ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ: ಸಚಿವ ಎಂ.ಬಿ.ಪಾಟೀಲ್

By Kannadaprabha NewsFirst Published Aug 21, 2024, 3:34 PM IST
Highlights

ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. 136 ಸೀಟು ಗೆದ್ದು ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದರು. 

ವಿಜಯಪುರ (ಆ.21): ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. 136 ಸೀಟು ಗೆದ್ದು ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದರು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲಿ ನಡೆದುಕೊಂಡ ರಾಜ್ಯಪಾಲರ ನಡೆ ಹಾಗೂ ಬಿಜೆಪಿಯ ಕುತಂತ್ರ ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ಹಟಾವೋ ಕರ್ನಾಟಕ ಬಚಾವೋ ಬೃಹತ್ ಪ್ರತಿಭಟನಾ ರ್‍ಯಾಲಿಯ ನೇತೃತ್ವ ವಹಿಸಿ ಮಾತನಾಡಿದರು. ಸಿದ್ದರಾಮಯ್ಯನವರ ಪಾತ್ರವೇ ಇಲ್ಲದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಆದೇಶಿಸಲಾಗಿದೆ. 

ಇದಕ್ಕೂ ಮೊದಲೇ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರಗೇಶ ನಿರಾಣಿ, ಜನಾರ್ಧನ ರೆಡ್ಡಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೇಲೆ ಪ್ರಾಥಮಿಕ ತನಿಖೆ ಆಗಿದ್ದು, ತನಿಖೆಗೆ ಪರವಾನಗಿ ಕೇಳಿದ್ದಾರೆ, ಕೊಟ್ಟಿಲ್ಲ. ಆದರೆ, ಸಿದ್ದರಾಮಯ್ಯನವರ ಮೇಲೆ ಪ್ರಾಥಮಿಕ ತನಿಖೆಯೇ ಆಗಿಲ್ಲ, ಆಗಲೇ ಪ್ರಾಸಿಕ್ಯೂಷನ್ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಪಿಸಿದರು. ದೇವರಾಜ ಅರಸು ಅವರ ಬಳಿಕ ಐದು ವರ್ಷ ಪೂರೈಸಿದವರು ಸಿದ್ದರಾಮಯ್ಯನವರು 136 ಸೀಟ್ ಗೆದ್ದು ಅನೇಕ ಭಾಗ್ಯಗಳನ್ನು ಕೊಟ್ಟಿದ್ದಾರೆ. 2ನೇ ಬಾರಿ ಮುಖ್ಯಮಂತ್ರಿ ಆದಬಳಿಕ ಪಂಚ್‌ ಗ್ಯಾರಂಟಿಗಳನ್ನು ಕೊಟ್ಟು ಸಾಧಿಸಿದವರು. ಅವರ 40 ವರ್ಷದ ರಾಜಕೀಯದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದು ಬಿಜೆಪಿಯವರು ಎಂದು ದೂರಿದರು.

Latest Videos

ಡಿಕೆಶಿ ಜತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಶಾಸಕ ರಾಜೂ ಆಲಗೂರ ಮಾತನಾಡಿ, ಇಂದು ದೇಶದಲ್ಲೇ ಪ್ರಾಮಾಣಿಕ ಸಿಎಂ ಸಿದ್ದರಾಮಯ್ಯನವರು ಬಡವರ ಪರವಾದ ಆಡಳಿತ, ದಲಿತರ ಪರವಾದ ಆಡಳಿತ ಕೊಟ್ಟವರು. ಆದರೆ, ಅವರ ಮೇಲೆ ಅಮೀತ್ ಶಾ, ಮೋದಿ ಅವರು ಸೇರಿ ದೊಡ್ಡ ಹುನ್ನಾರ ನಡೆಸಿದ್ದಾರೆ. ಹಾಗಾಗಿ ರಾಜ್ಯಪಾಲರ ವಿರುದ್ಧವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇವೆ‌ ಎಂದರು. ಸಿಎಂ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಧೀಮಂತ ನಾಯಕನನ್ನು ದುಸ್ಥರಗೊಳಿಸುವ ಹುನ್ನಾರಕ್ಕೆ ನಮ್ಮ ಧಿಕ್ಕಾರವಿದೆ. ನೀವು ನಡೆಸಿದ ಹುನ್ನಾರ ಬರುವ ದಿನಗಳಲ್ಲಿ ನಿಮಗೆ ತಿರುಗುಮಂತ್ರವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ರ್‍ಯಾಲಿಯಲ್ಲಿ ಶಾಸಕರುಗಳಾದ ಸಿ.ಎಸ್.ನಾಡಗೌಡ(ಅಪ್ಪಾಜಿ), ಸುನೀಲಗೌಡ ಪಾಟೀಲ, ಅಶೋಕ ಮನಗೂಳಿ, ಮಾಜಿ ಶಾಸಕ ಡಾ.ಮಕ್ಬುಲ್ ಬಾಗವಾನ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರುಗಳಾದ ಅಬ್ದುಲ್ ಹಮೀದ್ ಮುಶ್ರಿಫ್, ಎಸ್.ಎಂ.ಪಾಟೀಲ್ ಗಣಿಹಾರ, ಗಂಗಾಧರ ಸಂಬಣ್ಣಿ, ಸೋಮನಾಥ ಕಳ್ಳಿಮನಿ ಮಹಿಳಾ ನಾಯಕಿಯರಾದ ಕಾಂತಾ ನಾಯಕ, ವಿದ್ಯಾರಾಣಿ ತುಂಗಳ, ಸ್ನೇಹಲತಾ ಶೆಟ್ಟಿ, ಶ್ರೀದೇವಿ ಉತ್ಲಾಸರ್, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಜಿಲ್ಲೆ, ನಗರ, ತಾಲೂಕುಗಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಿದ್ದರಾಮಯ್ಯನವರ ಅಭಿಮಾನಿಗಳು ಭಾಗವಹಿಸಿದ್ದರು.

ಶೋಷಿತ ವರ್ಗಕ್ಕೆ ಧ್ವನಿಯಾದ ಸಿಎಂ ವಿರುದ್ಧ ಷಡ್ಯಂತ್ರ: ಸಿದ್ದರಾಮಯ್ಯನವರು ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣ ಮಾಡಿದ ಅಪರೂಪದ ನಾಯಕ‌. ಅಂತಹವರ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡಿದೆ ಎಂದು ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ರಾಜ್ಯಪಾಲರನ್ನು ಹಠಾವೋ ಕರ್ನಾಟಕ ಬಚಾವೋ ಚಳುವಳಿ ನಡೆಸಲಾಗುತ್ತಿದೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ಶುರುವಾಗಿದೆ. ಬಿಜೆಪಿ ಷಡ್ಯಂತ್ರವನ್ನು ರಾಜ್ಯದ ಜನತೆ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 40 ವರ್ಷದ ರಾಜಕಾರಣದಲ್ಲೇ ಎಂದೂ ಅವರು ಕಳಂಕ ಹೊತ್ತಿಲ್ಲ. ಅಹಿಂದ ಶೋಷಿತ ವರ್ಗಕ್ಕೆ ಧ್ವನಿಯಾದವರು ಸಿಎಂ ಎಂದರು.

ದೇವರಾಜ ಅರಸು ಆಶಯಗಳು ಸಿದ್ದರಾಮಯ್ಯ ಮೂಲಕ ಮುಂದುವರಿಕೆ: ಸಚಿವ ಡಿ.ಸುಧಾಕರ್

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ: ಸಿದ್ದರಾಮಯ್ಯನವರ ಜನತಾ ನ್ಯಾಯಾಲಯದ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ದೂರಿದರು. ರಾಜ್ಯಪಾಲರು ಬಿಜೆಪಿ ಕೈಗೊಂಬೆ ಆಗಿದ್ದಾರೆ. ನಾಡಿನ ಜನತೆಯ ಅಧಿಪತಿ ಸಿದ್ಧರಾಮಯ್ಯನವರು. 2023 ರಲ್ಲಿ 136 ಸೀಟು ಜನತೆ ಅವರಿಗೆ ಕೊಟ್ಟಿದ್ದಾರೆ. ಅಂದಿನಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಹೇಗೆ ಅಸ್ಥಿತರಗೊಳಿಸಬೇಕು ಎಂದು ಬಿಜೆಪಿ ನಿದ್ದೆಯೇ ಮಾಡಿಲ್ಲ. ರಾಜ್ಯಪಾಲರ ಹಟಾವೋ ಕರ್ನಾಟಕ ಬಚಾವೋ ಆಗಬೇಕು. ಆ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಗುಡುಗಿದರು.

click me!