ಮುಸ್ಲಿಂ ಮೀಸಲಾತಿ ರದ್ದು: ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಪರಾಕಿ ನಿರೀಕ್ಷಿತವಾಗಿತ್ತು: ಸಿದ್ದರಾಮಯ್ಯ

By Ravi Janekal  |  First Published Apr 14, 2023, 3:42 PM IST

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದಿದ್ದಾರೆ. 


ಬೆಂಗಳೂರು (ಏ.14) : ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲು ಪಡೆಯಲು ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲನ್ನು ರದ್ದುಗೊಳಿಸಿರುವುದು ದೋಷಪೂರಿತ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಅವರು ಟ್ವಿಟ್ ಮಾಡಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದಿದ್ದಾರೆ. 

Tap to resize

Latest Videos

ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ಹಂಚಿಕೆ: ಸಿಎಂ ಬೊಮ್ಮಾಯಿ

ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು. 'ಮುಸ್ಲಿಂಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋ(Chinnappa reddy Committee)ಗ ಪರಿಗಣಿಸಿತ್ತು ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಬಿಜೆಪಿ ಸರ್ಕಾರ(BJP Government) ಅತ್ಯವಸರದಿಂದ ಮುಸ್ಲಿಂ ಮೀಸಲಾತಿ(Muslim reservation) ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ ಎಂದು ದೂರಿದ್ದಾರೆ.

ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇಕಡಾ 4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ(Vokkalige and lingayat reservatoin) ಹಂಚಿಕೆ ಮಾಡಿರುವುದರಿಂದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ ಎಂದಿರುವ ಸಿದ್ದರಾಮಯ್ಯ

ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ. ಆದರೆ ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ
 ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಪರಿಹಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. 

 

ಸಿದ್ದರಾಮಯ್ಯ ನಿವಾಸಕ್ಕೆ ಟಿಕೆಟ್‌ ಆಕಾಂಕ್ಷಿಗಳ ಪರೇಡ್‌

ಮೀಸಲಾತಿಗೆ ಶೇಕಡಾ 50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣ(Indira sahani case)ದಲ್ಲಿ ಸುಪ್ರೀಂ ಕೋರ್ಟ್(Supreme court) ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ. ನ್ಯಾಯವಾದಿ ಕಾಂತರಾಜ್(Justic kantaraj) ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ. ಕೇಂದ್ರ ಬಿಜೆಪಿ
 ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ್ದಾರೆ.

click me!