ಮುಸ್ಲಿಂ ಮತ ‘ಕೈ’ ತಪ್ಪದಂತೆ ನೋಡಿಕೊಂಡ ಜಮೀರ್‌, ಸಲೀಂ

By Kannadaprabha NewsFirst Published Nov 3, 2021, 9:33 AM IST
Highlights
  • ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಲು ಪ್ರಮುಖ ಕಾರಣ ಅಲ್ಪಸಂಖ್ಯಾತ ಮತ
  • ಸಿಂದಗಿ ಹಾಗೂ ಹಾನಗಲ್‌ ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ ಬುಟ್ಟಿಸೇರಿವೆ

ಬೆಂಗಳೂರು (ನ.03):  ಕಾಂಗ್ರೆಸ್‌ (Congress) ಪಕ್ಷದ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ (Karnataka By Election) ಉತ್ತಮ ಸಾಧನೆ ತೋರಲು ಪ್ರಮುಖ ಕಾರಣ ಅಲ್ಪಸಂಖ್ಯಾತ ಮತಗಳನ್ನು (Minority Votes) ಛಿದ್ರಗೊಳಿಸುವ ಪ್ರಯತ್ನ ವಿಫಲವಾಗಿದ್ದು.

ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್‌ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. ಹೀಗೆ ಅಲ್ಪಸಂಖ್ಯಾತ ಮತಗಳು ಕಿಂಚಿತ್ತೂ ಅಲುಗಾಡದಂತೆ ಮಾಡುವಲ್ಲಿ ಕಾಂಗ್ರೆಸ್‌ನ ಇಬ್ಬರು ಮುಸ್ಲಿಂ ನಾಯಕರು (Muslim Leaders) ನಿರ್ವಹಿಸಿದ ಪಾತ್ರ ಮಹತ್ವದ್ದು ಎಂದೇ ಪಕ್ಷದ ವಲಯದಲ್ಲಿ ಬಿಂಬಿಸಲಾಗುತ್ತಿದೆ.

ಹಾನಗಲ್ ಸೋಲು, ಸಿಎಂಗೆ ಮುಖಭಂಗ: ಬಿಜೆಪಿ ಆಂತರಿಕ ವಲಯದಲ್ಲಿ ಗಂಭೀರ ಚರ್ಚೆ

ಅವರು ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ (Saleem ahmed) ಹಾಗೂ ಶಾಸಕ ಜಮೀರ್‌ ಅಹ್ಮದ್‌ (Zameer ahmed)!

ಹಾನಗಲ್‌ ಕ್ಷೇತ್ರದ ಉಸ್ತುವಾರಿಯಾಗಿದ್ದ (In charge) ಸಲೀಂ ಅಹಮದ್‌ ಸುಮಾರೂ ಒಂದು ತಿಂಗಳಿಗೂ ಹೆಚ್ಚಿನ ಅವಧಿ ಕ್ಷೇತ್ರದಲ್ಲಿ ಬೀಡುಬಿಟ್ಟು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದರು. ಈ ಹಿಂದೆ ಲೋಕಸಭಾ ಚುನಾವಣೆಗೆ (loksabha election) ಈ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಸಲೀಂ ಅಹಮದ್‌ ಕ್ಷೇತ್ರದ ಜನತೆಯ ನಾಡಿ ಮಿಡಿತ ಬಲ್ಲವರು ಹಾಗೂ ಸ್ಥಳೀಯ ಮುಸ್ಲಿಂ ಸಮುದಾಯದ ಮೇಲೆ ತುಸು ಹಿಡಿತವನ್ನು ಹೊಂದಿದವರು. ಇದು ಕಾಂಗ್ರೆಸ್‌ ಅಭ್ಯರ್ಥಿ ಪಾಲಿಗೆ ವರವಾಗಿ ಪರಿಣಮಿಸಿತು.

ಇದರ ಜತೆಗೆ, ಅಲ್ಪಸಂಖ್ಯಾತ ಮತಗಳನ್ನು ಛಿದ್ರಗೊಳಿಸುವ ಜೆಡಿಎಸ್‌ (JDS) ತಂತ್ರಗಾರಿಕೆಗೆ ಬಹಿರಂಗವಾಗಿ ಸೆಡ್ಡು ಹೊಡೆದಿದ್ದು ಚಾಮರಾಜಪೇಟೆ (Chamarajapete) ಶಾಸಕ ಜಮೀರ್‌ ಅಹ್ಮದ್‌. ಆರ್‌ಎಸ್‌ಎಸ್‌ (RSS) ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಜೆಡಿಎಸ್‌ ನಾಯಕ ಕುಮಾರಸ್ವಾಮಿ (HD kumaraswamy) ಅವರನ್ನು ನೇರಾನೇರ ಎದುರಿಸಿದ ಜಮೀರ್‌, ಜೆಡಿಎಸ್‌ ಬಿಜೆಪಿ (BJP) ಅಭ್ಯರ್ಥಿಯ ಗೆಲುವಿಗಾಗಿ ಅಲ್ಪಸಂಖ್ಯಾತ ಮತಗಳನ್ನು ಛಿದ್ರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಗಟ್ಟಿಧ್ವನಿಯಲ್ಲಿ ಹೇಳಿದರು. ಅಷ್ಟೇ ಅಲ್ಲದೆ, ಈ ಒಳ ಮರ್ಮ ಸಮುದಾಯಕ್ಕೆ ತಲುವಂತೆಯೂ ನೋಡಿಕೊಂಡರು.

ಕಾಂಗ್ರೆಸ್‌ಗೆ ಟಾನಿಕ್

 

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ (By Election Result) ಕಾಂಗ್ರೆಸ್‌(Congress) ಪಾಲಿಗೆ ಹೊಸ ಚೈತನ್ಯ ನೀಡಿದೆ. ಏರಿಕೆಯ ಗತಿಯಲ್ಲೇ ಇದ್ದ ಬಿಜೆಪಿಯ (BJP) ವರ್ಚಸ್ಸಿಗೆ ತಡೆ ಬೀಳುವ ಲಕ್ಷಣ ಈ ಫಲಿತಾಂಶದಿಂದ ಗೋಚರಿಸಿದೆ ಎಂದೇ ಕಾಂಗ್ರೆಸ್‌ ನಾಯಕರು ಬಿಂಬಿಸುತ್ತಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ದೊರೆತ ಟಾನಿಕ್‌ ಈ ಫಲಿತಾಂಶ ಎಂದೇ ಭಾವಿಸಿದ್ದಾರೆ.

ಇದಕ್ಕೆ ಮುಖ್ಯ ಕಾರಣ ಸಿಂದಗಿ(Sindagi) ಹಾಗೂ ಹಾನಗಲ್‌ (Hangal) ಎರಡು ಕ್ಷೇತ್ರಗಳು ಕಾಂಗ್ರೆಸ್‌ನದ್ದಲ್ಲ. ಜೆಡಿಎಸ್‌ (JDS) ಹಾಗೂ ಬಿಜೆಪಿಗೆ ಸೇರಿದ್ದ ಈ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವಾದ ಹಾನಗಲ್‌ ಅನ್ನು ಬುಟ್ಟಿಗೆ ಹಾಕಿಕೊಂಡಿರುವುದು ಹಾಗೂ ಅಸ್ತಿತ್ವವೇ ಇರದಿದ್ದ ಸಿಂದಗಿ ಕ್ಷೇತ್ರದಲ್ಲಿ ತನ್ನ ಬೇರುಗಳನ್ನು ಭದ್ರವಾಗಿ ನೆಲೆಯೂರಿಸಿರುವುದು ಹರುಷ ತಂದಿದೆ. ಮುಖ್ಯವಾಗಿ ಮುಖ್ಯಮಂತ್ರಿಯವರ ತವರು ಜಿಲ್ಲೆ ಹಾಗೂ ಸ್ವಕ್ಷೇತ್ರ ಶಿಗ್ಗಾಂವ್‌ಗೆ ಆತುಕೊಂಡಿರುವ ಹಾನಗಲ್‌ ಕ್ಷೇತ್ರದ ಗೆಲುವು ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದೆ.

'ಬಿಜೆಪಿ 1 ಕ್ಷೇತ್ರದಲ್ಲಿ ಗೆದ್ದು ಮತ್ತೊಂದು ಕ್ಷೇತ್ರದಲ್ಲಿ ಸೋತಿದ್ದರೂ ಮತಗಳಿಕೆ ಹೆಚ್ಚಳ'

ಏಕೆಂದರೆ, ತವರು ಜಿಲ್ಲೆಯಲ್ಲಿ ಸೋಲು ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಎಲ್ಲ ರೀತಿಯ ರಾಜಕೀಯ ಪಟ್ಟುಗಳನ್ನು ಬಳಸಿದ್ದರು. ಎಂಟಕ್ಕೂ ಹೆಚ್ಚು ಸಚಿವರು ಕ್ಷೇತ್ರಕ್ಕೆ ಮುಡಿಪಾಗಿದ್ದರು. ಖುದ್ದು ಬೊಮ್ಮಾಯಿ ಎಂಟು ದಿನ ಕ್ಷೇತ್ರದಲ್ಲೇ ಬೀಡು ಬಿಟ್ಟು, ಹಳ್ಳಿ-ಹಳ್ಳಿ ತಿರುಗಿದ್ದರು. ಕ್ಷೇತ್ರದ ಅಳಿಯ ತಾನು ಎಂದು ಮತದಾರನ್ನು ಕಟ್ಟಿಹಾಕಲು ಯತ್ನಿಸಿದ್ದರು. 

ದೊಡ್ಡ ಪ್ರಮಾಣದಲ್ಲಿ ಸಂಪನ್ಮೂಲ ಕೂಡ ಬಳಕೆಯಾಗಿತ್ತು ಎಂಬ ಗುಲ್ಲು ಇತ್ತು. ಇಷ್ಟಾಗಿಯೂ ಸಮಾಧಾನಕರ ಲೀಡ್‌ನೊಂದಿಗೆ ಕಾಂಗ್ರೆಸ್‌ನ ಶ್ರೀನಿವಾಸ್‌ ಮಾನೆ (Srinivas Mane) ಜಯಭೇರಿ ಬಾರಿಸಿದ್ದಾರೆ. ಇದು ಬದಲಾವಣೆ ಬೇಕು ಎಂಬ ಬಯಕೆಯ ಸಣ್ಣ ಅಲೆ ಸಮೂಹದಲ್ಲಿ ರೂಪುಗೊಳ್ಳತೊಡಗಿರುವುದರ ಸಂಕೇತ ಎಂದೇ ಬಿಂಬಿಸಲಾಗುತ್ತಿದೆ.

click me!