ಬಾನು ಮುಷ್ತಾಕ್‌ ಕನ್ನಡ ಬರಹಗಾರ್ತಿ, ಕುಂಕುಮ ಒತ್ತಾಯ ತರವಲ್ಲ: ಸಿದ್ದರಾಮಯ್ಯ

Published : Sep 03, 2025, 07:32 AM IST
siddaramaiah

ಸಾರಾಂಶ

ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಅವರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ, ನೀವು ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು (ಸೆ.03): ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಅವರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ, ನೀವು ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಾನು ಮುಷ್ತಾಕ್‌ ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿದ್ದಾರೆ. ಆದರೆ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆ. ಅವರು ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ಮುಸ್ಲಿಂ ಗುರುಗಳು, ‘ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ’ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

ಹಿಂದೆ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು?. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಇವರೆಲ್ಲ ಎಲ್ಲಿ ಹೋಗಿದ್ದರು?. ಬಾನು ಮುಷ್ತಾಕ್‌ ಅವರು ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎಂಬ ವಿಷಯ ನನಗೆ ಗೊತ್ತಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ, ಪ್ರೀತಿ ಇಲ್ಲದೆ ಇದ್ದರೆ, ಅವರು ಕನ್ನಡದಲ್ಲಿ ಬರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಹಾಸನಕ್ಕೆ ತೆರಳಿ ಬಾನುಗೆ ದಸರಾ ಉದ್ಘಾಟಿಸಲು ಆಹ್ವಾನ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಉದ್ಘಾಟಿಸಲಿರುವ ಪ್ರತಿಷ್ಠಿತ ಬುಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತವು ಬುಧವಾರ (ಸೆಪ್ಟೆಂಬರ್‌ 3) ಸಂಜೆ 4 ಗಂಟೆಗೆ ಅಧಿಕೃತ ಆಹ್ವಾನ ನೀಡಲಿದೆ. ಇದಕ್ಕಾಗಿ ಮೈಸೂರು ಜಿಲ್ಲಾಧಿಕಾರಿ ನೇತೃತ್ವದ ತಂಡವು ಹಾಸನಕ್ಕೆ ತೆರಳಲಿದೆ. ಹಾಸನದಲ್ಲಿ ವಾಸ ಇರುವ ಬಾನು ಮುಷ್ತಾಕ್‌ ಅವರನ್ನು ಅಧಿಕಾರಿಗಳ ತಂಡ ಭೇಟಿಯಾಗಿ ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನ ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು