‘ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಎಚ್.ಡಿ.ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಅನ್ವಯಿಸಬಹುದಾ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಜು.07): ‘ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಎಚ್.ಡಿ.ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಅನ್ವಯಿಸಬಹುದಾ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಎಚ್.ಡಿ ಕುಮಾರಸ್ವಾಮಿ ಅವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ ಕುಮಾರಸ್ವಾಮಿ ಪತ್ನಿ ಶಾಸಕಿಯಾಗಿದ್ದರು, ತಂದೆ ಎಚ್.ಡಿ. ದೇವೇಗೌಡ ಪ್ರಧಾನಮಂತ್ರಿಗಳಾಗಿದ್ದರು. ಅಣ್ಣನ ಮಗ ಸಂಸದರಾಗಿದ್ದರು. ಹಾಗಾದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದರೇ?’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತ ದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾಚ್‌ರ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆ ನಡೆಯುತ್ತಿದೆ. ಇದು ನಮ್ಮಿಂದ ಶುರುವಾಗಿರುವುದಲ್ಲ. ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಮಾಡಿದ್ದಾರೆ. ಅವರ ವರ್ಗಾವಣೆ ನಡೆಸಿರಲಿಲ್ಲವೇ? ಅವರು ಹಣ ಪಡೆದೇ ವರ್ಗಾವಣೆ ನಡೆಸಿದ್ದರೇ? ಎಂದು ಪ್ರಶ್ನಿಸಿದರು.
ಕಳೆದು ಹೋದ ಪಾಸ್‌ಪೋರ್ಟ್ ಮತ್ತೆ ಪಡೆಯಲು ಎಫ್‌ಐಆರ್ ಕಾಪಿ ಕಡ್ಡಾಯ: ಹೈಕೋರ್ಟ್
ಗೌಡ ಪ್ರಧಾನಿ, ಎಚ್‌ಡಿಕೆ ಸಿಎಂ ಆಗಿದ್ದು ಯಾರಿಂದ?: ಎಚ್.ಡಿ.ದೇವೇಗೌಡ ಯಾರ ಬೆಂಬಲದಿಂದ ಪ್ರಧಾನಿಯಾದರು? ಎಚ್.ಡಿ.ಕುಮಾರಸ್ವಾಮಿ ಅವರನ್ನು ಮೊದಲ ಬಾರಿ ಮುಖ್ಯಮಂತ್ರಿ ಮಾಡಿದ್ದು ಯಾರು ಎಂಬ ವಿಚಾರ ಸದನದಲ್ಲಿ ಚರ್ಚೆ ನಡೆದು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ಮಾತನಾಡುತ್ತಾ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ನಾವು ಸಾಕಷ್ಟುಕಷ್ಟಪಟ್ಟೆವು. ಸಿದ್ದರಾಮಯ್ಯ ಅವರಿಗೂ ಮೋಸ ಮಾಡಿದೆವು ಎಂಬರ್ಥದಲ್ಲಿ ಮಾತನಾಡಿದರು.
ಅದಕ್ಕೆ ಎಚ್.ಡಿ.ಕುಮಾರಸ್ವಾಮಿ, ನಾನು ಇವರನ್ನೆಲ್ಲ ಸಚಿವರನ್ನಾಗಿ ಮಾಡಲು ಕಷ್ಟಪಟ್ಟಿದ್ದೇನೆ. ಹಾಗೆಯೇ ಎಚ್.ಡಿ.ದೇವೇಗೌಡ ಅವರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಎಂದು ಹೇಳುತ್ತಾರೆ. ಆದರೆ, ಅವರನ್ನು ಕೆಳಗಿಸಿದ್ದೇ ಕಾಂಗ್ರೆಸ್ ಪಕ್ಷ. ದೇವೇಗೌಡ ಅವರು ಪ್ರಧಾನಿ ಆಗಲು ವಿವಿಧ ಪಕ್ಷಗಳ 190 ಸಂಸದರು ಕಾರಣ. ಆದರೆ, ಕಾಂಗ್ರೆಸ್ ಪಕ್ಷ ಅವರನ್ನು ಅಧಿಕಾರದಿಂದ ಕೆಳಗಿಳಿಸಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೇವೇಗೌಡರಿಗೆ ಬೆಂಬಲ ನೀಡುವುದಾಗಿ ತಿಳಿಸಿದರೂ, ಅದನ್ನೊಪ್ಪದೆ ರಾಜೀನಾಮೆ ನೀಡಿದರು ಎಂದು ಹೇಳಿದರು.
ಹಫ್ತಾ ವಸೂಲಿಗೆ ಒತ್ತಡ: ಕಲಬುರಗಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾನ್ಸ್ಟೇಬಲ್ಗಳು
ಅದರಿಂದ ಸಿಟ್ಟಾದ ಕಾಂಗ್ರೆಸ್‌ನ ನರೇಂದ್ರ ಸ್ವಾಮಿ, ಕಾಂಗ್ರೆಸ್ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡಿ. ಕಾಂಗ್ರೆಸ್ ಪಕ್ಷದ ಬೆಂಬಲದಿಂದಲೇ ನೀವು ಮುಖ್ಯಮಂತ್ರಿಯಾಗಿದ್ದು, ದೇವೇಗೌಡ ಅವರು ಪ್ರಧಾನಿಯಾಗಿದ್ದು ಎಂದರು. ಕೊನೆಗೆ ಎಚ್.ಡಿ.ಕುಮಾರಸ್ವಾಮಿ, ನಮಗೆ ಕಾಂಗ್ರೆಸ್ ಏನು ಸಹಾಯ ಮಾಡಿದೆ, ಜೆಡಿಎಸ್‌ನಿಂದ ಕಾಂಗ್ರೆಸ್ ಸೇರಿದವರಿಗೆ ನಾವೇನು ಸಹಾಯ ಮಾಡಿದ್ದೇವೆ ಎಂಬ ಬಗ್ಗೆ ಚರ್ಚೆಗೆ ಸಮಯ ನಿಗದಿ ಮಾಡಿ ಎಂದು ಸ್ಪೀಕರ್ ಬಳಿ ಕೋರಿದರು.