ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

Published : Apr 21, 2024, 12:58 PM IST
ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವಿವಿಧ ವಲಯಗಳಲ್ಲಿ ಅನುಷ್ಠಾನಗೊಂಡ ಕ್ರಾಂತಿಕಾರಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು (ಏ.21): ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವಿವಿಧ ವಲಯಗಳಲ್ಲಿ ಅನುಷ್ಠಾನಗೊಂಡ ಕ್ರಾಂತಿಕಾರಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹತ್ತು ವರ್ಷಗಳ ಹಿಂದೆ ಎಲ್ಲೆಡೆ ತುಂಬಿ ತುಳುಕುತ್ತಿದ್ದ ಭ್ರಷ್ಟಾಚಾರ ತೊಲಗಿ, ಪಾರದರ್ಶಕ, ಸ್ವಚ್ಚ, ಅಭಿವೃದ್ಧಿಯ ಆಡಳಿತಕ್ಕೆ ಮೋದಿ ಅವರು ಮುನ್ನುಡಿ ಬರೆದಿದ್ದಾರೆ ಎಂದರು.

ಸ್ವಚ್ಛತೆ ಸರ್ಕಾರಿ ಕೆಲಸದ ಭಾಗವಲ್ಲ ಎಂಬ ಧೋರಣೆಯಿದ್ದ ಕಾಲವೊಂದಿತ್ತು. ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಕೂಡಲೇ ಸ್ವಚ್ಛತೆಯೇ ದೇವರು ಎಂದು ಭಾವಿಸಿ ಸ್ವಚ್ಛ ಭಾರತ್‌ ಮಿಷನ್‌ ಆರಂಭಿಸಿದರು. ಈ ಯೋಜನೆಯಡಿ ದೇಶದಲ್ಲಿ 12 ಕೋಟಿ ಶೌಚಾಲಯಗಳು ನಿರ್ಮಾಣಗೊಂಡಿವೆ. 4,650 ನಗರಗಳು ಬಯಲು ಶೌಚ್ಛ ಮುಕ್ತಗೊಂಡಿವೆ. ಶೌಚಾಲಯಗಳಿಂದ ನೆರೆಹೊರೆಯಲ್ಲಿ ಸ್ವಚ್ಛ ಪರಿಸರ ಸಾಧ್ಯವಾಗಿದ್ದು, ಮಹಿಳೆಯರು ಗೌರವ ಮತ್ತು ಘನತೆ ಕಾಪಾಡಿಕೊಳ್ಳಲು ಸಾಧ್ಯವಾಗಿದೆ. ಈ ಯೋಜನೆಯಡಿ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳಲ್ಲೂ ಸ್ಚಚ್ಛತಾ ಕಾರ್ಯಗಳು ಯಶಸ್ವಿಯಾಗಿ ಮುಂದುವರೆದಿವೆ ಎಂದು ವಿವರಿಸಿದರು.

ಬಿಜೆಪಿ ಸುಳ್ಳು ಗ್ಯಾರೆಂಟಿಗೆ ವಾರೆಂಟಿ ಇಲ್ಲ: ಮಧು ಬಂಗಾರಪ್ಪ ಲೇವಡಿ

ಸರ್ವರಿಗೂ ಆರೋಗ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಐದು ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ವೆಚ್ಚ ಭರಿಸುವ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ಇದೀಗ 70 ವರ್ಷ ಮೇಲ್ಪಟ್ಟವರಿಗೂ ವಿಸ್ತರಿಸಲಾಗಿದೆ. ಆರೋಗ್ಯ ರಕ್ಷಣೆ ವ್ಯವಸ್ಥೆಯಲ್ಲಿ ಅರ್ಹ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಜಾರಿಗೆ ತಂದಿರುವ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 58 ಕೋಟಿ ಖಾತೆಗಳು ನೋಂದಣಿಯಾಗಿವೆ. ಇ-ಸಂಜೀವಿನಿ ಯೋಜನೆ ಮೂಲಕ 22 ಕೋಟಿಗೂ ಅಧಿಕ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿಸಿದರು.

ಇಡೀ ವಿಶ್ವದಲ್ಲೇ ಅತಿದೊಡ್ಡ ರೈಲ್ವೆ ಜಾಲವನ್ನು ಹೊಂದಿರುವ ಭಾರತೀಯ ರೈಲ್ವೆಯಲ್ಲಿ ಮಹತ್ವದ ಸುಧಾರಣೆಗಳನ್ನು ಮಾಡಲಾಗಿದೆ. ಗಂಟೆಗಟ್ಟಲೆ, ದಿನಗಟ್ಟಲೆ ರೈಲುಗಳಿಗೆ ಕಾಯಬೇಕಾದ ಕಾಲವಿತ್ತು. ರೈಲು ನಿಲ್ದಾಣಗಳಲ್ಲಿ ಮೂಗು ಮುಚ್ಚಿಕೊಳ್ಳಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಆ ಪರಿಸ್ಥಿತಿಯಿಲ್ಲ. ಹೆಚ್ಚಿನ ಸಂಖ್ಯೆ ಹೊಸ ರೈಲುಗಳು, ಹೊಸ ರೈಲು ಮಾರ್ಗಗಳು ಆರಂಭಗೊಂಡಿವೆ. ಇದುವರೆಗೂ ರೈಲು ಸೌಲಭ್ಯವನ್ನೇ ಕಾಣದ, ದುರ್ಗಮ ಪ್ರದೇಶಗಳಲ್ಲಿಯೂ ಕೂಡ ರೈಲು ಮಾರ್ಗಗಳನ್ನು ಆರಂಭಿಸಲಾಗಿದೆ ಎಂದರು.

ಪಿಕ್ ಪಾಕೆಟ್ ಕಲೆ ಕಾಂಗ್ರೆಸ್‌ಗೆ ಮಾತ್ರ ಗೊತ್ತು: ಸಿ.ಟಿ.ರವಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದರಿಂದ, ಕಳೆದ ಹತ್ತು ವರ್ಷಗಳಲ್ಲಿ ಬಾಹ್ಯಾಕಾಶ ವಲಯದಲ್ಲಿ ಅನೇಕ ಯೋಜನೆಗಳು ಯಶಸ್ವಿಯಾಗಿ ನಡೆದಿವೆ. ಚಂದ್ರಯಾನ 3 ನೌಕೆಯನ್ನು ಇಸ್ರೋ, ಯಶಸ್ವಿಯಾಗಿ ಚಂದ್ರನ ದಕ್ಷಿಣ ತುದಿಗೆ ಇಳಿಸುವುದರ ಮೂಲಕ ಭಾರತ ಈ ಸಾಧನೆ ಮಾಡಿದ ಮೊದಲ ರಾಷ್ಟ್ರವೆನಿಸಿತು. ಒಂದೇ ಬಾರಿ 104 ಉಪಗ್ರಹಗಳನ್ನು ಉಡಾವಣೆ ಮಾಡಿದ ಸಾಧನೆಯ ಕೀರ್ತಿಯೂ ಭಾರತಕ್ಕಿದೆ. ವಿದೇಶಗಳು ಇಂದು ತಮ್ಮ ಉಪಗ್ರಹಗಳನ್ನು ಇಸ್ರೋ ಮೂಲಕ ಉಡಾಯಿಸಲು ಸಾಲುಗಟ್ಟಿ ನಿಂತಿವೆ ಎಂದು ತೇಜಸ್ವೀ ಸೂರ್ಯ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್