ಪದೇ-ಪದೇ ಬಿಎಸ್ ಯಡಿಯೂರಪ್ಪನವರ ಸರ್ಕಾರದ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸುತ್ತಿರುವ ಬಸನಗೌಡ ಪಾಟೀಲ್ ವಿರುದ್ಧ ಕ್ರಮ ಕಯಗೊಳ್ಳುವುದರ ಬಗ್ಗೆ ರಾಜ್ಯಾಧ್ಯಕ್ಷ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ದಾವಣಗೆರೆ, (ಜ.06): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಹಿರಂಗ ಅಸಮಾಧಾನ ಹೊರ ಹಾಕಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಇಂದು (ಬುಧವಾರ) ಮಾತನಾಡಿದ ಕಟೀಲ್, ಯತ್ನಾಳ್ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗುವುದು. ಅವರ ವಿರುದ್ಧ ಶಿಸ್ತು ಸಮಿತಿಯೇ ಕ್ರಮಕೈಗೊಳ್ಳುತ್ತದೆ ಎಂದು ಹೇಳಿದರು.
ಹೆದರುವ ಮಗ ನಾನಲ್ಲ: ಸಿಎಂ ವಿರುದ್ಧ ಮತ್ತೆ ತೊಡೆತಟ್ಟಿದ ಯತ್ನಾಳ್..!
ಯಾರಿಗೂ ಪಕ್ಷ, ಮುಖ್ಯಮಂತ್ರಿ ವಿರುದ್ಧ ಅಸಮಾಧಾನವಿಲ್ಲ. ಸಭೆಯಲ್ಲಿ ಕೆಲ ಶಾಸಕರು ಅನುದಾನವನ್ನು ಕೇಳಿದ್ದಾರೆ. ಅವರಿಗೆ ಸಿ.ಎಂ. ಕೊವಿಡ್ ಇರುವ ಬಗ್ಗೆ ತಿಳಿಸಿದ್ದಾರೆ. ಶಾಸಕರು ಏನೇ ಅಸಮಾಧಾನ ಇದ್ದರೂ ನನ್ನ, ಸಿಎಂ ಬಳಿ ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.
ಪದೇ-ಪದೇ ನಾಯಕತ್ವ ಬದಲಾವಣೆ ಸೇರಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದಾರೆ. ಆದ್ರೆ, ಇದುವರೆಗೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ರಾಜ್ಯ ಬಿಜೆಪಿ ಉಸ್ತುವಾರಿ ಕೂಡ Who Is ಯತ್ನಾಳ್ ಎಂದು ಪ್ರಶ್ನಿಸಿದ್ದರು.