ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ; ಮೋದಿ ಸಮುದ್ರ ಈಜಿದ ಮನುಷ್ಯ ಇಬ್ಬರ ನಡುವೆ ಹೋಲಿಕೆ ಎಲ್ಲಿಯದು?: ಶ್ರೀನಿವಾಸ ಪ್ರಸಾದ ವಾಗ್ದಾಳಿ

Published : Feb 22, 2024, 12:37 PM ISTUpdated : Feb 22, 2024, 12:49 PM IST
ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ; ಮೋದಿ ಸಮುದ್ರ ಈಜಿದ ಮನುಷ್ಯ ಇಬ್ಬರ ನಡುವೆ ಹೋಲಿಕೆ ಎಲ್ಲಿಯದು?: ಶ್ರೀನಿವಾಸ ಪ್ರಸಾದ ವಾಗ್ದಾಳಿ

ಸಾರಾಂಶ

ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಹೋಲಿಕೆ ಎಲ್ಲಿದೆ? ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು

ಮೈಸೂರು (ಫೆ.22): ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಹೋಲಿಕೆ ಎಲ್ಲಿದೆ? ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಗೆದ್ದು ಅದೇ ಗುಂಗಿನಲ್ಲಿ ಇದ್ದಾರೆ. ಆದರೆ ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲ ತಂತ್ರಗಳು, ಆಮಿಷಗಳು ನಡೆಯುತ್ತಾ ನೋಡೋಣ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ರು, ಏನೋ ಭಾಷಣ ಮಾಡಿದ್ರು. ಪ್ರಧಾನಿ, ಕೇಂದ್ರ ಸಚಿವರ ವಿರುದ್ಧ ಬಾಯಿಗೆ ಬಂದಂತೆ ಮಾತಾನಾಡಿದ್ರು. ಕೇಳುವ ರೀತಿಯಲ್ಲಿ ಕೇಳಿದ್ರೆ ನಮ್ಮ ತೆರಿಗೆ  ಬರುತ್ತೆ. ಯಾವ ಸರ್ಕಾರವೂ ಅನ್ಯಾಯ ಮಾಡೊಲ್ಲ. ನಾನು ಹಿಂದೆ ಕಂದಾಯ ಸಚಿವನಾಗಿದ್ದಾಗಲೂ ಹೋಗಿ ಕೇಳಿದ್ದೆ. ನಮ್ಮ ಹಣ ನಮಗೆ ಬಂದಿತ್ತು. ಆದರೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಕಿರುಚುವುದನ್ನು ಮಾತ್ರ ಕಲಿತಿದ್ದಾನೆ ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣಾ ಅಖಾಡಕ್ಕಿಳಿಯಲು ಸರ್ಕಾರಿ ಹುದ್ದೆಗೆ ಗುಡ್‌ಬೈ ಹೇಳಿದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯ!

ಸಿದ್ದರಾಮಯ್ಯ, ಜಮೀರ್‌ಗೂ ಏನಾದರೂ ವ್ಯತ್ಯಾಸ ಇದೆಯಾ? ಇಬ್ಬರೂ ಸುಮ್ಮನೆ ಕೂಗಾಡ್ತಾರೆ.  ಹೆರಿಗೆ ವಾರ್ಡ್‌ನಲ್ಲಿ ಇವರೇನಾದರೂ ಕಿರುಚಿದ್ರೆ ಹೆರಿಗೆಯೇ ಆಗಿಬಿಡುತ್ತದೆ. ಆ ರೀತಿ ಕೂಗುವುದನ್ನು ಕಲಿತಿದ್ದಾರೆ. ಹೆಣ್ಣುಮಕ್ಕಳಿಗೆ ಗೌರವ ಕೊಡುವುದನ್ನು ಸಹ ಕಲಿತಿಲ್ಲ. ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಏಕವಚನದಲ್ಲಿ ಬಾಯಿಗೆ ಬಂದಂತೆ ಮಾತಾಡ್ತಾರೆ. ಸಂಸ್ಕಾರವಿಲ್ಲದ ಇಂತಹ ಸಿದ್ದರಾಮಯ್ಯನ ಬಗ್ಗೆ ಏನು ಮಾತಾಡಲಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು; ಪೂರ್ವಸಿದ್ಧತಾ ಪರೀಕ್ಷೆಗೆ ವ ...

ಚಾಮರಾಜನಗರ ಲೋಕಸಭಾ ಅಭ್ಯರ್ಥಿಗಳಲ್ಲಿ ನನ್ನ ಇಬ್ಬರು ಅಳಿಯಂದಿರ ಜೊತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನ್ನ್ಯೋನ್ನವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಇನ್ನು ಚಾಮರಾಜನಗರ ಕ್ಷೇತ್ರದ ಟಿಕೇಟ್ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನ ವಿಜಯೇಂದ್ರರಿಗೆ ಹೇಳಿದ್ದೇನೆ. ಮಾರ್ಚ್ 17 ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಲೆ ಹೋಗಿವುದಿಲ್ಲ. ಆದರೆ ಬಿಜೆಪಿಯನ್ನು‌ ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ. ಇದೇ ವೇಳೆ ಮಹದೇವಪ್ಪ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ನಮ್ಮ‌ವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್