
ಶಿವಮೊಗ್ಗ(ಡಿ.08): ಮುಸ್ಲಿಮರ ಜತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸಮುದಾಯದವನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಇದಕ್ಕಾಗಿ ರಾಜ್ಯದ ಜನ ಅವರನ್ನು ಕ್ಷಮಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರವಾಗಿ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಏನು ಉತ್ತರ ಕೊಡುತ್ತಾರೆ ನೋಡೋಣ ಎಂದರು.
ಪ್ರಧಾನಿ ಮೋದಿ ಶ್ರಮದಿಂದ ಮುಂದುವರಿದ ದೇಶವಾದ ಭಾರತ: ಬಿ.ಎಸ್.ಯಡಿಯೂರಪ್ಪ
ಅಧಿವೇಶನದ ಸಮಯದಲ್ಲಿ ಅವರು ಹೊರಗೆ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುತ್ತೇನೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.