ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ. ಇಡೀ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೆ ಇಟ್ಟು ಬಿಡಲಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.
ಮೈಸೂರು (ಜ.05): ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ. ಇಡೀ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೆ ಇಟ್ಟು ಬಿಡಲಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು. ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡುವ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಮಹಾರಾಜರ ಮನೆತನಕ್ಕೆ ಸರ್ಕಾರ ಯಾಕೆ ಅಪಮಾನ ಮಾಡ್ತಿದೆ? ಸಿಎಂ ಈ ವಿಚಾರದಲ್ಲಿ ಜಾಣ ಮೌನದಲ್ಲಿದ್ದಾರೆ. ತಮ್ಮ ಬೆಂಬಲಿಗರ ಛೂಬಿಟ್ಟು ರಸ್ತೆಗೆ ತಮ್ಮ ಹೆಸರಿಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿಗೆ ನನ್ನ ಅವಧಿಯಲ್ಲೂ ಬಹಳ ಕೊಡುಗೆ ಕೊಟ್ಟಿದ್ದೇನೆ. ಹಾಗಂತ ನನ್ನ ಹೆಸರಿಡಿ ಎಂದು ಕೇಳಲು ಆಗುತ್ತಾ? ಈ ಹೆಸರಿನ ರಾಜಕಾರಣವನ್ನು ಸಿದ್ದರಾಮಯ್ಯ ಕೈ ಬಿಡಬೇಕು ಎಂದರು. ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸರ್ಕಾರ. ಸರ್ಕಾರ ನಡೆಸುವವರಿಗೆ ನೈತಿಕತೆಯೇ ಇಲ್ಲ. ಭ್ರಷ್ಟಾಚಾರ ಎಲ್ಲಾ ಕಡೆಯೂ ತಾಂಡವ ಆಡುತ್ತಿದೆ. ಅಮಾಯಕರು ಮೃತಪಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಐದು ವರ್ಷವೂ ನಾನೇ ಸಿಎಂ ಆಗಿ ಇರ್ತಿನಿ ಅನ್ನೋ ರೀತಿ ಮಾತಾಡ್ತಿದ್ದಾರೆ. ಅದು ಅವರ ಪಕ್ಷದ ವಿಚಾರ. ನಾವು ಸುಮ್ಮನೆ ಎಲ್ಲವನ್ನೂ ನೋಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಆಪರೇಷನ್ ಹಸ್ತದ ಮೂಲಕ ಜೆಡಿಎಸ್ ಶಾಸಕರನ್ನು ಸೆಳೆಯುವ ಷಡ್ಯಂತ್ರ: ಎಚ್‌ಡಿಕೆ
ನಾಯಕರ ಕನಸು ನನಸಾಗದು: ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದ ಸಾರಾ ಕನ್ವೆನ್ಷನ್ಹಾಲ್ನಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ಕಾರ್ಯಕರ್ತರ ಶ್ರಮದಿಂದ ಉಳಿದಿದ್ದು, ಫೀನಿಕ್ಸ್ಪಕ್ಷಿಯಂತೆ ಮೇಲೇಳುವ ಶಕ್ತಿ ಇದೆ. ಈಗ ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ನೋಂದಾಯಿಸುವ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗೋಣ ಎಂದರು.
ಪಕ್ಷ ಸಂಘಟನೆ ಸರಿ ಇದ್ದರೆ ನಾವು ಯಾವುದೇ ಚುನಾವಣೆಯಾದರೂ ಗೆಲ್ಲಬಹುದು. ನಮ್ಮ ಪಕ್ಷ ಬಲವಾಗಿದ್ದರೆ ರೈತರಿಗೆ ಅನುಕೂಲವಾಗುತ್ತದೆ. ಎಲ್ಲಾ ಸಮಾಜವನ್ನು ಒಟ್ಟಿಗೆ ಕರೆದೊಯ್ಯುವ ಶಕ್ತಿ ಪಕ್ಷಕ್ಕಿದೆ. ದೇವೇಗೌಡರ ಪರಿಶ್ರಮ ಮತ್ತು ದೂರದೃಷ್ಟಿಯ ಫಲವಾಗಿ ಜೆಡಿಎಸ್ಇಂದಿಗೂ ಸಶಕ್ತವಾಗಿದೆ. ಅಂಬೇಡ್ಕರ್ಅವರ ಆಶಯದಂತೆ ಎಲ್ಲಾ ಸಮುದಾಯದ ನಾಯಕರನ್ನೂ ಬೆಳೆಸಿದರು. ಅದನ್ನು ಸ್ಮರಿಸುವ ಹೃದಯ ವೈಶಾಲ್ಯತೆ ಅನೇಕರಿಗೆ ಇಲ್ಲ ಎಂದು ಅವರು ಟೀಕಿಸಿದರು. ನಾಯಕ ಸಮುದಾಯಕ್ಕೆ ಮೀಸಲಾತಿ ನೀಡುವಾಗ ದೇವೆಗೌಡರ ಕೊಡುಗೆ ದೊಡ್ಡದು. ಚಂದ್ರಶೇಖರ್ ಅವರು ಮಂತ್ರಿ ಮಾಡುತ್ತೇನೆ. ನನಗೆ ಮಂತ್ರಿ ಸ್ಥಾನ ಬೇಡ. ಅದರ ಬದಲಿಗೆ ನಾಯಕ ಸವಾಜವನ್ನು ಪ.ಪ್ರವರ್ಗಕ್ಕೆ ಸೇರಿಸಿ ಎಂದು ಕೇಳಿದರು. ಅವರ ಒತ್ತಾಯದ ಮೇರೆಗೆ ಇವತ್ತು ನಾಯಕ ಸಮಾಜ ಎಸ್ಟಿ ಪ್ರವರ್ಗದಲ್ಲಿದೆ. ಅಷ್ಟೇ ಅಲ್ಲ, ಆ ಸಮುದಾಯದ ಮಠ ಕಟ್ಟಬೇಕಾದರೆ ಅವರ ಕೊಡುಗೆ ಇದೆ ಎಂದು ಅವರು ಮಾಹಿತಿ ನೀಡಿದರು.
ಮುಂದೆ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕೇವಲ ಐದು ಗ್ಯಾರಂಟಿ ಕೊಟ್ಟು ಜನರ ಮೇಲೆ ಸರ್ಕಾರ ಬೆಲೆಯ ಬರೆ ಎಳೆಯುತ್ತಿದೆ. ಇಂದು ಮಧ್ಯರಾತ್ರಿಯಿಂದ ಬಸ್ ದರ ಶೇ. 15ರಷ್ಟು ಹೆಚ್ಚಾಗುತ್ತಿದೆ. ಕಾಂಗ್ರೆಸ್ ನವರಿಗೆ ಮಧ್ಯರಾತ್ರಿ ಎಂದರೆ ಬಹಳ ಇಷ್ಟ. ದರದ ಮೇಲೆ ದರ ಏರಿಸುತ್ತಾ ಹೋದರೆ 2 ಸಾವಿರ ಕೊಡುವುದು ದೊಡ್ಡ ವಿಷಯವೇ? ನಾನೇ ಸಿಎಂ ಆಗಿದ್ದಿದ್ದರೆ 2 ಸಾವಿರ ಬದಲು 5 ಸಾವಿರ ಕೊಡುತ್ತಿದ್ದೆ ಎಂದು ಅವರು ವಾಗ್ದಾಳಿ ನಡೆಸಿದರು. ಮುಂದಿನ ದಿನಗಳಲ್ಲಿ ನಮಗೆ ಒಳ್ಳೆಯ ಭವಿಷ್ಯವಿದೆ. ನಾವು ನಿರಾಶರಾಗಬೇಕಿಲ್ಲ. ಪಕ್ಷ ಕಟ್ಟೋಣ, ಮಿತ್ರಪಕ್ಷ ಬಿಜೆಪಿ ಜತೆ ಸೇರಿ ಅಧಿಕಾರಕ್ಕೆ ಬರುತ್ತೇವೆ. ಇಡೀ ದೇಶದಲ್ಲಿಯೇ ರಾಜ್ಯದಲ್ಲಿನ ಕಾಂಗ್ರೆಸ್ಸರ್ಕಾರದಂತ ಕೆಟ್ಟ ಸರ್ಕಾರವನ್ನು ನೋಡಲಿಲ್ಲ. ರಾಜ್ಯ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಐದು ಪರ್ಸೆಂಟ್, ಹತ್ತು ಪರ್ಸೆಂಟ್ಕಮಿಷನ್ಗೆ ಒತ್ತಡ ಹಾಕಲಾಗುತ್ತಿದೆ ಎಂದರು.