದೇನೆ. ನಿಮ್ಮೆಲ್ಲ ಆಶೀರ್ವಾದ ಅಭಿಮಾನ ಇದೆ ಎಂದು ನಂಬಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನ ಇದ್ದರೆ ಮುಂದಕ್ಕೂ ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದರು.
ಮಂಡ್ಯ ಬಿಟ್ಟು ಬೇರೆ ಕ್ಷೇತ್ರದ ಆಫರ್ ಒಪ್ಪೋಲ್ಲ: ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಬಗ್ಗೆ ಯೋಚನೆಯನ್ನೂ ಮಾಡಿಲ್ಲ. ಈ ಮಾತನ್ನು ನೂರಾರು ಬಾರಿ ಹೇಳಿದ್ದೇನೆ. ಇನ್ನು ರಕ್ತದಲ್ಲಿ ಬರೆದುಕೊಡಬೇಕಾ ಎಂದು ಸಂಸದೆ ಸುಮಲತಾ ಅಂಬರೀಶ್ ಪ್ರಶ್ನಿಸಿದರು. ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಂಡ್ಯ ಸೊಸೆ, ಯಾವತ್ತಿಗೂ ಮಂಡ್ಯ ನನ್ನ ರಾಜಕೀಯ ಕ್ಷೇತ್ರ. ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗೋಲ್ಲ ಎಂದು ಪುನರುಚ್ಚರಿಸಿದರು.
ಎಚ್‌ಡಿಕೆ ಹೇಳಿದಂತೆ ಕೀಳುಮಟ್ಟಕ್ಕೆ ಇಳಿದಿದ್ರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್
ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಆಫರ್ ನೀಡಿದ್ದರು. ಅದನ್ನು ನಾನು ನಿರಾಕರಿಸಿದ್ದೆ. ಮಂಡ್ಯ ಕ್ಷೇತ್ರವನ್ನೇ ಪ್ರತಿನಿಧಿಸಲು ನಿರ್ಧರಿಸಿದೆ. ನನ್ನ ನಿರೀಕ್ಷೆಯಂತೆ ಲೋಕಸಭೆಯಲ್ಲಿ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಮುಂದೆಯೂ ಬೇರೆ ಕ್ಷೇತ್ರದ ಆಫರ್‌ನ್ನು ಎಂದಿಗೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಂಡ್ಯ ಜಿಲ್ಲೆ ರಾಜಕಾರಣ ಯಾವಾಗಲೂ ಸವಾಲೇ. ಆದರೆ, ಸವಾಲಿಗೆ ಹೆದರುವ ಸ್ವಭಾವ ನನ್ನದಲ್ಲ. ರಾಜಕಾರಣ ಬಿಟ್ಟರೂ ನಾನು ನಂಬಿರುವ ಸ್ವಾಭಿಮಾನ, ಸಿದ್ದಾಂತ ಬಿಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ವಿಶ್ವಾಸವಿದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನು ಯಾವಾಗಲೂ ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ ಎಂದು ನುಡಿದರು.