
ಮೈಸೂರು: ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಅವರ ನಡೆ ಖಂಡಿಸಿದ್ದ ಶಾಸಕ ತನ್ವೀರ್ ಸೇಠ್, ಸಂಜೆ ಸಚಿವರೊಟ್ಟಿಗೆ ದಸರಾ ಯುವ ಸಂಭ್ರಮದಲ್ಲಿ ಭಾಗವಹಿಸಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆದರು.
ಅರಮನೆಯಲ್ಲಿ ಸೋಮವಾರ ಬೆಳಗ್ಗೆ ದಸರಾ ಗಜಪಡೆ ಮಾವುತರು ಮತ್ತು ಕಾವಾಡಿಗಳಿಗೆ ಏರ್ಪಡಿಸಿದ್ದ ಉಪಾಹಾರ ಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸಮಯಕ್ಕೆ ಸರಿಯಾಗಿ ಬಾರಲಿಲ್ಲ ಎಂದು ಅಸಮಧಾನಗೊಂಡು ಶಾಸಕ ತನ್ವೀರ್ ಸೇಠ್ ಹೊರ ಹೋಗಿದ್ದರು.
ಸಂಜೆಯಾಗುತ್ತಿದ್ದಂತೆ ದಸರಾದ ಮೊದಲ ಕಾರ್ಯಕ್ರಮ ಯುವ ದಸರಾದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಶಾಸಕ ತನ್ವೀರ್ ಸೇಠ್ ಒಟ್ಟಿಗೆ ಭಾಗವಹಿಸಿ ಅಕ್ಕ ಪಕ್ಕದಲ್ಲೇ ಕುಳಿತು ಎಲ್ಲರ ಭಾವನೆಗಳಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಎಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.