ಮುಡಾ ಹಗರಣದಿಂದ ಸಿದ್ದರಾಮಯ್ಯ ಭವಿಷ್ಯ ಅಂತ್ಯ: ಶಾಸಕ ಅರವಿಂದ ಬೆಲ್ಲದ

By Kannadaprabha News  |  First Published Sep 25, 2024, 5:20 PM IST

ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನವೇ ಅಂತ್ಯವಾಗಲಿದೆ ಎಂದು ವಿಧಾನಸಭೆಯ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಭವಿಷ್ಯ ನುಡಿದರು. 


ಹುಬ್ಬಳ್ಳಿ (ಸೆ.25): ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನವೇ ಅಂತ್ಯವಾಗಲಿದೆ ಎಂದು ವಿಧಾನಸಭೆಯ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ, ಭ್ರಷ್ಟಚಾರವನ್ನು ಪರಮಾವಧಿಗೆ ಮುಟ್ಟಿಸಿದ್ದಾರೆ. ಅವರು ಮಾಡಿದ ತಪ್ಪಿಗೆ ನ್ಯಾಯಾಲಯದ ತೀರ್ಪು ಮೊದಲ ಹಂತದ ಶಿಕ್ಷೆಯಾದಂತಿದೆ ಎಂದರು. ಮುಡಾ ಹಗರಣವಾಗಿರುವ ಕುರಿತು ರಾಜ್ಯಪಾಲರು ಮುಖ್ಯಮಂತ್ರಿಗೆ ಸ್ಪಷ್ಟನೆ ಕೇಳಿದಾಗ ಅವರು ನೀಡಲಿಲ್ಲ. ಆದ್ದರಿಂದ ರಾಜ್ಯಪಾಲರು ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ನೀಡಿದ್ದರು. 

ಆದರೆ, ಮುಖ್ಯಮಂತ್ರಿಗಳು ಸಂವಿಧಾನಕ್ಕೆ ಬೆಲೆ ನೀಡುವ ಬದಲು ಅದರ ವಿರುದ್ಧ ಹೈಕೋರ್ಟ್‌ ಮೊರೆ ಹೋಗಿದ್ದರು. ಈಗ ಕೋರ್ಟ್ ಅವರ ವಿರುದ್ಧ ತೀರ್ಪು ನೀಡಿದೆ. ಕಾನೂನಿನಲ್ಲಿ ಎಲ್ಲರೂ ಸಮಾನರು ಎಂಬ ಆದೇಶ ಬಂದಿದೆ. ರಾಜ್ಯದ ಜನರು ನಿರೀಕ್ಷೆಯು ಇದೆ ಆಗಿತ್ತು. ಕಾಂಗ್ರೆಸ್‌ಗೆ ಹೊಸ ಸಿಎಂ ನೋಡುವ ಅನಿವಾರ್ಯ ಬಂದಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ದೊಡ್ಡ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಯುತವಾಗಿ ರಾಜೀನಾಮೆ ನೀಡಬೇಕು. ವಿಚಾರಣೆ ನಡೆಯುವ ವೇಳೆ ಸಿಎಂ ಸ್ಥಾನದಲ್ಲಿ ಇರುವುದು ಸೂಕ್ತವಲ್ಲ. ಹೈಕಮಾಂಡ್‌ಗೆ ಬೇರೆ ಅನಿವಾರ್ಯವಿಲ್ಲ. 

Tap to resize

Latest Videos

undefined

ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಬೇಕು: ಜಗದೀಶ್ ಶೆಟ್ಟರ್

ಸಿದ್ದರಾಮಯ್ಯ ರಾಜೀನಾಮೆ ನೀಡುವ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಮೊದಲೇ ಸುಳಿವಿದ್ದು, ಈಗಾಗಲೇ ಹಲವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಟವೆಲ್ ಹಾಕಿದ್ದಾರೆ ಎಂದರು. ಕರ್ನಾಟಕದಲ್ಲಿ ಹಿಂದೆ ಕಾಣದಂತಹ ಹಗರಣ, ಕೋಮು ಗಲಭೆಯಾಗುತ್ತಿವೆ. ಮೈತುಂಬ ಕಪ್ಪು ಇದ್ದವರಿಗೆ ಕಪ್ಪು ಚುಕ್ಕೆ ಇಲ್ಲ ಎಂಬುವುದು ಹಾಸ್ಯಾಸ್ಪದ. ಮಾತನಾಡುವುದು ಸಮಾಜವಾದ. ಮಾಡುವುದು ಭ್ರಷ್ಟಾಚಾರ. ಈಗ ನೋಡಿದರೆ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ರಾಜೀನಾಮೆ ನೀಡದಿದ್ದರೆ ಜನರಿಗೆ ಅವಮಾನ: ಮುಡಾ ಹಗರಣ ವಿಚಾರವಾಗಿ ರಾಜ್ಯಪಾಲರು ನೀಡಿದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಕಪ್ಪುಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ. ನ್ಯಾಯಾಲಯ ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದು ಸತ್ಯಕ್ಕೆ ಹಾಗೂ ಬಿಜೆಪಿಯ ಹೋರಾಟಕ್ಕೆ ಸಿಕ್ಕಿರುವ ಜಯ. ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. 

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಚ್.ವಿಶ್ವನಾಥ್

ನನ್ನ ಬದುಕು ತೆರೆದ ಪುಸ್ತಕ, ಕಪ್ಪು ಚುಕ್ಕೆ ಇಲ್ಲ ಎಂದೆಲ್ಲಾ ಸಿದ್ದರಾಮಯ್ಯ ಹೇಳಿಕೊಂಡಿದ್ದರು. ಇಷ್ಟೆಲ್ಲ ಆದ ನಂತರವೂ ರಾಜೀನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡು ಕುಳಿತರೆ ಅದು ಅವರೇ ಹೇಳಿಕೊಳ್ಳುವ 40 ವರ್ಷಗಳ ರಾಜಕೀಯ ಬದುಕಿಗೆ ಹಾಗೂ ರಾಜ್ಯದ ಜನರಿಗೆ ಮಾಡುವ ಅಪಮಾನವಾಗುತ್ತದೆ ಎಂದು ಕಿಡಿಕಾರಿದರು. ಈ ಹಿಂದೆ ಹಿಂದಿನ ಅವಧಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಸಂತೋಷ್‌ ಲಾಡ್‌ ವಿರುದ್ಧ ಆರೋಪ ಕೇಳಿಬಂದಾಗ ಕೂಡಲೇ ರಾಜೀನಾಮೆ ಪಡೆಯಲಾಗಿತ್ತು. ಈ ಅವಧಿಯಲ್ಲಿ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರಿಗೆ ಒಂದು ಕಾನೂನು, ಸಿದ್ದರಾಮಯ್ಯಗೆ ಒಂದು ಕಾನೂನಾ? ಕಾನೂನು ಹಾಗೂ ನೈತಿಕತೆ ಎಲ್ಲರಿಗೂ ಒಂದೇ ಆಗಿದೆ ಎಂದು ವಾಗ್ದಾಳಿ ನಡೆಸಿದರು.

click me!