ಶಾಸಕ ಜಿ.ಡಿ.ಹರೀಶ್‌ಗೌಡ ತಾಲೂಕಿನ ಮಠಮಾನ್ಯಗಳಿಗೆ ಭೇಟಿ ನೀಡಿ ಗುರುಹಿರಿಯರ ಆಶೀರ್ವಾದ ಪಡೆದರು. ತಾಲೂಕಿನ ಮಾದಳ್ಳಿ ಉಕ್ಕಿನಕಂತೆ ಮಠ, ನಗರದ ವಿವಿಧ ಭಾಗಗಳಲ್ಲಿ ಇರುವ ಮಸೀದಿಗಳು, ಚರ್ಚ್‌ಗಳಿಗೆ ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದರು. ಮಾದಳ್ಳಿ ಮಠದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಹುಣಸೂರು (ಮೇ.21): ಶಾಸಕ ಜಿ.ಡಿ. ಹರೀಶ್‌ಗೌಡ ತಾಲೂಕಿನ ಮಠಮಾನ್ಯಗಳಿಗೆ ಭೇಟಿ ನೀಡಿ ಗುರುಹಿರಿಯರ ಆಶೀರ್ವಾದ ಪಡೆದರು. ತಾಲೂಕಿನ ಮಾದಳ್ಳಿ ಉಕ್ಕಿನಕಂತೆ ಮಠ, ನಗರದ ವಿವಿಧ ಭಾಗಗಳಲ್ಲಿ ಇರುವ ಮಸೀದಿಗಳು, ಚರ್ಚ್‌ಗಳಿಗೆ ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದರು. ಮಾದಳ್ಳಿ ಮಠದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ತಾಲೂಕಿನ ಜನತೆ ತಮ್ಮನ್ನು ಬೆಂಬಲಿಸುವ ಮೂಲಕ ಆಶೀರ್ವದಿಸಿ ಶಾಸಕನನ್ನಾಗಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆಯೇ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ನಾನು ತಿಳಿದುಕೊಂಡಿದ್ದೆ. ಇದೀಗ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವತ್ತ ಮತ್ತು ತಾಲೂಕಿನ ಸರ್ವತೋಮುಖ ಅಭಿವೃದ್ಧಿಯತ್ತ ನನ್ನ ದುಡಿಮೆ ಆರಂಭಗೊಳ್ಳಲಿದೆ. ಮುಂದಿನ ಸೋಮವಾರದಿಂದ ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಿಂದ ಮತದಾರರಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಅರ್ಪಿಸುವುದರ ಜೊತೆಗೆ ಜನರ ಅಹವಾಲುಗಳನ್ನು ಗಮನಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವುದಕ್ಕೆ ಕ್ರಮವಹಿಸಲಿದ್ದೇನೆ.
ರಾಜ್ಯ ರಾಜಕಾರಣದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ ಕೆ.ಎಚ್.ಮುನಿಯಪ್ಪ
ಜನರ ಸಹಕಾರವೊಂದನ್ನೇ ನಾನು ನಿರೀಕ್ಷಿಸುತ್ತಿದ್ದು, ತಾಲೂಕಿನ ಅಭಿವೃದ್ಧಿಗೆ ನನ್ನದೇ ಆದ ಆಲೋಚನೆಗಳನ್ನು ಹೊಂದಿದ್ದೇನೆ ಎಂದರು. ಮಠದ ಶ್ರೀ ಸಾಂಬಸದಾಶಿವಸ್ವಾಮೀಜಿ ಆಶೀರ್ವಚನ ನೀಡಿ, ಬದಲಾವಣೆ ಜಗದ ನಿಯಮ. ತಾಲೂಕಿನ ಜನತೆ ಯುವ ನಾಯಕನನ್ನು ಆರಿಸಿದ್ದಾರೆ. ತಾಲೂಕಿನ ಸರ್ವ ಜನರ ಕಷ್ಟಕಾರ್ಪಣ್ಯಗಳನ್ನು ಪರಿಹರಿಸುವತ್ತ ಶಾಸಕ ಜಿ.ಡಿ. ಹರೀಶ್‌ಗೌಡ ಗಮನಹರಿಸಲಿ. ಎಲ್ಲರೂ ಸಹಕರಿಸೋಣ ಎಂದರು.
ಭೇಟಿ ವೇಳೆ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ದೇವರಾಜ್ ಒಡೆಯರ್, ನಗರಾಧ್ಯಕ್ಷ ಫಜಲುಲ್ಲಾ, ಮುಖಂಡ ಹರವೆ ಶ್ರೀಧರ್, ವಕ್ತಾರರಾದ ಹರ್ಷವರ್ಧನ್, ಎಂ. ಶಿವಕುಮಾರ್, ಜಿಪಂ ಮಾಜಿ ಸದಸ್ಯ ಎಂ.ಬಿ. ಸುರೇಂದ್ರ, ಸುಭಾಷ್ ಇದ್ದರು. ಇದೇ ವೇಳೆ ನಗರದ ಬಜಾರ್ ರಸ್ತೆಯ ಜಾಮಿಯ ಮಸೀದಿ, ಪೋಸ್ಟ್‌ಆಫೀಸ್ ಬಳಿಯ ಕ್ಯಾಥೋಲಿಕ್ ಚರ್ಚ್‌ಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು. ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನೂತನ ಶಾಸಕರನ್ನು ಸನ್ಮಾನಿಸಲಾಯಿತು.
ಚನ್ನಪಟ್ಟಣ ಕ್ಷೇತ್ರದಲ್ಲಿ ಎಚ್‌ಡಿಕೆ ಮುಂದಿದೆ ಸಾಕಷ್ಟು ಅಭಿವೃದ್ಧಿ ಸವಾಲುಗಳು
ಹಿರಿಯ ನಾಯಕ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸ್ಥಾಪನೆಗೊಂಡಿರುವುದು ಸ್ವಾಗತಾರ್ಹ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ನೆರವು ನೀಡುವುದೆಂಬ ಭರವಸೆ ತಮ್ಮಲ್ಲಿದೆ. ತಾಲೂಕಿನ ಜನರ ಆಶೋತ್ತರಕ್ಕೆ ತಕ್ಕಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸುವ ವಿಶ್ವಾಸವಿದೆ.
- ಜಿ.ಡಿ. ಹರೀಶ್‌ಗೌಡ, ಶಾಸಕರು