
ಬೆಂಗಳೂರು, (ಆ.13): ಒಂದು ಕಾಲದಲ್ಲಿ ಗುರು- ಶಿಷ್ಯರಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಎಂಟಿಬಿ ನಾಗರಾಜ್ ಬದಲಾದ ರಾಜಕೀಯ ಬೆಳವಣಿಗೆಯಿಂದ ದೂರವಾಗಿದ್ರು. ಆದ್ರೆ, ರಾಜಕೀಯ ಬೇರೆ ಸ್ನೇಹ ಸಂಬಂಧಗಳು ಬೇರೆ. ರಾಜಕೀಯದಲ್ಲಿ ಯಾರು ಶತ್ರುನೂ ಅಲ್ಲ, ಮಿತ್ರರು ಅಲ್ಲ ಎನ್ನುವುದಕ್ಕೆ ಇವರೇ ಸಾಕ್ಷಿ.
ಹೌದು....ದೂರ-ದೂರವಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಸಿದ್ದರಾಮಯ್ಯ ಒಂದೆಡೆ ಸೇರಿಕೊಂಡು ಭರ್ಜರಿ ಊಟ ಮಾಡಿದ್ದಾರೆ.
ಸಿದ್ದರಾಮಯ್ಯ ಭೇಟಿಗೆ ಸ್ಪಷ್ಟನೆ ಕೊಟ್ಟ ಬಿಜೆಪಿ ಶಾಸಕ
ಇಂದು (ಆ.13) ಹೊಸಕೋಟೆ ಪಟ್ಟಣದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಹಾಗೂ ಎಂಟಿಬಿ ನಾಗರಾಜ್ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಒಟ್ಟಾಗಿ ಕುಳಿತು ಊಟ ಮಾಡಿದರು.
ಬಳಿಕ ಕನಕ ಸಮೃದ್ದಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಒಟ್ಟಾಗಿ ಭಾಗವಹಿಸಿ ಇಬ್ಬರು ತಮ್ಮ ಪಾಡಿಗೆ ತಾವು ವಾಪಸ್ಸಾಗಿದ್ದಾರೆ. ಆದ್ರೆ, ಇಬ್ಬರ ಫೋಟೋಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಅಲ್ಲದೇ ಅಭಿಮಾನಿಗಳು ನಾನಾ ಅಭಿಪ್ರಾಯಗಳನ್ನ ವ್ಯಕ್ತಪಡಿಸುತ್ತಿದ್ದಾರೆ.
ಬಯಸಿದ ಖಾತೆ ಸಿಕ್ಕಿಲ್ಲವೆಂದು ಎಂಟಿಬಿ ನಾಗರಾಜ್ ಅಸಮಾಧಾನಗೊಂಡಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯನವರ ಜತೆ ಕಾಣಿಸಿಕೊಂಡಿದ್ದು, ನಾನಾ ಚರ್ಚೆಗಳಿಗೆ ಗ್ರಾಸವಾಗಿದೆ.
ಎರಡು ವರ್ಷಗಳ ಹಿಂದೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಸೇರಿದ್ದ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.