RR ನಗರ ಉಪಚುನಾವಣೆ: ಮುನಿರಾಜುಗೆ ಮುನಿರತ್ನ ಗೆಲ್ಲಿಸುವ ಉಸ್ತುವಾರಿ

By Kannadaprabha News  |  First Published Oct 22, 2020, 9:11 AM IST

ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಕಾರ್ಯದರ್ಶಿ ಮುನಿರಾಜುಗೌಡ ಅವರಿಗೂ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ| ಈ ಮೂಲಕ ಮುನಿರಾಜುಗೌಡ ಅವರಿಗಿದ್ದ ಅತೃಪ್ತಿಯನ್ನು ಶಮನ ಮಾಡುವ ಪ್ರಯತ್ನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌| 


ಬೆಂಗಳೂರು(ಅ.22):  ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಕಾರ್ಯದರ್ಶಿ ಮುನಿರಾಜುಗೌಡ ಅವರಿಗೂ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ. ಈ ಮೂಲಕ ಮುನಿರಾಜುಗೌಡ ಅವರಿಗಿದ್ದ ಅತೃಪ್ತಿಯನ್ನು ಶಮನ ಮಾಡುವ ಪ್ರಯತ್ನವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಡಿದ್ದಾರೆ.

ಆರ್‌.ಆರ್‌.ನಗರ: ಬಿಜೆಪಿ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ಎಂ.ಶಂಕರಪ್ಪ, ಸಚಿವರಾದ ಎಸ್‌.ಟಿ.ಸೋಮಶೇಖರ್‌, ಭೈರತಿ ಬಸವರಾಜ್‌, ಕಾರ್ಯದರ್ಶಿಗಳಾದ ಮುನಿರಾಜುಗೌಡ, ಎಂ.ಸತೀಶ್‌ ರೆಡ್ಡಿ, ಶಾಸಕ ಎಸ್‌.ಆರ್‌.ವಿಶ್ವನಾಥ್‌.

Tap to resize

Latest Videos

ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

ಶಿರಾ: ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ, ಸಚಿವ ವಿ.ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ಎ.ನಾರಾಯಣಸ್ವಾಮಿ, ಪ್ರತಾಪ್‌ಸಿಂಹ, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಉಪಾಧ್ಯಕ್ಷ ಎಂ.ರಾಜೇಂದ್ರ, ಮುಖಂಡ ತಿಪ್ಪೇಸ್ವಾಮಿ.
 

click me!