Ballari: ನಾಗೇಂದ್ರ ರಾಜೀನಾಮೆ ಕೇಳೋರಿಗೆ ಮರ್ಯಾದೆ ಇದೆಯೇನ್ರಿ? - ಸಚಿವ ಖಂಡ್ರೆ

Kannadaprabha News   | Kannada Prabha
Published : Aug 10, 2026, 07:59 AM ISTUpdated : Aug 10, 2026, 08:03 AM IST
Eshwar Khandre

ಸಾರಾಂಶ

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಿರುದ್ಧ ಸಚಿವ ಈಶ್ವರ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ರಿಪಬ್ಲಿಕ್ ಆಫ್ ಬಳ್ಳಾರಿ' ಮಾಡಿ ಬಳ್ಳಾರಿಗೆ ಕುಖ್ಯಾತಿ ತಂದವರಿಗೆ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ (ಆ.10): ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಶಾಸಕರಾದ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಗೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಲು ಯಾವ ನೈತಿಕತೆ ಇದೆ? ಬಳ್ಳಾರಿಗೆ ಕುಖ್ಯಾತಿ ತಂದಿರುವ ಅವರಿಗೆ ಮಾನ, ಮರ್ಯಾದೆ ಇದೆಯಾ ಎಂದು ಸಚಿವ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

ರಾಜೀನಾಮೆ ಕೇಳುವ ನೈತಿಕತೆ ಆದ್ರೂ ಇದೆಯಾ?

ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನೀಡಿದ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಹತಾಶೆಯಿಂದ ಕೆಳಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ನ ಜನಪ್ರಿಯತೆ ಹೆಚ್ಚಾಗುತ್ತಿದೆ. 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ. ಇದನ್ನು ಸಹಿಸಲು ಸಾಧ್ಯವಾಗದೆ ರೆಡ್ಡಿ, ಶ್ರೀರಾಮುಲು ಹಾಗೆ ಮಾತನಾಡುತ್ತಿದ್ದಾರೆ. ರಿಪಬ್ಲಿಕ್‌ ಆಫ್‌ ಬಳ್ಳಾರಿ ಮಾಡಿದವರಿಗೆ ರಾಜೀನಾಮೆ ಕೇಳುವ ನೈತಿಕತೆಯಾದರೂ ಎಲ್ಲಿಂದ ಬಂತು ಎಂದು ಕೇಳಿದರು.

ಶ್ರೀರಾಮುಲು ಕೇಂದ್ರದ ವಿರುದ್ಧ ಮಾತಾಡಲಿ:

ನಾಗೇಂದ್ರ ಅವರ ರಾಜೀನಾಮೆ ಕೇಳುವ ಶ್ರೀರಾಮುಲು ಹಾಗೂ ಬಿಜೆಪಿಯವರು ಕೇಂದ್ರದಲ್ಲಿ ಪೊಲೀಸರ ದುರ್ಬಳಕೆ, ವಿದ್ಯಾರ್ಥಿಗಳನ್ನು ನಡೆಸಿಕೊಂಡಿರುವ ರೀತಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಲಿ. ಕೇಂದ್ರದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಮೊದಲು ಒತ್ತಾಯಿಸಲಿ ಎಂದು ಸವಾಲು ಹಾಕಿದರು.

ರಾಜ್ಯ ಸರ್ಕಾರದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಮಹಿಳೆಯರಿಗೂ ಪ್ರಾತಿನಿಧ್ಯ ನೀಡಲಿದೆ. ಎಲ್ಲರಿಗೂ ಸರಿಸಮನಾಗಿ ಅಧಿಕಾರ ಹಂಚಿಕೆ ಮಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಖಂಡ್ರೆ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Bidadi township row: ಜೆಡಿಎಸ್‌ನ ಬಿಡದಿ ಪಾದಯಾತ್ರೆಯಿಂದ ದೂರವೇ ಉಳಿದ ವಿಜಯೇಂದ್ರ ನಡೆ ನಿಗೂಢ!
ಬಿಡದಿ ಟೌನ್‌ಶಿಪ್: ಡಿಕೆಶಿಗೆ ದುರ್ಯೋಧನನ ಹಠ, ಇದರಿಂದ್ಲೇ ನಾಶ: ಅಶೋಕ್‌ ವಾಗ್ದಾಳಿ