
ಬೆಂಗಳೂರು (ಸೆ.12): ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು. ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.
Mandya: 40 ವರ್ಷಗಳ ಬಳಿಕ ನಾಗಮಂಗಲದಲ್ಲಿ ಹಿಂದು-ಮುಸ್ಲಿಂ ಗಲಾಟೆ, ಸಿಕ್ಕ-ಸಿಕ್ಕ ಅಂಗಡಿಗಳಿಗೆ ಬೆಂಕಿ!
ಗಣೇಶ ವಿಸರ್ಜನೆ ವೇಳೆ ಮತಾಂಧರು ದೂರ್ತತನ ಪ್ರದರ್ಶಿಸಿದ್ದಾರೆ. ಗಣಪತಿ ಭಕ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಳಿ ನಡೆಸಿ ಕೋಮು ದಳ್ಳುರಿ ಹೊತ್ತಿಸಿ ಜನರು, ಪೊಲೀಸರ ಮೇಲೆ ಪೂರ್ವಯೋಜಿತವಾಗಿ ದೌರ್ಜನ್ಯ ನಡೆಸಿರುವುದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವುದು ಸ್ಪಷ್ಟ. ಕಲ್ಲುಗಳ ಸುರಿಮಳೆಗರೆದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಪ್ರಚೋದಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಇರುವುದರಿಂದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು.
ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇಶವಿರೋಧಿ ಶಕ್ತಿಗಳನ್ನು ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡುತ್ತಿರುವುದರ ನೇರ ಪರಿಣಾಮ ಇದಾಗಿದೆ. ಹಿಂದೂಗಳ ಮೇಲಿನ ಈ ದಾಳಿಗೆ ಪ್ರತಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ. ಒಂದು ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ.
ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ 144 ಸೆಕ್ಷನ್ ಜಾರಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.