ಗಾಂಧೀಜಿ ರಾಮರಾಜ್ಯದ ಕನಸು ಮೋದಿಯಿಂದ ಸಾಕಾರ -ನಳಿನ್ ಕುಮಾರ್ ಕಟೀಲ್

Published : Oct 12, 2022, 11:58 AM ISTUpdated : Oct 12, 2022, 12:00 PM IST
ಗಾಂಧೀಜಿ ರಾಮರಾಜ್ಯದ ಕನಸು ಮೋದಿಯಿಂದ ಸಾಕಾರ -ನಳಿನ್ ಕುಮಾರ್ ಕಟೀಲ್

ಸಾರಾಂಶ

ಗಾಂಧೀಜಿ ರಾಮರಾಜ್ಯದ ಕನಸು ಮೋದಿಯಿಂದ ಸಾಕಾರ ಕಾರ್ಯಕರ್ತರ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌

ರಾಣಿಬೆನ್ನೂರು (ಅ.12) : ಮಹಾತ್ಮ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿಯಾಗಿದ್ದು, ವಿಶ್ವವೇ ಭಾರತದತ್ತ ತಿರುಗಿನೋಡುವಂತಹ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ಹೇಳಿದರು.

ಕಾಂಗ್ರೆಸ್‌ ಮುಕ್ತ ಭಾರತ ನಿಶ್ಚಿತ: ನಳಿನ್‌ ಕುಮಾರ್‌ ಕಟೀಲ್‌

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕೋವಿಡ್‌ ಸಂಕಷ್ಟಸಮಯದಲ್ಲಿ ವಿಶ್ವ ನಲುಗಿ ಹೋಗಿದ್ದಾಗ ಅದನ್ನು ಸಮರ್ಥವಾಗಿ ನಿಭಾಯಿಸಿದವರು ಪ್ರಧಾನಿ ಮೋದಿ. ರಾಜ್ಯದಲ್ಲಿ ಎಲ್ಲೆಡೆ ಕೇಸರಿ ಅಲೆ ಜೋರಾಗಿ ಬೀಸುತ್ತಿದ್ದು 2023ರ ಚುನಾವಣೆಯಲ್ಲಿ ಯಡಿಯೂರಪ್ಪ ಮಾರ್ಗದರ್ಶನ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಪಕ್ಷ ಪುನಃ ಅಧಿಕಾರಕ್ಕೆ ಬರಲಿದೆ. ಆ ಮೂಲಕ ಕಾಂಗ್ರೆಸ್‌ ಮುಕ್ತ ಕರ್ನಾಟಕವಾಗಲಿದೆ. ಕಾಂಗ್ರೆಸ್‌ ಆಡಳಿತ ಇದ್ದಾಗ ಮುಸ್ಲಿಂರನ್ನು ತುಷ್ಟೀಕರಣ ಮಾಡಲು ಪಿಎಫ್‌ಐಗೆ ಪರೋಕ್ಷವಾಗಿಯೇ ಸಹಕಾರ ನೀಡಿದ ಕಾಂಗ್ರೆಸ್‌ ಹಿಂದುಗಳ ಹತ್ಯೆ ಮತ್ತು ಗೋಹತ್ಯೆ ಮಾಡುವುದರ ಮೂಲಕ ಕಾಂಗ್ರೆಸ್‌ ತನ್ನ ಸತ್ಯವನ್ನು ಬಹಿರಂಗ ಪಡಿಸಿರುವುದು ಖೇದಕರ ಸಂಗತಿಯಾಗಿದೆ ಎಂದರು.

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್‌ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗಬೇಕು. ಭಾರತ ಜೋಡೋ ಯಾತ್ರೆ ಆರಂಭಿಸಿರುವ ರಾಹುಲ್‌ ಗಾಂಧಿ ಚುನಾವಣೆಯ ನಂತರ ಮುಖಭಂಗ ಅನುಭವಿಸಿ ಇಟಲಿಗೆ ಹಾರಲಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಜಯನಗರ ಸ್ಥಾಪಕರಾದ ಹುಕ್ಕ-ಬುಕ್ಕರಂತೆ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರುಣಕುಮಾರ ಪೂಜಾರ ಮತ್ತು ವಿಧಾನ ಪರಿಷತ್‌ ಸದಸ್ಯ ಆರ್‌. ಶಂಕರ್‌ ನೇತೃತ್ವದಲ್ಲಿ ತಾಲೂಕು ಅಭಿವೃದ್ಧಿಯಾಗಲಿದೆ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಹುಲ್‌ ಗಾಂಧಿ ಭಾರತ ಜೋಡೊ ಯಾತ್ರೆ ಬದಲಾಗಿ ಅವರ ಮುತ್ತಾತ ಮಾಡಿದ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶಗಳನ್ನು ಭಾರತಕ್ಕೆ ಸೇರಿಸುವ ಕಾರ್ಯ ಮಾಡಲಿ. ಉಕ್ರೇನ್‌ ಯುದ್ಧಲ್ಲಿ ಮೃತಪಟ್ಟತಾಲೂಕಿನ ಚಳಗೇರಿ ಗ್ರಾಮದ ನವೀನ ಮೃತದೇಹವನ್ನು ದೇಶಕ್ಕೆ ತರುವ ಮೂಲಕ ಪ್ರಧಾನಿ ಮೋದಿ ಅಸಾಧ್ಯವಾದುದನ್ನು ಸಾಧ್ಯ ಮಾಡಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಪಕ್ಷ 150 ಸ್ಥಾನಗಳನ್ನು ಗಳಿಸಲಿದ್ದು ಅದರಲ್ಲಿ ರಾಣಿಬೆನ್ನೂರು ಒಂದಾಗಲಿದೆ ಎಂದರು.

ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಯೋಜನೆಗಳು ನೇರವಾಗಿ ಜನರಿಗೆ ತಲುಪಿದ್ದು 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ದಾರಿದೀಪವಾಗಿದೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವ ಮೂಲಕ ಶಾಸಕನಾಗಿ ಆಯ್ಕೆಯಾಗಿರುವೆ. ಆರ್‌.ಶಂಕರ್‌ ಆಶೀರ್ವಾದ ಇರಲಿಲ್ಲವಾದರೆ ನಾನು ಶಾಸಕನ್ನಾಗುತ್ತಿರಲಿಲ್ಲ. ಆರ್‌.ಶಂಕರ್‌ ಮತ್ತು ನಾನು ಅಣ್ಣ ತಮ್ಮನಾಗಿದ್ದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಬದ್ಧರಾಗಿದ್ದೇವೆ. ಮಾಡುತ್ತೇವೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದ್ದು ಮುಂದಿನ ಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದರು.

ಕಾಂಗ್ರೆಸ್ಸಿನವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಚಿವ ಬೈರತಿ

ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ, ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮಾತನಾಡಿದರು. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ನೇಕಾರ ಪ್ರಕೋಷ್ಟರಾಜ್ಯ ಸಂಚಾಲಕ ಡಾ. ಬಸವರಾಜ ಕೇಲಗಾರ, ಕಾರ್ಯಕಾರಿಣಿ ಸದಸ್ಯೆ ಭಾರತಿ ಜಂಬಗಿ, ಹಾವೇರಿ ಜಿಲ್ಲಾ ಪ್ರಭಾರಿ ಕಲ್ಲೇಶ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪವನಕುಮಾರ ಮಲ್ಲಾಡದ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕೇಲಗಾರ, ನಗರ ಘಟಕದ ಅಧ್ಯಕ್ಷ ದೀಪಕ ಹರಪನಹಳ್ಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ನರಸಗೊಂಡರ, ಮಾಜಿ ಅಧ್ಯಕ್ಷ ಚೋಳಪ್ಪ ಕಸವಾಳ, ಕೆ.ಶಿವಲಿಂಗಪ್ಪ, ಎಸ್‌.ಎಸ್‌.ರಾಮಲಿಂಗಣ್ಣನವರ, ಎ.ಬಿ.ಪಾಟೀಲ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ