ಮಂಡ್ಯದಲ್ಲಿ ಮೋದಿ ಪರ ಅಲೆ ಎದ್ದಿದೆ: ನಳಿನ್‌ ಕುಮಾರ್‌ ಕಟೀಲ್‌

By Kannadaprabha News  |  First Published Mar 13, 2023, 7:40 AM IST

ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆ ಎದ್ದಿದ್ದು, ಭಾನುವಾರ ಅಭೂತ ಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. 


ಮಂಡ್ಯ (ಮಾ.13): ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆ ಎದ್ದಿದ್ದು, ಭಾನುವಾರ ಅಭೂತ ಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಮೋದಿ ಪರವಾದ ಅಲೆ ಸೃಷ್ಟಿಯಾಗಿದೆ. ಅವರು ನಡೆಸಿದ ರೋಡ್‌ಶೋಗೆ ಅದ್ಭುತ ಜನಸ್ಪಂದನ ಮತ್ತು ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. 

ಅತ್ಯಂತ ಉತ್ಸಾಹದಿಂದ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಸ್ವಾಗತಿಸಿದರು. ಈ ಮೂಲಕ ಮಂಡ್ಯದಲ್ಲಿ ನರೇಂದ್ರ ಮೋದಿ ಅವರ ಬಗೆಗಿನ ಅಭಿಮಾನ, ವಿಶ್ವಾಸಗಳು ಅನಾವರಣಗೊಂಡಿವೆ ಎಂದರು. ವಿರೋಧ ಪಕ್ಷಗಳು ಮೋದಿ ಕುರಿತು ಮಂಡ್ಯದಲ್ಲಿ ವ್ಯಕ್ತವಾದ ಜನಬೆಂಬಲವನ್ನು ಗಮನಿಸಬೇಕಿತ್ತು. ದಶಪಥ ರಸ್ತೆ ನಿರ್ಮಾಣದಿಂದ ಈ ಭಾಗದ ಅನೇಕ ವರ್ಷಗಳ ಕನಸು ನನಸಾಗಿದೆ. ಕಾಲಮಿತಿಯಲ್ಲಿ ಕಾಮಗಾರಿ ಮುಗಿದು ಹೈವೇ ಲೋಕಾರ್ಪಣೆ ಆಗುತ್ತಿದೆ. ಮೋದಿ ಅವರ ನೇತೃತ್ವದಲ್ಲಿ ದೇಶವು ಸಮಗ್ರ ಅಭಿವೃದ್ಧಿ ಕಾಣುತ್ತಿದೆ ಎಂದರು.

Tap to resize

Latest Videos

ಅಭ್ಯರ್ಥಿ ಆಯ್ಕೆಗೆ ಮಾ.15ರಂದು ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ: ಖರ್ಗೆ, ಸೋನಿಯಾ, ರಾಹುಲ್‌ ನೇತೃತ್ವ

ಜೆಡಿಎಸ್‌ ಭದ್ರಕೋಟೆ ಮುಗಿದ ಅಧ್ಯಾಯ: ಮಂಡ್ಯ ಜಿಲ್ಲೆ ಜೆಡಿಎಸ್‌ ಭದ್ರಕೋಟೆ ಎಂಬುದು ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಮುಗಿದ ಆಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಭಾಗಗಳೂ ಸೇರಿದಂತೆ ಜಿಲ್ಲೆಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ. ಜೆಡಿಎಸ್‌ ಪಕ್ಷದ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇನ್ನೂ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವೆ ಹೊಂದಾಣಿಕೆಯಿಲ್ಲದ ಕಾರಣದಿಂದ ಬೇಸತ್ತ ಆ ಪಕ್ಷದ ಪ್ರಮುಖರು ನಮ್ಮ ಪಕ್ಷ ಸೇರುವ ತವಕದಲ್ಲಿದ್ದಾರೆ. 

ಆದರೆ, ಯಾರನ್ನ ಸೇರಿಸಿಕೊಳ್ಳಬೇಕು ಅಥವಾ ಯಾರನ್ನ ಸೇರಿಸಿಕೊಳ್ಳಬಾರದೆಂಬ ಯೋಚನೆ ಮಾಡುತ್ತಿದ್ದೇವೆ ಎಂದರು. ಸಭೆ ಸಮಾರಂಭಗಳಲ್ಲಿ ಸೇರಿಸುವ ಜನ ಸಂಖ್ಯೆಯ ಆಧಾರದಲ್ಲಿ ಪಕ್ಷದ ಟಿಕೆಟ್‌ ಕೊಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿಲ್ಲ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಈಗಾಗಲೇ 2 ಬಾರಿ ಸಮಿಕ್ಷೆ ನಡೆಸಲಾಗಿದೆ. ಈಗ 3ನೇ ಸಮಿಕ್ಷೆ ನಡೆಯುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾರ ಒತ್ತಡಕ್ಕೂ ಮಣಿದು ಟಿಕೆಟ್‌ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಿರುಗಿ ನೋಡದ ನಾರಾಯಣಗೌಡ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪಟ್ಟಣದ ಮುಖ್ಯ ರಸ್ತೆಯ ಮೂಲಕ ಟಿ.ಬಿ.ಬಡಾವಣೆ ತಲುಪಿ ಪ್ರವಾಸಿ ಮಂದಿರದ ಎದುರು ಕಾರ್ಯಕರ್ತರನ್ನು ಕುರಿತು ಸಚಿವ ಶ್ರೀನಿವಾಸ ಪೂಜಾರಿ ಮಾತನಾಡುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ನಾಗಮಂಗಲ ಮಾರ್ಗವಾಗಿ ಕೆ.ಆರ್‌.ಪೇಟೆ ಕಡೆಗೆ ತೆರಳಿದ ಸಚಿವ ಕೆ.ಸಿ.ನಾರಾಯಣಗೌಡರು ಕಾರ್ಯಕರ್ತರು ಕೈಬೀಸಿದರೂ ತಿರುಗಿ ನೋಡದಂತೆ ಕಾರಿನಲ್ಲಿ ತೆರಳಿದರು.

ಸಿದ್ದರಾಮಯ್ಯರಿಂದ ಬುರುಡೆ ಬಿಡುವ ಕೆಲಸ: ಸಿ.ಟಿ.ರವಿ ಆರೋಪ

ಸುಮಲತಾ ಯಾವುದೇ ಬೇಡಿಕೆ ಇಟ್ಟಿಲ್ಲ: ಸುಮಲತಾ ಅಂಬರಿಷ್‌ ಮಂಡ್ಯ ಜಿಲ್ಲೆಯ ಪಕ್ಷೇತರ ಸಂಸದರು. ಯಾವುದೇ ಪಕ್ಷ ಸೇರುವುದು ಅವರ ವೈಯಕ್ತಿಕ ವಿಚಾರ. ಬಿಜೆಪಿ ಸೇರುತ್ತಾರೆ ಎಂದು ಬೇರೆ ಪಕ್ಷಗಳಿಗೆ ಒತ್ತಡ ಹೇರುವ ತಂತ್ರಕ್ಕೆ ಮಣಿಯುವ ಇರಾದೆ ನಮಗಿಲ್ಲ. ಮೊದಲು ಸಂಸದರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿ. ಕ್ಷೇತ್ರ ಯಾವುದು ಅಂತ ಆನಂತರ ನೋಡೋಣ. ಆದರೆ, ಈ ವಿಷಯದಲ್ಲಿ ಸುಮಲತಾರವರು ನಮ್ಮಲ್ಲಿ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸುಮಲತಾ ಅಂಬರಿಷ್‌ ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದರು.

click me!