ಆಪ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

By Govindaraj SFirst Published Jul 5, 2022, 4:30 AM IST
Highlights

ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರ ನಿರ್ದೇಶನದಂತೆ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು (ಜು.05): ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರ ನಿರ್ದೇಶನದಂತೆ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರು ಅವರು ಮಹತ್ವದ ಪಾತ್ರ ವಹಿಸುವ ದೃಢ ವಿಶ್ವಾಸ ಇದೆ ಎಂದು ಹೇಳಿದರು. ಹೊಸ ಜವಾಬ್ದಾರಿ ತೆಗೆದುಕೊಂಡ ನಂತರ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷದ ಸರ್ಕಾರಗಳು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. 

ಪಕ್ಷವು ಸ್ವಚ್ಛ ರಾಜಕೀಯ ಮತ್ತು ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ ರಾಜ್ಯದಲ್ಲಿಯೂ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಮತ್ತು ಪ್ರಚಾರ ಸಮಿತಿಯು ಶ್ರಮಿಸಲಿದೆ. ನನ್ನ ಮೇಲೆ ವಿಶ್ವಾಸವನ್ನಿಟ್ಟು ಸಮಿತಿಯ ಅಧ್ಯಕ್ಷ ಜವಾಬ್ದಾರಿ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು ಎಂದರು. ಗೌರಿ ಬಿದನೂರು ಕ್ಷೇತ್ರದ ಶಾಸಕ, ವಿಧಾನ ಪರಿಷತ್‌ ಸದಸ್ಯ ಮತ್ತು ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಮುಖ್ಯಮಂತ್ರಿ ಚಂದ್ರು ಅವರು ಜೂನ್‌ನಲ್ಲಿ ಎಎಪಿಗೆ ಸೇರ್ಪಡೆಯಾಗಿದ್ದರು.

ಭಾಸ್ಕರ್‌ ರಾವ್‌ ನಂತರ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆ: ಕೇಜ್ರಿವಾಲ್‌ ಪಕ್ಷದ ಕಡೆ ವಾಲ್ತಾರ ಕಿಮ್ಮನೆ?

ಸರ್ಕಾರಿ ಶಾಲೆಗೆ ರಾಜ್ಯ ಎಎಪಿ ನಿಯೋಗ ಭೇಟಿ: ಕರ್ನಾಟಕದ ಅಭಿವೃದ್ಧಿಗೆ ಆಮ್‌ ಆದ್ಮಿ ಪಕ್ಷವೇ ಅನಿವಾರ್ಯ ಎಂದು ಪಕ್ಷದ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಿದ ಬಳಿಕ ಅಲ್ಲಿನ ಮೊಹಲ್ಲಾ ಕ್ಲಿನಿಕ್‌ ಮತ್ತು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ನಂತರ ಮಾತನಾಡಿದ ಅವರು, ಮುಂದಿನ ದಿನದಲ್ಲಿ ಕರ್ನಾಟಕದಾದ್ಯಂತ ಸಂಚರಿಸಿ ದೆಹಲಿ ಸರ್ಕಾರದ ಕಾರ್ಯಕ್ರಮಗಳನ್ನು ಕನ್ನಡಿಗರಿಗೆ ತಿಳಿಹೇಳಲಾಗುವುದು. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಕೇಳಿದ್ದೆ. ಈಗ ಕಣ್ಣಾರೆ ಕಂಡು ವಿಸ್ಮಿತನಾಗಿದ್ದೇನೆ. ಕರ್ನಾಟಕ ಅಭಿವೃದ್ಧಿಗೆ ಆಮ್‌ ಆದ್ಮಿ ಪಕ್ಷವೇ ಅನಿವಾರ್ಯ ಎಂದರು.

ಪುಟ್ಟ ಹುಡುಗ ನನ್ನ, ರಾಜ್ ಕುಮಾರ್ ಜೀವ ಉಳಿಸಿದ; 'ಒಂದು ಮುತ್ತಿನ ಕಥೆ' ಅನುಭವ ಬಿಚ್ಚಿಟ್ಟ ಚಂದ್ರು

ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಮಾತನಾಡಿ, ಮೌಲ್ಯಾಧರಿತ ರಾಜಕಾರಣಿ ರಾಮಕೃಷ್ಣ ಹೆಗಡೆ ಅವರ ಆಹ್ವಾನ ಮೇರೆಗೆ ಜನತಾ ಪಕ್ಷ ಸೇರಿದ ಮುಖ್ಯಮಂತ್ರಿ ಚಂದ್ರು ಅವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟುಕೆಲಸ ಮಾಡಿದ್ದಾರೆ. ರಾಜಕಾರಣದಲ್ಲಿ ತಮ್ಮದೇ ಚಾಪು ಮೂಡಿಸಿರುವ ಅವರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಲಾಲ್‌ ಕೃಷ್ಣ ಅಡ್ವಾಣಿ ಅವರ ಸಿದ್ಧಾಂತ ಮೆಚ್ಚಿ ಬಿಜೆಪಿ ಸೇರಿದರು. ಆದರೆ, ಆ ಪಕ್ಷವು ಕಲುಷಿತಗೊಂಡಿರುವನ್ನು ಗಮನಿಸಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಎಲ್ಲ ಪಕ್ಷಗಳಿಂದ ಬೇಸರಗೊಂಡು ರಾಜಕಾರಣದಿಂದ ದೂರ ಉಳಿಯುವ ಚಿಂತನೆಯಲ್ಲಿದ್ದಾಗ ಆಮ್‌ ಆದ್ಮಿ ಪಕ್ಷದ ಸಿದ್ಧಾಂತ ಮೆಚ್ಚಿ ಬಂದಿದ್ದಾರೆ. ಮುಂದಿನ ದಿನದಲ್ಲಿ ಎಲ್ಲಾ ಚುನಾವಣೆಯಲ್ಲಿ ಪಕ್ಷವು ಸ್ಪರ್ಧಿಸಲಿದೆ. ಎಲ್ಲಾ 224 ಸ್ಥಾನಗಳನ್ನು ಗೆಲ್ಲುವುದೇ ಪಕ್ಷದ ಗುರಿಯಾಗಿದೆ ಎಂದರು.

click me!