ಮಂಡ್ಯ ಜಿಲ್ಲೆಯಲ್ಲಿ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆ ಮಟ್ಟ ಹಾಕಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಎಂದು ಸಂಸದೆ ಸುಮಲತಾ ಅಂಬರೀಶ್ ಟೀಕಿಸಿದ್ದಾರೆ.
ಮಂಡ್ಯ (ಮೇ 18): ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದಿರುವ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ ಎಂದು ಮಂದ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಎಚ್ಚರಿಸಿದ್ದರೂ ಈ ಬಗ್ಗೆ ಅಸಡ್ಡೆ ಯಾಕೆ? ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಯಾಕೆ ತೋರಿದೆ! ಪಾಂಡವಪುರ ಪಟ್ಟಣದ ಸರ್ಕಾರಿ ಕ್ವಾಟ್ರಸ್‌ನಲ್ಲಿ, ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ನೀಚ ಕೃತ್ಯ ಕಳವಳಕಾರಿ ಎಂದು ಟೀಕೆ ಮಾಡಿದ್ದಾರೆ. ಈ ಹಿಂದೆಯೇ ಈ ಪ್ರಕರಣಗಳು ಬೆಳಕಿಗೆ ಬಂದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಪುನಃ ಇಂತಹ ಪ್ರಕರಣಗಳು ನಡೆಯುತ್ತಿದ್ದವೇ? ಈಗಲಾದರೂ ಈ ದುಷ್ಕೃತ್ಯದಲ್ಲಿ ಶಾಮೀಲಾದ ವೈದ್ಯಾಧಿಕಾರಿಗಳು ಸೇರಿದಂತೆ ಇತರ ತಪ್ಪಿತಸ್ಥರಿಗೆ ಸರ್ಕಾರ ಶಿಕ್ಷೆ ವಿಧಿಸುವುದೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
undefined
ಬೆಂಗಳೂರು-ಮೈಸೂರು ಹೈವೇನಲ್ಲಿ 10 ರೂ.ಗೆ ಸಿಗುತ್ತೆ ಹೊಟ್ಟೆ ತುಂಬಾ ತಿಂಡಿ; ತಟ್ಟೆ ತುಂಬಾ ಮಲ್ಲಿಗೆ ಇಡ್ಲಿ, ಬೋಂಡ!
ಭ್ರೂಣ ಲಿಂಗ ಪತ್ತೆಯಿಂದಾಗಿ ಅದೆಷ್ಟೋ ಹೆಣ್ಣು ಶಿಶುಗಳು ಗರ್ಭದಿಂದ ಹೊರಬಂದು, ಹೊರ ಜಗತ್ತನ್ನು ಕಾಣುವ ಮೊದಲೇ ಹತ್ಯೆಯಾಗುತ್ತಿದ್ದಾರೆ. ಓರ್ವ ತಾಯಿಯಾಗಿ ಇಂತಹ ಹೇಯ ಕೃತ್ಯದ ಬಗ್ಗೆ ತಿಳಿದು ನೋವಾಗುತ್ತಿದೆ. ರಾಜ್ಯ ಸರ್ಕಾರ ಈ ರಾಕ್ಷಸ ಪ್ರವೃತ್ತಿಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸದೆ ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
'ಗಂಡನನ್ನು ಮರೆತುಬಿಡು' ಚಂದ್ರಕಾಂತ್ ಪತ್ನಿಗೆ ಕರೆ ಮಾಡಿ ಹೇಳಿದ್ದ ನಟಿ ಪವಿತ್ರಾ ಜಯರಾಂ!
ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ಸಂಸದೆ ಸುಮಲತಾ ಅಂಬರೀಶ್ ಅವರು, ಮಂಡ್ಯದಲ್ಲಿ ಮಹಿಳಾ ಸಂಸದೆ ಇದ್ದರೂ ಮಹಿಳಾ ಭ್ರೂಣ ಹತ್ಯೆ ಮಾಡುವ ಘಟನೆ ನಡೆಯುತ್ತಿರುವುದರ ಬಗ್ಗೆ ತೀವ್ರ ಕಟುವಾಗಿ ಟೀಕಿಸಿದ್ದಾರೆ. ಜೊತೆಗೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಭ್ರೂಣ ಹತ್ಯೆ ಮಾಡುವವರಿಗೆ ಕಠಿಣ ಶಿಕ್ಷೆ ನೀಡುವಂತೆಯೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪಾಂಡವಪುರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಟ್ಯಾಗ್ ಮಾಡಿದ್ದಾರೆ.