ಮುಡಾ ಬಹುಕೋಟಿ ಹಗರಣ; ಗೋಲ್ಮಾಲ್ ಸಿಎಂ, ₹ 4,000 ಕೋಟಿ ಗುಳುಂ : ಆರ್. ಅಶೋಕ ಟೀಕೆ

Published : Jul 02, 2024, 03:07 PM IST
ಮುಡಾ ಬಹುಕೋಟಿ ಹಗರಣ; ಗೋಲ್ಮಾಲ್ ಸಿಎಂ, ₹ 4,000 ಕೋಟಿ ಗುಳುಂ : ಆರ್. ಅಶೋಕ ಟೀಕೆ

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಣ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹ 4,000 ಕೋಟಿ ಗುಳುಂ ಮಾಡಿ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ.

ಬೆಂಗಳೂರು (ಜು.02): ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಗೋಲ್ಮಾಲ್ ಸಿಎಂ, ₹ 4,000 ಕೋಟಿ ಗುಳುಂ' ಎಂಬ ತಲೆಬರಹದಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) ನಡೆದ 4,000 ಕೋಟಿ ರೂ. ಹಗರಣದ ಬಗ್ಗೆ ಬರೆದುಕೊಂಡಿದ್ದಾರೆ. 'ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ. ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದ 50:50 ಸೈಟು ಹಂಚಿಕೆ ರದ್ದು; ಸಚಿವ ಬೈರತಿ ಸುರೇಶ್ ಆದೇಶ

ಮುಂದುವರೆದು...
1.) ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ (siddaramaiah) ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?
2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?
3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?
4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?
5.)ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?
6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?
7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಮತ್ತೊಂದೆಡೆ ರಾಜ್ಯ ಬಿಜೆಪಿ ಘಟಕಡ ಅಧಿಕೃತ ಎಕ್ಸ್ ಖಾತೆಯಲ್ಲಿ 'ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್‌ ಮಾಡುವುದೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್!!

ಎಲ್ಲೆಲ್ಲೋ.. ದರ್ಶನ್ ಮೇಲಿನ ಅಭಿಮಾನ; ಕೈ, ಕುತ್ತಿಗೆ, ಎದೆ ಆಯ್ತು, ಈಗ ಪುಷ್ಠ ಭಾಗದ ಮೇಲೂ ಕೈದಿ ನಂಬರ್ 6106..!

ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನ.
ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ.

ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ.? ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್