ನಮ್ಮಲ್ಲಿ ಅಭ್ಯರ್ಥಿ ಇಲ್ಲ ಅಂತೇನೂ ಹೊರಟ್ಟಿ ಕರೆತಂದಿಲ್ಲ: ಕಟೀಲ್‌

By Kannadaprabha News  |  First Published Jun 7, 2022, 10:40 AM IST

*  ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ

*  ನಮಗೆ ಕಳ್ಳವೋಟು, ಕ್ರಾಸ್‌ ವೋಟಿಂಗ್‌ ಮೇಲೆ ನಂಬಿಕೆ ಇಲ್ಲ

*  ಆದರೆ ನಮ್ಮ ಮೇಲೆ ವಿಶ್ವಾಸವಿಟ್ಟು ನಮಗೆ ಮತ ಚಲಾಯಿಸುವವರ ಮೇಲೆ ನಂಬಿಕೆ ಇದೆ


ಹುಬ್ಬಳ್ಳಿ(ಜೂ.07): ವಿಧಾನಪರಿಷತ್‌ ನಾಲ್ಕೂ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ. ನಮ್ಮಲ್ಲಿ ಅಭ್ಯರ್ಥಿ ಇಲ್ಲ ಅಂತೇನೂ ಹೊರಟ್ಟಿಅವರನ್ನು ಕರೆದುಕೊಂಡು ಬಂದಿಲ್ಲ. ಸಾಮಾನ್ಯ ಕಾರ್ಯಕರ್ತನನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸುವ ಶಕ್ತಿ ಪಕ್ಷಕ್ಕೆ ಇದೆ. ಆದರೆ ಹಿರಿಯರು, ಅನುಭವಿಗಳು ಪಕ್ಷದ ತತ್ವ-ಸಿದ್ಧಾಂತಕ್ಕೆ ಒಪ್ಪಿ ಬರುತ್ತೇವೆ ಎಂದಾಗ ಅವರಿಗೆ ಮನ್ನಣೆ ನೀಡಬೇಕಾಗುತ್ತದೆ. ಆ ಕೆಲಸವಾಗಿದೆ ಅಷ್ಟೇ ಎಂದು ಕಟೀಲ್‌ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಮಗೆ ಕಳ್ಳವೋಟು, ಕ್ರಾಸ್‌ ವೋಟಿಂಗ್‌ ಮೇಲೆ ನಂಬಿಕೆ ಇಲ್ಲ. ಆದರೆ ನಮ್ಮ ಮೇಲೆ ವಿಶ್ವಾಸವಿಟ್ಟು ನಮಗೆ ಮತ ಚಲಾಯಿಸುವವರ ಮೇಲೆ ನಂಬಿಕೆ ಇದೆ ಎಂದರು. ನಮ್ಮ ತಂತ್ರಗಾರಿಕೆ ಏನೆಂಬುದನ್ನು ಕಾದು ನೋಡಿ. ಸದ್ಯಕ್ಕೆ ನಮ್ಮ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದಷ್ಟೇ ಹೇಳಬಹುದು ಎಂದರು.

Tap to resize

Latest Videos

ಕರ್ನಾಟಕದಲ್ಲಿ ವೈಷಮ್ಯ ಹಬ್ಬಿಸುವ ಸಿದ್ದರಾಮಯ್ಯ: ನಳಿನ್‌ ಕುಮಾರ್‌ ಕಟೀಲ್‌

ಹೊರಟ್ಟಿ ಅವರು ಹಿರಿಯರು, ವಿಧಾನಪರಿಷತ್‌ನಲ್ಲಿ ಅವರು ನಮ್ಮೊಂದಿಗೆ ಇದ್ದರೆ ದೊಡ್ಡ ಶಕ್ತಿಯಾಗುತ್ತದೆ ಎಂದರು.

ಸಚಿವ ನಾಗೇಶ್‌ ನಿವಾಸ ಮೇಲೆ ಕಾಂಗ್ರೆಸ್‌ ದಾಳಿ: ಬಿಜೆಪಿ ಕಾರ್ಯಕರ್ತರೂ ಸುಮ್ಮನಿರಲ್ಲ: ಕಟೀಲ್‌

ಮಂಗಳೂರು: ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ನಿವಾಸದ ಮೇಲೆ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಬುಧವಾರ ದಾಳಿ ನಡೆಸಿ ದಾಂಧಲೆ ನಡೆಸಿದ್ದಾರೆ. ಇದು ಕಾಂಗ್ರೆಸ್‌ನ ಗೂಂಡಾ ಪ್ರವೃತ್ತಿಯನ್ನು ತೋರಿಸುತ್ತದೆ. ಇದು ಹೀಗೆಯೇ ಮುಂದುವರಿದರೆ ಮುಂದೆ ಬಿಜೆಪಿ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಜೂ.01 ರಂದು ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮಾಡಿದ ಕೆಲಸವನ್ನು ವಿರೋಧಿಸುವ ಮತ್ತು ಆಂದೋಲನ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಆಂದೋಲನವನ್ನು ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ. ಇದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್‌ನ ಈ ರೀತಿಯ ಗೂಂಡಾ ಪ್ರವೃತ್ತಿಯನ್ನು ನೋಡಿಯೇ ಜನ ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಇದೀಗ ಸಚಿವರ ನಿವಾಸದ ಮೇಲೆ ದಾಳಿ ಮಾಡುವುದರ ಮೂಲಕ ಮತ್ತೊಮ್ಮೆ ತಾನು ಗೂಂಡಾ ಪಕ್ಷ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

MLC Election: ಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ: ಕಟೀಲ್‌

ಈ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರವಾಗಿದೆ. ಬೆಂಗಳೂರು ಅಲ್ಲದೆ ರಾಜ್ಯದ ಇತರ ಭಾಗಗಳಿಂದಲೂ ದಾಳಿ ನಡೆಸಲು ಕಾರ್ಯಕರ್ತರು ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್‌ ಈ ರೀತಿಯ ಕೃತ್ಯಕ್ಕೆ ಇಳಿದಿದೆ. ಜನ ನಿಮ್ಮ ವರ್ತನೆಗೆ ತಕ್ಕ ಉತ್ತರ ನೀಡಲಿದ್ದಾರೆ. ಮುಂದೆ ಈ ತೀತಿಯ ಬೆಳವಣಿಗೆ ಮುಂದುವರಿದರೆ ನಮ್ಮ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸಮಗ್ರ ತನಿಖೆಗೆ ಸೂಚನೆ: 

ಸಚಿವರ ನಿವಾಸದ ಮೇಲೆ ನಡೆದ ದಾಳಿ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕು. ಈಗಾಗಲೇ ದಾಳಿ ನಡೆಸಿದ 15 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವರನ್ನು ಅಭಿನಂದಿಸುತ್ತೇನೆ. ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಳಿನ್‌ ಕುಮಾರ್‌ ಮನವಿ ಮಾಡಿದರು.


 

click me!