ಮುಡಾ ಹಗರಣ: ಎಲ್ಲಿಯೂ ಕಾಣಿಸಿಕೊಳ್ಳದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ವಿಚಾರಣೆ ಮುಕ್ತಾಯ!

By Sathish Kumar KH  |  First Published Oct 25, 2024, 4:02 PM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಮೈಸೂರು (ಅ.25): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ಗೌಪ್ಯವಾಗಿ ವಿಚಾರಣೆ ಮಾಡಿ ಕಳುಹಿಸಿದ್ದಾರೆ.

ಮೈಸೂರಿನ ಮುಡಾ ಸೈಟು ಹಂಚಿಕೆಯ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1, ಪಾರ್ವತಿ ಸಿದ್ದರಾಮಯ್ಯ ಎ2, ಮಲ್ಲಿಕಾರ್ಜುನಸ್ವಾಮಿ ಎ3 ಹಾಗೂ ದೇವರಾಜು ಎ4 ಆರೋಪಿಗಳನ್ನಾಗಿ ಮಾಡಿ ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈಗಾಗಲೇ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ3 ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿ ದೇವರಾಜಯ್ಯನನ್ನು ವಿಚಾರಣೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಇದೀಗ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.

Tap to resize

Latest Videos

undefined

ಮುಡಾ 50-50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ಆಗಿದ್ದು, ಇದೇ ಪ್ರಕರಣದ ಎ2 ಆರೋಪಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಸದ್ದಿಲ್ಲದೇ ಕರೆಸಿ ವಿಚಾರಣೆ ಮುಗಿಸಲಾಗಿದೆ. ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ನೇತೃತ್ವದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಕರೆಸಿ ಗೌಪ್ಯ ಸ್ಥಳದಲ್ಲಿ ವಿಚಾರಣೆ ಮಾಡಲಾಗಿದೆ. ಈಗಾಗಲೇ ಎ4, ಎ3 ಆರೋಪಿಗಳು ಸೇರಿದಂತೆ ಹಲವರನ್ನು ಕಚೇರಿಗೆ ಕರೆಸಿ ವಿಚಾರಣೆ ಮಾಡಲಾಗಿದೆ. ಈವರೆಗೆ ಮುಡಾ ಹಗರಣದ ಪ್ರಕರಣದಲ್ಲಿ ಪಾರ್ವತಿ ಸಿದ್ದರಾಂಯ್ಯ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇದೀಗ ಲೋಕಾಯುಕ್ತ ಪೊಲೀಸರು ಕೂಡ ಅವರನ್ನು ಗೌಪ್ಯವಾಗಿ ಕರೆಸಿ ವಿಚಾರಣೆ ಮಾಡಿ ವಾಪಸ್ ಕಳಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಹೆಂಡತಿ 'ಕರಿಮಣಿ ಮಾಲೀಕ ನೀನಲ್ಲ' ಎಂದು ರೀಲ್ಸ್ ಮಾಡಿದರೆ ಗಂಡಂದಿರೇ ಹುಷಾರ್!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ತಮ್ಮ ಹೆಸರಿಗೆ ಪಡೆದುಕೊಂಡಿದ್ದ 14 ಮುಡಾ ನಿವೇಶನಗಳನ್ನು ವಾಪಸ್ ಕೊಡುವಾಗ ಹಾಗೂ ಮುಡಾದಿಂದ ಪಾರ್ವತಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿದ್ದ ಖಾತೆಯನ್ನು ಕ್ಯಾನ್ಸಲ್ ಮಾಡುವ ವೇಳೆಯೂ ಸಿಎಂ ಪತ್ನಿ ಎಲ್ಲಿಯೂ ಕಾಣಿಸಿಕೊಳ್ಳದೇ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದರು. ಸ್ವತಃ ನಿವೇಶನಗಳ ಖಾತೆಯನ್ನು ರದ್ದುಗೊಳಿಸಲಿ ಉಪ ನೊಂದಣಾಧಿಕಾರಿಯೇ ಪಾರ್ವತಿ ಸಿದ್ದರಾಮಯ್ಯ ಅವರು ಇದ್ದಲ್ಲಿಗೆ ಹೋಗಿ ಕ್ಯಾನ್ಸಲೇಷನ್ ಕೆಲಸ ಮಾಡಿಕೊಂಡು ಬಂದಿದ್ದರು. ಇದೀಗ ಲೋಕಾಯುಕ್ತ ಪೊಲೀಸರ ವಿಚಾರಣೆಯಲ್ಲಿಯೂ ಗೌಪ್ಯತೆ ಕಾಪಾಡಲಾಗಿದೆ.

click me!