
ಹಾವೇರಿ, (ಜ.15): ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ಬರಲು ಕಾರಣರಾದವರೆಲ್ಲರಿಗೂ ಮಂತ್ರಿ ಸ್ಥಾನ ಫಿಕ್ಸ್ ಎನ್ನಲಾಗಿತ್ತು. ಆದ್ರೆ, ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮಂತ್ರಿಭಾಗ್ಯ ಕೈತಪ್ಪಿದೆ.
ಈ ಹಿಂದೆ ಉಪಚುನಾವಣೆಯಲ್ಲಿ ಇದೇ ಬಿಜೆಪಿ ನಾಯಕರು ಮುನಿರತ್ನ ಗೆದ್ದರೇ ಮಂತ್ರಿ ಫಿಕ್ಸ್ ಎಂದು ಪ್ರಚಾರ ಮಾಡಿದ್ದರು. ಆದ್ರೆ, ಇದೀಗ ಅವರಿಗೆ ಕೈಕೊಟ್ಟಿರುವುದು ಏಕೆ ಎನ್ನುವ ಭಾರೀ ಚರ್ಚೆಗೆ ಕಾರಣವಾಗಿದೆ.
ಇನ್ನು ಮುನಿರತ್ನ ಅವರಿಗೆ ಸಚಿವ ಸ್ಥಾನ ಏಕೆ ಸಿಕ್ಕಿಲ್ಲ ಎನ್ನುವ ಬಗ್ಗೆ ಬಾಂಬ್ ತಂಡದ ಸದಸ್ಯ ಎಂಟಿಬಿ ನಾಗರಾಜ್ ಅವರು ಕಾರಣ ಬಿಚ್ಚಿಟ್ಟಿದ್ದಾರೆ.
'ಯತ್ನಾಳ್ ಬಿಜೆಪಿ ಸೇರ್ಪಡೆ ಬೇಡವೆಂದ್ರೂ ಬಿಎಸ್‌ವೈ ಕೇಳಲಿಲ್ಲ, ಈಗ ಅವರಿಗೆ ಮುಳುವು'
ಕಾಗಿನೆಲೆಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂಟಿಬಿ, ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡದಿದ್ದಕ್ಕೆ ಬೇರೆ ಬೇರೆ ಕಾರಣಗಳಿವೆ. ನ್ಯಾಯಾಲಯದಲ್ಲಿ ಅವರ ವಿರುದ್ಧ ಪ್ರಕರಣಗಳಿವೆ. ಹೀಗಾಗಿ ಅವರಿಗೆ ಮಂತ್ರಿ ಸ್ಥಾನ ಕೊಟ್ಟಿಲ್ಲ. ಎಲ್ಲವೂ ಬಗೆಹರಿದ ಮೇಲೆ ಮುಂದಿನ ದಿನಗಳಲ್ಲಿ ಅವರು ಮಂತ್ರಿ ಆಗುತ್ತಾರೆ ಎಂದರು.
ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಂಬಂಧಪಟ್ಟ ಸಿ.ಡಿ. ಇದೆ ಅಂತಿದ್ದಾರೆ. ಆ ಬಗ್ಗೆ ನನಗೇನೂ ಗೊತ್ತಿಲ್ಲ. ನ್ಯಾಯಾಲಯದಿಂದ ತೀರ್ಪು ಬಂದ ಹಿನ್ನೆಲೆಯಲ್ಲಿ ವಿಶ್ವನಾಥ್ ಅವರು ವಿಧಾನಸಭೆಗೆ 'ನಾಮಿನಿ' ಆಗಿಲ್ಲ. ಮುಂದಿನ ದಿನಗಳಲ್ಲಿ ಅವರಿಗೂ ಅವಕಾಶ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಿ.ಪಿ.ಯೋಗೇಶ್ವರ 420 ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ಪ್ರಕರಣಗಳಿವೆಯೋ ಅವು ನ್ಯಾಯಾಲಯದಲ್ಲಿ ಇತ್ಯರ್ಥ ಆಗಬೇಕು. ಮುಖ್ಯಮಂತ್ರಿ ಮತ್ತು ವರಿಷ್ಠರು ತಿರ್ಮಾನ ಮಾಡಿಯೇ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.