ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನರು: ಸಂಸದ ಪ್ರತಾಪ್ ಸಿಂಹ

By Kannadaprabha News  |  First Published Mar 10, 2024, 5:40 AM IST

 ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನ. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಫರ್ ಫಾಮ್ ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
 


ಮೈಸೂರು (ಮಾ.10): ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನ. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಫರ್ ಫಾಮ್ ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಲೋಕಸಭಾ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆ ಶನಿವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಹೇಳಲಿ. ಮೈಸೂರಿನಲ್ಲಿ ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದರು.

Tap to resize

Latest Videos

Loksabha election 2024: ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ ಎಂದ ಶಾಸಕ ಜನಾರ್ದನ ರೆಡ್ಡಿ!

ಗ್ರೇಟರ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್ ರೋಡ್ ತರಲು ಆಗಿಲ್ಲ.

ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಪೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ ಎಂದು ಅವರು ಹೇಳಿದರು.

ನಾನು ಮಾಡಿರುವ ಅಭಿವೃದ್ಧಿ ಕೆಲಸವೇ ನನಗೆ ಶ್ರೀರಕ್ಷೆ. ಮೈಸೂರು ಕೊಡಗಿನ ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದ್ದಾರೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತದೆ. ಚಾಲೆಂಜ್ ಮಾಡಿ ಹೇಳ್ತೀನಿ ನನ್ನ ರೀತಿ ಕೆಲಸ ಯಾರೂ ಮಾಡಿಲ್ಲ ಎಂದರು.

ಮೈಸೂರು, ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದೂ ನಿಲ್ಲಲ್ಲ. ನಮ್ಮ ಪಾರ್ಟಿಯ ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದ್ರೆ ಗೊತ್ತಾಗುತ್ತೆ. ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಾಗ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಎಂಪಿ ಇದ್ರೇ ಅದು ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ ಎಂದು ಅವರು ಹೇಳಿದರು.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದೆ ಅಂದ್ರೇ ಅದಕ್ಕೆ ಪ್ರತಾಪ್ ಸಿಂಹ ಕಾರಣ. ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಜನರಿಗೆ ರೂಲರ್ ಬೇಡ, ಬೇಕಿರೋದು ಕೆಲಸಗಾರ. ಪತ್ರಕರ್ತ ಆಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ ಎಂದರು.

ಕಾಂಗ್ರೆಸ್ ನವರಿಗೆ ಅಭ್ಯರ್ಥಿ ಹುಡುಕಲು ಆಗ್ತಾ ಇಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ನವರಿಗೂ ಗೊತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯನವರ ಸೀಟು ಅಲುಗಾಡುತ್ತದೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್ ಗೆ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್ ಗೆ ನಮ್ಮ ಪಕ್ಷ ಹೇಗೆ ಸಪೋರ್ಟ್ ಮಾಡುತ್ತದೆ?

- ಪ್ರತಾಪ್ ಸಿಂಹ, ಸಂಸದರು

click me!