ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಶಿವಮೊಗ್ಗ (ಸೆ.29): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಪ್ರಭಾವ ಇರುವ ಸ್ಥಾನ. ಹಾಗಾಗಿ ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಹಗರಣ ನಡೆದಿರುವ ಬಗ್ಗೆ ಎಲ್ಲವೂ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯುವುದಿಲ್ಲ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಹೇಳಿದರು.
ಪ್ರತಿ ಗ್ರಾ.ಪಂ.ನಲ್ಲಿ ಸಹಕಾರ ಸಂಘ ಸ್ಥಾಪಿಸಬೇಕು ಅನ್ನುವುದು ಪ್ರಧಾನಿ ಅವರ ಕನಸು. ಹಾಗಾಗಿ ಈಗಾಗಲೇ ಪ್ರಧಾನಿಯವರು ಘೋಷಣೆ ಮಾಡಿದ್ದಾರೆ. ಸಹಕಾರ ಸಂಘ ಬಲಿಷ್ಠ ಸ್ತಂಭ ಆಗಬೇಕು ಎಂದರು. ವಿಐಎಸ್‌ಎಲ್ ಕನ್ನಡಿಗರ ಹೆಮ್ಮೆಯ ಸಂಸ್ಥೆ. ಅದರ ಉಳಿವಿಗಾಗಿ ನಮ್ಮ ಪ್ರಯತ್ನ ಇರುತ್ತದೆ. ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಭೇಟಿ ನೀಡಿದ್ದಾರೆ. ಇದನ್ನ ನಮ್ಮ ಕುಟುಂಬ ಆರಂಭಿಸಿತ್ತು. ಅದನ್ನ ಉಳಿಸುವ ಕೆಲಸ ಆಗಲಿದೆ. ವಿಐಸ್‌ಎಲ್ ಹೆಮ್ಮೆಯ ಸಂಸ್ಥೆಯಾಗಿದೆ. ಅದಕ್ಕೆ ನಮ್ಮ ಪ್ರೋತ್ಸಾಹವಿದೆ ಎಂದು ಹೇಳಿದರು. ಮೈಸೂರು-ಕೊಡಗು ಆರ್ಗನಿಕ್ ಅಭಿವೃದ್ಧಿಯಾಗಬೇಕು. ಪಾರಂಪರಿಕ ಅಭಿವೃದ್ಧಿಯ ಅಗತ್ಯವಿದೆ.
undefined
ಪ್ರವಾಸೋದ್ಯಮ ಆರ್ಥಿಕವಾಗಿ ಅವಲಂಭಿಸಿದೆ. ಮೈಸೂರಿನಲ್ಲಿ ಏರ್ ಪೋರ್ಟ್ ಆಗ ಬೇಕಿದೆ. 46 ಎಕರೆ ಭೂಸ್ವಾಧೀನ ಆಗ ಬೇಕಿದೆ. ಹೈವೆ, ಲೈಟ್ ಕಂಬಗಳು ಶಿಫ್ಟ್ ಆಗಬೇಕಿದೆ. ನಂತರ ಕ್ರೆಡಿಲ್ ನಿಂದ ಏರ್ ಪೋರ್ಟ್ ನಿರ್ಮಿಸಲಾಗುವುದು ಎಂದರು. ಕೇಂದ್ರ ಸಚಿವೆ ನಿರ್ಮಲ ಸೀತಾ ರಾಮನ್ ಅವರ ಮೇಲೆ ಎಫ್‌ಐಆರ್ ಆಗಿದೆ. ಇದರ ಬಗ್ಗೆ ಕಾನೂನು ಕ್ರಮ ಆಗಲಿದೆ. ಮೊದಲು ಸಿಎಂ ರಾಜೀನಾಮೆ ನೀಡಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್,ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್, ಪ್ರಮುಖರಾದ ಎಸ್.ದತ್ತಾತ್ರಿ, ಮಾಜಿ ಶಾಸಕ ಕೆ.ಜಿ ಕುಮಾರ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ತಿರುಮಲದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ: ಭಕ್ತರಲ್ಲಿ ಹೆಚ್ಚಾಯ್ತು ಆತಂಕ, ಎಚ್ಚರಿಕೆ ಕೊಟ್ಟ ಟಿಟಿಡಿ!
ದೇವಾಲಯ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ದೇವಸ್ಥಾನದ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಇರಬಾರದು. ಈ ವಿಷಯ ಹೈಕೋರ್ಟ್‌ನಲ್ಲಿದೆ. ಇದರ ಬಗ್ಗೆ ಚರ್ಚೆ ಮಾಡದಿರುವುದೇ ಒಳ್ಳೆ ಯದು. ಕೊಡಗು ಪರಂಪರೆ ಸಂರಕ್ಷಣೆ ಮಾಡಬೇಕು. ಮೈಸೂರು ಕೊಡಗು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುವುದು. ಕುಶಾಲನಗರಕ್ಕೆ ಹೈವೇ ನಿರ್ಮಾಣ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.