ನಟಿ ರನ್ಯಾ ರಾವ್‌ ಜೊತೆ ನಂಟು ಹೊಂದಿರುವ ಸಚಿವರ ಹೆಸರು ಹೇಳಿ: ಪ್ರತಿಪಕ್ಷ

Published : Mar 11, 2025, 06:33 AM ISTUpdated : Mar 11, 2025, 07:41 AM IST
ನಟಿ ರನ್ಯಾ ರಾವ್‌ ಜೊತೆ ನಂಟು ಹೊಂದಿರುವ ಸಚಿವರ ಹೆಸರು ಹೇಳಿ: ಪ್ರತಿಪಕ್ಷ

ಸಾರಾಂಶ

ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.   

ವಿಧಾನಸಭೆ (ಮಾ.11): ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ. ಸೋಮವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಅವರು, ರಾಜ್ಯ ಸರ್ಕಾರ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. 

ಇದು ಅಂತಾರಾಷ್ಟ್ರೀಯ ಚಿನ್ನ ಸಾಗಾಟ ಪ್ರಕರಣವಾಗಿದೆ. 14 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂಬ ಸುದ್ದಿ ಇದೆ. ಇದರ ಹಿಂದೆ ಹವಾಲಾ ದಂಧೆ ಇದೆ ಎಂಬ ಅನುಮಾನ ಇದೆ. ಬೇರೆ ಬೇರೆ ರಾಜ್ಯಗಳಿಗೆ ಅಕ್ರಮ ಚಿನ್ನ ಸಾಗಾಟದಲ್ಲಿ ಬೆಂಗಳೂರು ಕೇಂದ್ರ ಆಗಿದೆಯೇ? ಎಂಬ ಅನುಮಾನ ಇದೆ. ಅಲ್ಲದೇ, ಪ್ರಕರಣದಲ್ಲಿ ಸಚಿವರ ಕೈವಾಡ ಇದೆ ಎಂಬ ಆರೋಪ ಇದೆ. ಪ್ರಭಾವಿ ವ್ಯಕ್ತಿಗಳು ಯಾರು ಎಂಬುದು ಬಹಿರಂಗವಾಗಬೇಕು ಎಂದರು. 

ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಕೇಂದ್ರದ ತನಿಖಾ ಸಂಸ್ಥೆಯಿಂದ ನಟಿ ರನ್ಯಾರಾವ್‌ ಬಂಧನಕ್ಕೊಳಗಾಗಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ನೀಡಲ್ಲ. ಮಾಧ್ಯಮಗಳಲ್ಲಿ ಬಂದಿದ್ದನ್ನು ಮಾತ್ರ ಗಮನಿಸಿದ್ದೇವೆ. ಸಿಬಿಐ ಈಗ ತನಿಖೆ ಕೈಗೊಂಡಿದೆ. ಯಾರ ಕೈವಾಡ ಇದೆ ಎಂಬುದನ್ನು ಸಿಬಿಐ ಹೇಳಬೇಕು ಎಂದರು. ವಿಮಾನ ನಿಲ್ದಾಣದ ಬಳಿ ಆಕೆಗೆ ರಾಜ್ಯ ಪೊಲೀಸ್‌ ವಾಹನ ಬೆಂಗಾವಲು ನೀಡಿದ್ದು ಎಂಬ ಮಾಹಿತಿ ಇದ್ದು, ಆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಯಾರು ಗೊತ್ತಾ ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ? ಬೆಂಗಳೂರಿನ ಈ ಪ್ರಸಿದ್ದ ಬಾರ್‌ ಡಿಸೈನ್‌ ಮಾಡಿದ್ದು ಇವರೇ..

ಕಾಂಗ್ರೆಸ್‌ನ ಒಂದು ಬಣದಿಂದ ಚಿನ್ನ ಸ್ಮಗ್ಲಿಂಗ್‌ ಮಾಹಿತಿ ಲೀಕ್‌?: ನಟಿ ರನ್ಯಾ ತಂಡದ ಚಿನ್ನ ಕಳ್ಳ ಸಾಗಾಣಿಕೆ ಕೃತ್ಯದ ಮಾಹಿತಿಯನ್ನು ಕಂದಾಯ ಜಾರಿನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳಿಗೆ ಆಕೆಯ ಪತಿ ಹಾಗೂ ಕಾಂಗ್ರೆಸ್ ಪಕ್ಷದ ಒಂದು ಬಣವೇ ಸೋರಿಕೆ ಮಾಡಿದೆ ಎನ್ನಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಜತೆ ಮುನಿಸಿಕೊಂಡು ದೂರವಾಗಿದ್ದ ರನ್ಯಾಳ ಪತಿ ಜತಿನ್ ಹುಕ್ಕೇರಿ ಅಥವಾ ಸಚಿವರೊಬ್ಬರಿಗೆ ಬ್ರೇಕ್ ಹಾಕುವ ಸಲುವಾಗಿ ಚಿನ್ನ ಸಾಗಾಣಿಕೆ ಬಗ್ಗೆ ಡಿಆರ್‌ಐ ಅಧಿಕಾರಿಗೆ ಆ ಸಚಿವರ ರಾಜಕೀಯ ವಿರೋಧಿ ಗುಂಪಿನ ಪ್ರಭಾವಿ ಮಾಹಿತಿ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ