
ಮಂಗಳೂರು(ಡಿ.04): ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಗಳಿಸಿರುವುದು ದೇಶದಲ್ಲಿ ನರೇಂದ್ರ ಮೋದಿ ಅಲೆ ಇದೆ. ಅಲ್ಲದೆ ದೇಶದಲ್ಲಿ ಬಿಜೆಪಿ ಪರ ಮತದಾರರ ಒಲವು ಇರುವುದು ಸ್ಪಷ್ಟವಾಗಿದೆ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ತೆಲಂಗಾಣದಲ್ಲೂ ಪಕ್ಷ ಅದ್ಭುತ ಸಾಧನೆ ತೋರಿಸಿದೆ. ಚುನಾವಣಾ ಪ್ರಚಾರ ವೇಳೆ ಮೋದಿ ಗ್ಯಾರಂಟಿ ನೀಡಿರುವುದು ಸಫಲವಾಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ ಎಂದರು.
ಲೋಕಸಭೆಯೋ? ವಿಧಾನಸಭೆಯೋ? ಚುನಾವಣೆಯಲ್ಲಿ ಗೆದ್ದ ಬಿಜೆಪಿ ಸಂಸದರಿಗೆ ಇನ್ನು 14 ದಿನದ ಡೆಡ್‌ಲೈನ್!
ಕರ್ನಾಟಕದ ಫಲಿತಾಂಶ ನೋಡಿ ಕಾಂಗ್ರೆಸ್ ದೇಶದ ಇತರ ಭಾಗಗಳಲ್ಲೂ ಗ್ಯಾರಂಟಿ ಯೋಜನೆ ಘೋಷಿಸಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮೋಸ ಮಾಡಿರುವುದು ದೇಶದ ಜನರಿಗೆ ಗೊತ್ತಾಗಿದೆ. ಸಿದ್ದರಾಮಯ್ಯ ಅವರು ಈ ಚುನಾವಣೆಯನ್ನು ಸೆಮಿಫೈನಲ್ ಎಂದಿದ್ದರು. ಸೆಮಿಫೈನಲ್‌ನಲ್ಲಿ ಕಾಂಗ್ರೆಸ್‌ನ್ನು ಜನರು ಹೊರಗಟ್ಟಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಮಗದೊಮ್ಮೆ ಪ್ರಧಾನಿ ಆಗೋದು ಸ್ಪಷ್ಟ. ದೇಶದಲ್ಲಿ ಅಭಿವೃದ್ದಿ, ಶಾಂತಿ ಸುವ್ಯವಸ್ಥೆಗೆ ಮೋದಿ ಅಗತ್ಯ ಎಂದು ಜನತೆಗೆ ಗೊತ್ತಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.