* ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕಣ
* ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ
* ಸಚಿವ ಕೆಎಸ್ ಈಶ್ವರಪ್ಪ ನೇರ ಆರೋಪ
ಬೆಂಗಳೂರು/ ಶಿವಮೊಗ್ಗ, (ಫೆ.21): ಮೊದಲೇ ಹಿಜಾಬ್ ವಿವಾದದ (Hijab Row) ಮೂಲಕ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಈ ನಡುವೆ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ಸೋಮವಾರ)ಸಚಿವ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಪ್ರತಿಕ್ರಿಯಿಸಿದ್ದು, ಶಿವಮೊಗ್ಗದಲ್ಲಿ(Shivamogga) ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ(ಭಾನುವಾರ) ಮುಸಲ್ಮಾನ(Muslim) ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
Shivamogga: ಹಿಂದೂಪರ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ನಿಗ್ನ, 144 ಸೆಕ್ಷನ್ ಜಾರಿ
ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲವೇ ಹೊತ್ತಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತೇನೆ. ಇದರ ಬಗ್ಗೆ ಸಿಎಂ ಮತ್ತು ಹೋಂ ಮಿನಿಸ್ಟರ್ ಜತೆ ಮಾತಾಡಿದೀನಿ. ಶಿವಮೊಗ್ಗದಲ್ಲಿ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಡಿಕೆ ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ ಕಿಡಿಕಾರಿದರು.
ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ. ಕೇಸರಿ ಶಾಲೆ ಹಚ್ಚಿದ್ದಾರೆ, ರಾಷ್ಟ್ರ ಧ್ವಜ ತೆಗೆದು ಭಗಧ್ವಜ ಹಾರಿಸಿದ್ದಾರೆ ಎಂಬಂತಹ ಡಿಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಈಶ್ವರಪ್ಪ ನೇರ ಆರೋಪ ಮಾಡಿದರು.
ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ:
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ಮಾಧ್ಯಮಗಳಿಂದ ನನಗೆ ತಿಳಿಯಿತು. ಕೊಲೆ ಪ್ರಕರಣ ಸಂಬಂಧ ಸೂಕ್ತ ತನಿಖೆಯಾಗಬೇಕು. ಯಾವುದೇ ಕಾರಣಕ್ಕೂ ತಪ್ಪಿತಸ್ಥರಿಗೆ ರಕ್ಷಣೆ ಸಿಗಬಾರದು. ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕು ಎಂದರು.
ಪ್ರಕರಣ
ಹಿಂದೂಪರ ಕಾರ್ಯಕರ್ತ (Hindu Activits) ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಕಡೆ ಕಲ್ಲುತೂರಾಟ ನಡೆದ ಘಟನೆಯೂ ವರದಿಯಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಾರಿಯಲ್ಲಿದ್ದ 144 ಸೆಕ್ಷನ್ ಅನ್ನು ಮತ್ತೆರಡು ದಿನ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಎದುರು ನೂರಾರು ಮಂದಿ ಜಮಾಯಿಸಿದ್ದು, ಈ ವೇಳೆ ಕೆಲವರು ಆಸ್ಪತ್ರೆಯ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಆಸ್ಪತ್ರೆ ಗಾಜುಗಳಿಗೆ ಹಾನಿಯಾಗಿದೆ.
ಕಲ್ಲುತೂರಾಟ-ಘಟನೆ ಬೆನ್ನಲ್ಲೇ ನಗರದ ರವಿವರ್ಮ ಬೀದಿ ಮತ್ತು ಆಜಾದ್ ನಗರದಲ್ಲಿ ಕಲ್ಲುತೂರಾಟದ ಘಟನೆ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಈ ಮಧ್ಯೆ, ನಗರದ ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.