ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟು ನಮ್ಮಂತಹವರಿಗೆ ಮಾದರಿಯಾಗಲಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಆಗ್ರಹಿಸಿದರು.
ಮೈಸೂರು (ಅ.05): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟು ನಮ್ಮಂತಹವರಿಗೆ ಮಾದರಿಯಾಗಲಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಆಗ್ರಹಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಜೆಡಿಎಸ್ ಪಕ್ಷಕ್ಕೂ ಅವರ ಹೇಳಿಕೆಗೂ ಸಂಬಂಧವಿಲ್ಲ. ಪಕ್ಷದ ಅಭಿಪ್ರಾಯವೇ ಬೇರೆ ಎಂದರು. ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡುತ್ತಿರುವುದು ರಾಜ್ಯದ ತನಿಖಾ ಸಂಸ್ಥೆ. ಕುಮಾರಸ್ವಾಮಿ ಪ್ರಭಾವ ಬೀರಲು ಸಾಧ್ಯವೇ ಇಲ್ಲ.
ಆದರೆ, ಸಿಎಂ ವಿರುದ್ಧ ತನಿಖೆ ಮಾಡುತ್ತಿರುವುದು ಅವರ ಕೈಕೆಳಗಿರುವ ಸಂಸ್ಥೆ. ಹೀಗಾಗಿ, ಅವರು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ನಮ್ಮಂತಹವರಿಗೆ ಮಾದರಿಯಾಗಲಿ ಎಂದು ಅವರು ಒತ್ತಾಯಿಸಿದರು. ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ ಎದುರಾಗಿದೆ. ಕಳಂಕಿತರು ಎಂದು ಅವರ ಮೇಲೆ ಆಪಾದನೆ ಬಂದಿದೆ. ಅವರು ತಾತ್ಕಾಲಿಕವಾಗಿಯಾದರೂ ಸಿಎಂ ಹುದ್ದೆಯಲ್ಲಿರುವುದು ಸೂಕ್ತವಲ್ಲ. ಈ ಕುರಿತು ಅವರೇ ಪರಾಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಕುಮಾರಸ್ವಾಮಿಗೆ 50 ಕೋಟಿ ಕೊಟ್ಟವನು ಇಲ್ಲಿಯವರೆಗೆ ಏಕೆ ಸುಮ್ಮನಿದ್ದೆ? ನಿನಗೆ ದುಡ್ಡು ಎಲ್ಲಿಂದ ಬಂತು ಎಂದು ಅವರು ಪ್ರಶ್ನಿಸಿದರು.
ಎಚ್‌ಎಎಲ್‌ನಲ್ಲಿ ಕನ್ನಡಿಗರಿಗೆ ಅನ್ಯಾಯ, 90% ಹುದ್ದೆ ಹೊರ ರಾಜ್ಯದವರಿಗೆ: ತೀವ್ರ ಆಕ್ರೋಶ
ಕಾಂಗ್ರೆಸ್ ಸರ್ಕಾರ ಉರುಳಿಸುವುದು ಅಸಾಧ್ಯ: ರಾಜ್ಯದಲ್ಲಿ 136 ಶಾಸಕರ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿರುವ ಸಿದ್ದರಾಮಯ್ಯ ಸರ್ಕಾರವನ್ನು ಕುತಂತ್ರದಿಂದ ಉರುಳಿಸಲು ಸಾಧ್ಯವಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ತಾಲೂಕಿನ ತವಟಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾಲ್ಕೈದು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಸ್ವಚ್ಛಂದವಾಗಿ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಮೇಲೆ ಮಾಡದ ತಪ್ಪಿನ ಮುಡಾ ನಿವೇಶನ ಹೆಸರಿನಲ್ಲಿ ಸಿದ್ದರಾಮಯ್ಯ ಶಕ್ತಿಯನ್ನು ಕುಂದಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದೆ.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಐ.ಟಿ, ಇ.ಡಿ ಜೊತೆಗೆ ರಾಜ್ಯಪಾಲರ ಕಚೇರಿಯನ್ನೆ ದುರ್ಬಳಕೆ ಮಾಡಿಕೊಂಡು ಸರ್ಕಾರ ಉರುಳಿಸುವ ಯತ್ನ ನಡೆದಿದೆ. ಆದರೆ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಕುತಂತ್ರ ಎಂದಿಗೂ ಫಲ ಕೊಡಲ್ಲ. ಅಂತಿಮವಾಗಿ ಡಿಸೆಂಬರ್ ತಿಂಗಳಿನಲ್ಲಿ ಮುಡಾ ಪ್ರಕರಣದ ತನಿಖೆ ನಂತರ ಎಸ್‌ಐಟಿ ವರದಿ ಬರಲಿದ್ದು ಸಿದ್ದರಾಮಯ್ಯ ಅವರ ಮೇಲಿನ ಕುತಂತ್ರಕ್ಕೆ ತಕ್ಕ ಉತ್ತರ ಸಿಗಲಿದೆ. ಎಂದರು.
Tumakuru: ಎಚ್ಎಎಲ್‌ಗೆ ಜಮೀನು ನೀಡಿದ್ದ ರೈತರಿಗೆ ಪರ್ಯಾಯ ಭೂಮಿ ನೀಡಿದ ಸರ್ಕಾರ
ಕಾಂಗ್ರೆಸ್ ಸರ್ಕಾರ 5 ವರ್ಷ ಪೂರೈಸಲಿದೆ: ಸಿದ್ದರಾಮಯ್ಯ ಸರ್ಕಾರ ಬಡವರ ಅಭಿವೃದ್ಧಿ ದೃಷ್ಟಿಯಿಂದ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡಿ ಬಡವರ ಪಾಲಿನ ಸರ್ಕಾರ ಎನಿಸಿಕೊಂಡಿದೆ. ಆದರೆ ಬಿಜೆಪಿಯವರು ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವ ಹಗಲು ಗನಸು ಹಾಗೆಯೇ ಉಳಿಯಲಿದ್ದು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಐದು ವರ್ಷ ಯಶಸ್ವಿಯಾಗಿ ಪೂರೈಸಲಿದೆ. ಹಾಗೆಯೇ ಗ್ಯಾರಂಟಿ ಯೋಜನೆಗಳು ಸಹ ಐದು ವರ್ಷ ಬಡವರಿಗೆ ದಕ್ಕಲಿವೆ ಎಂದರು.