ನಳಿನ್‌ ಒಬ್ಬ ಕಾಡು ಮನುಷ್ಯ, ಅರಣ್ಯಕ್ಕೆ ಬಿಡಿ: ಸಿದ್ದು ವಾಗ್ದಾಳಿಗೆ ಉತ್ತರಿಸಲು ಕಟೀಲ್‌ ಹಿಂದೇಟು

By Suvarna News  |  First Published Oct 22, 2020, 1:51 PM IST

ಕಟೀಲ್‌ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ,ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡುತ್ತಾರೆ ಎಂದ ಸಿದ್ದರಾಮಯ್ಯ


ಬೆಂಗಳೂರು(ಅ.22): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ. ಅವರ ಬೆನ್ನುಮೂಳೆಗೂ ನಾಲಿಗೆಗೂ ಎಲುಬಿಲ್ಲ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿಗೆ ಉತ್ತರಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಿಂದೇಟು ಹಾಕಿದ್ದಾರೆ. 

ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಇವೆಲ್ಲ ಸಹಜ. ನಾನು ಅವರನ್ನು ಕಾಡಿಗೆ ಕಳುಹಿಸಬೇಕು ಎಂದು ಹೇಳಿದ್ದಕ್ಕೆ ಅವರು ಹಾಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ವಾಗ್ದಾಳಿಗೆ ನಮ್ಮ ಪಕ್ಷದ ವಕ್ತಾರ ಗಣೇಶ್ ಕಾರ್ಣಿಕ್ ಮೂಲಕ ಉತ್ತರ ಕೊಡುತ್ತೇವೆ ಎಂದ ಕಟೀಲ್ ಸ್ಪಷ್ಟಪಡಿಸಿದ್ದಾರೆ. 

Latest Videos

undefined

ಇದಕ್ಕೂ ಮುನ್ನ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಅಗ್ರಹಿಸುತ್ತೇನ ಎಂದು ಹೇಳಿದ್ದರು.  ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” Immature fellow ಎಂದು ತೆಗಳಿದ್ದರು. 

ಕಟೀಲ್‌ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಬಂಡೆ ಒಡೆಯುವ ಡೈನಾಮೆಟ್‌ ನಮ್ಮಲ್ಲಿದೆ: ನಳಿನ್‌ ಕುಮಾರ್‌ ಕಟೀಲ್‌

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಆರೋಪಿಸಿದ್ದರು. 

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. 
 

click me!