ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

By Kannadaprabha NewsFirst Published Sep 25, 2024, 7:25 PM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು. 

ಭಟ್ಕಳ (ಸೆ.25): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. 

ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ. ನನಗೆ ಹೈಕೋರ್ಟ್‌ ತೀರ್ಪಿನ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ಆರೋಪದ ಬಗ್ಗೆ ಸರಿಯಾಗಿ ತಿಳಿದುಕೊಂಡಿದ್ದು, ಹೀಗಾಗಿ ನಾನು ಘಂಟಾನುಘೋಷವಾಗಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದೇನೆ. ನನಗೆ ಬೆಂಗಳೂರಿಗೆ ತಕ್ಷಣ ಆಗಮಿಸುವಂತೆ ಯಾರಿಂದಲೂ ಕರೆ ಬಂದಿಲ್ಲ ಎಂದರು.

Latest Videos

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಚ್.ವಿಶ್ವನಾಥ್

ಅಗತ್ಯ ಬಿದ್ದರೆ ಅಧಿಕಾರಿಗಳು ಜನರ ಮನೆಗೆ ತೆರಳಿ ಕೆಲಸ ಮಾಡಲಿ: ಸರ್ಕಾರದ ಯೋಜನೆಗಳು ಜನರಿಗೆ ಸರಿಯಾಗಿ ತಲುಪಬೇಕು. ಇದು ಅಧಿಕಾರಿಗಳು ಕ್ರಿಯಾಶೀಲರಾದರೆ ಮಾತ್ರ ಸಾಧ್ಯ. ಅಧಿಕಾರಿಗಳು ಸದಾ ಕಚೇರಿಯಲ್ಲೇ ಕುಳಿತುಕೊಳ್ಳದೇ ಅಗತ್ಯ ಬಿದ್ದರೆ ಜನರ ಮನೆಗಳಿಗೆ ಹೋಗಿ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚಿಸಿದರು. ಇಲ್ಲಿನ ತಾಪಂ ಸಭಾಭವನದಲ್ಲಿ ಮಂಗಳವಾರ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಜನರ ಕೆಲಸ ಮಾಡಿಕೊಡಬೇಕು. ಕಚೇರಿ ಬಿಟ್ಟು ತಿರುಗಾಡಿ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. 

ಸಮಯವಿದ್ದರೆ ಅಧಿಕಾರಿಗಳು ಸ್ಥಳೀಯ ಶಾಲೆ, ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು. ಆರೋಗ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರು, ತಾಲೂಕಿನಲ್ಲಿ ಇಬ್ಬರಿಗೆ ಕಾಲರಾ ಬಂದಿದ್ದು, ಇಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆಂದಾಗ, ಸಚಿವರು ಮಾರಕ ಕಾಯಿಲೆ ಬಗ್ಗೆ ಎಲ್ಲೆಡೆ ಜನಜಾಗೃತಿ ಮೂಡಿಸಬೇಕು ಎಂದರು. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಸಂಖ್ಯೆ ಕಡಿಮೆ ಇದ್ದು, ಬೇರೆ ತಾಲೂಕಿನಿಂದ ನರ್ಸ್‌ಗಳನ್ನು ನಿಯೋಜನೆ ಮಾಡಬೇಕು ಎಂದು ಆರೋಗ್ಯಾಧಿಕಾರಿ ಸಚಿವರ ಗಮನಕ್ಕೆ ತಂದಾಗ, ಭಟ್ಕಳ ಸರ್ಕಾರಿ ಆಸ್ಪತ್ರೆ 250 ಹಾಸಿಗೆಯ ಆಸ್ಪತ್ರೆ ಆದರೆ ಮಾತ್ರ ಸಿಬ್ಬಂದಿ ಸಮಸ್ಯೆ ಬಗೆಹರಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದರು.

ಹೆಸ್ಕಾಂ ಅಭಿಯಂತರ ಮಂಜುನಾಥ ಅವರು 110 ಕೆವಿ ವಿದ್ಯುತ್ ಸ್ಟೇಷನ್ ಕಾಮಗಾರಿ ನಡೆಯುತ್ತಿದ್ದು, 70 ಟವರ್‌ಗಳಲ್ಲಿ ಈಗಾಗಲೇ 13 ಟವರ್ ಕಾರ್ಯ ಮುಗಿಸಲಾಗಿದೆ. ಕೆಲಸ ತ್ವರಿತವಾಗಿ ನಡೆಯುತ್ತಿದೆ. ತಾಲೂಕಿನಲ್ಲಿ ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಿಸುವ ಕೆಲಸ ನಡೆಯುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಬೇಕು: ಜಗದೀಶ್ ಶೆಟ್ಟರ್

ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಬಸ್ ಓಡಿಸಬೇಕು. ಬೆಣಂದೂರು- ಹದ್ಲೂರು ಭಾಗಕ್ಕೆ ಈ ಹಿಂದಿನಂತೆ ಬಸ್ಸನ್ನು ಆರಂಭಿಸಬೇಕು ಎಂದು ಸಚಿವರು ಸೂಚಿಸಿದರು. ಶಕ್ತಿ ಯೋಜನೆ ಬಗ್ಗೆ ಕೆಲವು ಕಂಡಕ್ಟರ್‌ಗಳು ಮಹಿಳೆಯರಿಗೆ ಗೇಲಿ ಮಾಡುತ್ತಿದ್ದು, ಮತ್ತೊಮ್ಮೆ ಇದು ಪುನರಾವರ್ತನೆ ಆದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇಂತಹ ವರ್ತನೆ ಮುಂದುವರಿದಲ್ಲಿ ನಿರ್ದಾಕ್ಷಿಣ್ಯವಾಗಿ ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

click me!