
ಬೆಂಗಳೂರು(ಆ.22): ರಾಜ್ಯದಲ್ಲಿ ನಡೆದ ಕೋಮು ಗಲಭೆಗಳ ಸಂದರ್ಭದಲ್ಲಿ ಆಗಿರುವ ಹಾನಿಯನ್ನು ಆರ್‌ಎಸ್‌ಎಸ್ ಮತ್ತು ಅದರ ಸಹ ಸಂಘಟನೆಗಳೇ ತುಂಬಿಕೊಡುವಂತೆ ಮಾಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೋಮು ಗಲಭೆಗಳಲ್ಲಿ ಆರ್‌ಎಸ್‌ಎಸ್ ಪಾತ್ರ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
"
ಗೃಹ ಸಚಿವ, ಸಿಎಂ ಯಾರೆಂದು ಗೊತ್ತಿಲ್ಲದೇ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದರೇ?
ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಯಾವುದೇ ಭಾಗದಲ್ಲಿ ನಡೆದ ಕೋಮು ಗಲಭೆಗಳಿಗೆ ಆರ್‌ಎಸ್‌ಎಸ್ ಅಥವಾ ಅದರ ಸಹ ಸಂಘಟನೆಗಳು ಕಾರಣ ಎಂಬುದಾಗಿ ತನಿಖಾ ಸಂಸ್ಥೆಗಳಾಗಲಿ ಅಥವಾ ವಿಚಾರಣಾ ನ್ಯಾಯಾಲಯಗಳಾಗಲಿ ತಿಳಿಸಿಲ್ಲ. ಆದರೂ ಸಿದ್ದರಾಮಯ್ಯ, ಕೋಮುಗಲಭೆಗಳಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಸಹ ಸಂಘಟನೆಗಳಿಂದ ಆಗಿರುವ ಹಾನಿ ತುಂಬಿಕೊಡಬೇಕು ಎಂದು ನೀಡಿರುವ ಹೇಳಿಕೆ ಅತಿರೇಕದಿಂದ ಕೂಡಿದೆ ಎಂದು ತಿಳಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಮೂಲಕ ಸಿದ್ದರಾಮಯ್ಯ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಭೆ ಮಾಡಿದವರು ಅಲ್ಪಸಂಖ್ಯಾತರೇ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬೆಳವಣಿಗೆ ಅಲ್ಪಸಂಖ್ಯಾತರನ್ನು ಓಲೈಸುವ ಕಾಂಗ್ರೆಸ್ ಪಕ್ಷದ ನೀತಿ ಮತ್ತು ಮತ ಬ್ಯಾಂಕ್ ರಾಜಕಾರಣದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
'ಯಡಿಯೂರಪ್ಪ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ಕೊರೋನಾ ನಿಯಂತ್ರಣ'
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯಿಂದಾಗಿರುವ ಹಾನಿಯನ್ನು ತಪ್ಪಿತಸ್ಥರಿಂದ ವಸೂಲಿ ಮಾಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬರೆದ ಪತ್ರದಲ್ಲಿ ಸಂಘ ಪರಿವಾರ ಈ ಹಿಂದೆ ನಡೆದಿರುವ ಕೋಮು ಗಲಭೆಗಳಲ್ಲಿ ಆದ ಹಾನಿಯನ್ನು ತುಂಬಿಕೊಡುವಂತೆ ಮಾಡಬೇಕು ಎಂದು ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಯಾಗಿ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.