
ಶಿವಮೊಗ್ಗ (ನ.08): ರಾಜ್ಯದಲ್ಲಿ ಈಗಾಗಲೇ ಉಪಚುನಾವಣೆ ಮುಕ್ತಾಯವಾಗಿದ್ದು ಇನ್ನೆರಡು ದಿನದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಆರ್ ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಮಾತನಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ ಶಿರಾ ಕ್ಷೇತ್ರದಲ್ಲಿ 25 ಸಾವಿರ ಕ್ಕೂ ಹೆಚ್ಚಿನ ಮತ ಹಾಗೂ ಆರ್ ಆರ್ ನಗರದಲ್ಲಿ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ. ಚುನಾವಣೋತ್ತರ ಸಮೀಕ್ಷೆಯು ಅದನ್ನೇ ಹೇಳುತ್ತಿದೆ ಎಂದರು.
'ಫಲಿಸಿಲ್ಲ ಪ್ರತಿಪಕ್ಷಗಳ ತಂತ್ರ : ಎರಡೂ ಕಡೆ ಬಿಜೆಪಿಗೆ ವಿಜಯ' ..
ಇನ್ನು ಬಿಹಾರದಲ್ಲೂ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅಲ್ಲಿಯೂ ಎನ್‌ಡಿಎ ಗೆಲುವು ಖಚಿತ ಎಂದಿದ್ದಾರೆ.
ಇನ್ನು ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಅಧಿಕಾರಿಗಳ ಸಭೆ ನಡೆಸಲಿದ್ದೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.