Muda Case: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

By Santosh Naik  |  First Published Aug 17, 2024, 9:38 AM IST


Muda Scam prosecution ಮುಡಾ ಹಗರಣದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.


ಬೆಂಗಳೂರು (ಆ.17): ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ.ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಮೈಸೂರು ಮೂಲದ ಸ್ನೇಹಮಯಿ ಕೃಷ್ಟ ಹಾಗೂ ಪ್ರದೀಪ್‌ ಎನ್ನುವವರು ಇದೇ ವಿಚಾರದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಗೆ ನೋಟಿಫಿಕೇಷನ್‌ಅನ್ನೂ ಪ್ರತಿಯನ್ನೂ ನೀಡಲಾಗಿದೆ. 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಮೂಲದಿಂದಲೇ ಮಾಹಿತಿ ದೊರೆತಿದೆ. ಈ ಬಗ್ಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, 'ನನ್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ರಾಜಭವನಕ್ಕೆ ಬರಲು ರಾಜ್ಯಪಾಲರು ನನಗೆ ಸೂಚನೆ ನೀಡಿದ್ದಾರೆ. ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಲಿದ್ದೇನೆ' ಎಂದು ತಿಳಿಸಿದ್ದಾರೆ.

Latest Videos

undefined

ನಾನು ತಪ್ಪು ಮಾಡಿಲ್ಲ: ಗೌರ್ನರ್‌ಗೆ ಸಿಎಂ 70 ಪುಟದ ದೀರ್ಘ ಉತ್ತರ

ಈ ಬಗ್ಗೆ ಮಾತನಾಡಿರುವ ಟಿಜೆ ಅಬ್ರಾಹಂ, 'ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸಂಸತ್ ಅಧಿವೇಶನದ ಬಳಿಕ ಸಿದ್ದು ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ?

ಇಂದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸುಳಿವು ಸಿಎಂ ಸಿದ್ಧರಾಮಯ್ಯ ಅವರಿಗೆ ಶುಕ್ರವಾರವೇ ಲಭಿಸಿತ್ತು. ಅದರಂತೆ ಕಳೆದ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆಯೇ ಸಿಎಂ ನಿವಾಸಕ್ಕೆ ಸಚಿವರಾದ ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಬೈರತಿ ಸುರೇಶ್‌ ಮೊದಲಿಗರಾಗಿ ಆಗಮಿಸಿದ್ದಾರೆ. 

ಚಹಾಕೂಟಕ್ಕೆ ಹೋದಾಗ ಸಿಕ್ಕಿತ್ತು ಸುಳಿವು: ಸಿಎಂ ಸಿದ್ಧರಾಮಯ್ಯ ಅವರಿಗೆ ಆಗಸ್ಟ್‌ 15ರಂದೇ ಈ ಬಗ್ಗೆ ಸುಳಿವು ಸಿಕ್ಕಿತ್ತು. ರಾಜಭವನದಲ್ಲಿ ಚಹಾಕೂಟಕ್ಕೆ ಹೋಗಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ಈ ವೇಳೆಯೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿಯೇ ನೀಡುತ್ತಾರೆ ಎನ್ನುವ ಅಂದಾಜು ಸಿಕ್ಕಿತ್ತು ಎನ್ನಲಾಗಿದೆ.  ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಸಿಎಂ ನಿವಾಸದಲ್ಲೇ ಇದ್ದು, ಮುಂದಿನ ಕಾನೂನು ಹೋರಾಟಗಳ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.

ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರೀಕ ಸುರಕ್ಷಾ  ಸಂಹಿತೆ sec 218  ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ

click me!