ಎಂಪಿ ಎಲೆಕ್ಷನ್‌ಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧವಿಲ್ಲ: ಪ್ರತಾಪ ಸಿಂಹ

By Kannadaprabha News  |  First Published Oct 25, 2023, 10:20 AM IST

ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು? ಯಾವಾಗ ಮಾಡಬೇಕು? ಇದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತದೆ. ಅದನ್ನು ಹೇಳಲು, ನಾನು ಬಹಳ ಕಿರಿಯ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೆ. ನಾನು ಪಕ್ಷದ ನೇಮಕ ವಿಚಾರದಲ್ಲಿ ಏನೂ ಹೇಳಲು ಆಗುವುದಿಲ್ಲ: ಸಂಸದ ಪ್ರತಾಪ ಸಿಂಹ 


ಮೈಸೂರು(ಅ.25):  ಲೋಕಸಭಾ ಚುನಾವಣೆಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧ ಇಲ್ಲ. ಬಿಜೆಪಿ ಸಂಘಟನೆ ದೃಷ್ಟಿಯಿಂದಷ್ಟೆ ರಾಜ್ಯಾಧ್ಯಕ್ಷರು ಬೇಕು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು? ಯಾವಾಗ ಮಾಡಬೇಕು? ಇದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತದೆ. ಅದನ್ನು ಹೇಳಲು, ನಾನು ಬಹಳ ಕಿರಿಯ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೆ. ನಾನು ಪಕ್ಷದ ನೇಮಕ ವಿಚಾರದಲ್ಲಿ ಏನೂ ಹೇಳಲು ಆಗುವುದಿಲ್ಲ ಎಂದರು.

Tap to resize

Latest Videos

ಪ್ರತಾಪ ಸಿಂಹ ಗೆದ್ದರೆ ನಾನು ಊರು ಬಿಟ್ಟು ಹೋಗುತ್ತೇನೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಕರೆಯುತ್ತಿದ್ದರು. ನಾನು ಅದೇ ದಾಟಿಯಲ್ಲೇ ಶುಭಾಶಯ ಕೋರಿದ್ದೇನೆ. ನಾವೆಲ್ಲ ಗೆಲ್ಲುವುದು ಪ್ರಧಾನಿ ಮೋದಿ ಅವರ ಹೆಸರಿನಿಂದ, ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆ ಮೋದಿ ಹೆಸರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.

click me!